AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿ; ಹಾಸನದಲ್ಲಿ ನಾಲ್ವರ ಮೇಲೆ‌ ಚಿರತೆ ದಾಳಿ

ಕರ್ನಾಟಕದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ಹೆಚ್ಚುತ್ತಿವೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿಯಾಗಿದ್ದಾರೆ. ಮತ್ತೊಂದೆಡೆ ಹಾಸನದಲ್ಲಿ ಚಿರತೆ ದಾಳಿಗೆ ನಾಲ್ವರು ಗಾಯಗೊಂಡಿದ್ದಾರೆ. ಅರಣ್ಯ ಇಲಾಖೆ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದ್ದು, ಕಾಡುಪ್ರಾಣಿಗಳ ಉಪಟಳದಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.

ಪ್ರತ್ಯೇಕ ಘಟನೆ: ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿ; ಹಾಸನದಲ್ಲಿ ನಾಲ್ವರ ಮೇಲೆ‌ ಚಿರತೆ ದಾಳಿ
ಕಾಡಾನೆ, ಚಿರತೆ Image Credit source: Getty images
Gopal AS
| Edited By: |

Updated on: Jun 05, 2026 | 3:20 PM

Share

ಕೊಡಗು, ಜೂನ್​​ 05: ಕಾಡಾನೆ (Elephant) ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೋಣನಕಟ್ಟೆಯಲ್ಲಿ ನಡೆದಿದೆ. ಆ ಮೂಲಕ ಕಾಡಾನೆ ದಾಳಿಗೆ ಮತ್ತೊಂದು ಬಲಿ ಆಗಿದೆ. ನಿವೃತ್ತ ಐಜಿಪಿ ಅಣ್ಣಳಮಾಡ ಸುನೀಲ್ ಅಚ್ಚಯ್ಯ ಪತ್ನಿ ಸಂಧ್ಯಾ(60) ಮೃತ ದುರ್ದೈವಿ. ನಿನ್