AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭೂಕುಸಿತ ಆತಂಕ; ಇಂದು ಮತ್ತು ನಾಳೆ ರಾತ್ರಿ ವಾಹನ ಸಂಚಾರ ನಿಷೇಧ

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭೂಕುಸಿತದ ಆತಂಕ ಹಿನ್ನೆಲೆ ಇಂದು ಮತ್ತು ನಾಳೆ ರಾತ್ರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಆದೇಶ ಹೊರಡಿದ್ದಾರೆ.

ಕೊಡಗು: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭೂಕುಸಿತ ಆತಂಕ; ಇಂದು ಮತ್ತು ನಾಳೆ ರಾತ್ರಿ ವಾಹನ ಸಂಚಾರ ನಿಷೇಧ
ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭೂಕುಸಿತ
TV9 Web
| Updated By: ವಿವೇಕ ಬಿರಾದಾರ|

Updated on:Aug 10, 2022 | 8:46 PM

Share

ಕೊಡಗು: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭೂಕುಸಿತದ ಆತಂಕ ಹಿನ್ನೆಲೆ ಇಂದು ಮತ್ತು ನಾಳೆ ರಾತ್ರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಆದೇಶ ಹೊರಡಿದ್ದಾರೆ. ರಾತ್ರಿ 9 ರಿಂದ ಬೆಳಗ್ಗೆ 6.30ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಮದೆನಾಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಬಿರುಕು ಬಿಟ್ಟಿದೆ.  ಈ ಸಂಬಂಧ ಮಡಕೇರಿಯಿಂದ ಮಂಗಳೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಂಚಾರ ನಿಷೇಧಿಸಲಾಗಿದೆ. ಕೊಡಗು ಜಿಲ್ಲಾಡಳಿತ ನಿನ್ನೆಯೂ (ಆಗಸ್ಟ್ 9) ರಂದು ಕೂಡ ಸಂಚಾರ ನಿರ್ಬಂಧಿಸಿತ್ತು.

ಬೆಳಗಾವಿ ಜಿಲ್ಲೆಯಲ್ಲಿ ಮುಂದುವರಿದ ಮಳೆ ಅವಾಂತರ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದ್ದು, ಚಿಕ್ಕೋಡಿ ಉಪವಿಭಾಗದ ಮತ್ತೊಂದು ಸೇತುವೆ ಜಲಾವೃತಗೊಂಡಿದೆ. ಚಿಕ್ಕೋಡಿ ಉಪವಿಭಾಗದ ಒಟ್ಟು 11 ಸೇತುವೆಗಳು ಜಲಾವೃತಗೊಂಡಿವೆ. ರಾಯಬಾಗ ತಾಲೂಕಿನ ಕರ್ನಾಟಕ-ಮಹಾರಾಷ್ಟ್ರ ಸಂಪರ್ಕ ಕಲ್ಪಿಸುವ ಕುಡಚಿ-ಉಗಾರ ಸೇತುವೆ ಜಲಾವೃತಗೊಂಡಿದೆ.  ಸೇತುವೆ ಬಳಿ ಯಾರೂ ಹೋಗದಂತೆ ಬ್ಯಾರಿಕೇಡ್​ ಅಳವಡಿಕೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿಅಧಿಕ ಮಳೆಯಾಗುತ್ತಿದ್ದು,  ಕೃಷ್ಣಾ ನದಿ ತುಂಬಿ ಹರಿಯುತ್ತಿದೆ.

ಹಾವೇರಿ ಜಿಲ್ಲೆಯಲ್ಲಿ ತುಂಬಿ ಹರಿಯುತ್ತಿರುವ ನದಿಗಳು; ಜಲಾವೃತಗೊಂಡ ನೂರಾರು ಎಕರೆ ಜಮೀನು

ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಹರಿಯವ ಕುಮುದ್ವತಿ, ವರದಾ, ತುಂಗಭದ್ರಾ ಮತ್ತು ಧರ್ಮಾ ನದಿಗಳು ತುಂಬಿ ಹರಿಯುತ್ತಿದ್ದು, ಇದರಿಂದ ನದಿ ಪಾತ್ರಗಳ ಅಕ್ಕಪಕ್ಕದ ನೂರಾರು ಎಕರೆ ಜಮೀನುಗಳಿಗೆ ನೀರು ನುಗ್ಗಿದೆ. ಇದರಿಂದ ಮೆಕ್ಕೆಜೋಳ, ಹತ್ತಿ, ಸೋಯಾಬಿನ್, ಶೇಂಗಾ, ಕಬ್ಬು ಸೇರಿದಂತೆ ಹಲವು ಬೆಳೆಗಳು ಜಲಾವೃತಗೊಂಡಿವೆ.

ಹಾವೇರಿ ತಾಲೂಕಿನ ಕರ್ಜಗಿ, ರಾಮಾಪುರ, ರಟ್ಟೀಹಳ್ಳಿ ತಾಲೂಕಿನ ಕುಡುಪಲಿ, ಕೂಲಿ, ಬಡಸಂಗಾಪುರ, ರಾಣೆಬೆನ್ನೂರು ತಾಲೂಕಿನ ಲಿಂಗದಹಳ್ಳಿ, ಮಾಕನೂರು, ಹಾನಗಲ್ ತಾಲೂಕಿನ ಕೂಡಲ ಸವಣೂರು ತಾಲೂಕಿನ ಕುಣಿಮೆಳ್ಳಿಹಳ್ಳಿ, ಹಲಸೂರು ಸೇರಿದಂತೆ ಹಲವು ಗ್ರಾಮಗಳ ರೈತರ ಜಮೀನಿಗೆ ನೀರು ನುಗ್ಗಿದೆ. ಇದರಿಂದ ರೈತರು ಕಂಗಾಲಾಗಿದ್ದು, ಕೈ ಬಂದ ತುತ್ತು ಬಾಯಿಗೆ ಬರದಂತಗಿದೆ.

ಹಾಸನ ಜಿಲ್ಲೆಯಲ್ಲಿ ಮುಂದುವರಿದ ಮಳೆ; ಮನೆ ಕುಸಿತ

ಹಾಸನ: ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಧಾರಾಕಾರ ಮಳೆಯಿಂದ ಅರಕಲಗೂಡು ತಾಲೂಕಿನ ಕಾರ್ಗಲ್ಲು ಗ್ರಾಮದಲ್ಲಿ ಮನೆ ಕುಸಿತಗೊಂಡಿದೆ. ನಿನ್ನೆ (ಆಗಸ್ಟ್ 9) ರಾತ್ರಿ ಸುರಿದ ಮಳೆಗೆ ಕೃಷ್ಣೇಗೌಡ ಎಂಬುವರ ಮನೆ ಕುಸಿತಗೊಂಡಿದೆ.

ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳೆಲ್ಲಾ ಸಂಪೂರ್ಣ ಹಾನಿಯಾಗಿವೆ. ಕೊಣನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದ ಮನೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರಿದಿದ್ದು, ಬಿರುಗಾಳಿ ಸಹಿತ ಮಳೆಗೆ ಮೂಡಿಗೆರೆ ತಾಲೂಕಿನ ಭಿನ್ನಡಿ ಗ್ರಾಮದಲ್ಲಿ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದೆ. ಗ್ರಾಮದ ಸಂದೇಶ್ ಎಂಬುವರಿಗೆ ಸೇರಿದ ಮನೆ ಕುಸಿತಗೊಂಡಿದೆ.

ಅದೇ ರೀತಿ ಮೂಡಿಗೆರೆ ತಾಲ್ಲೂಕಿನ ಹಾರ್ಮಕ್ಕಿ ಗ್ರಾಮದಲ್ಲೂ ಮನೆ ಗೋಡೆಗಳು ಕುಸಿದು ಬಿದ್ದಿವೆ. ಭೈರೇಗೌಡ ಎಂಬುವರಿಗೆ ಸೇರಿದ ಮನೆಗೆ ಹಾನಿಯಾಗಿದೆ. ಭಾರಿ ಮಳೆಯಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

Published On - 7:51 pm, Wed, 10 August 22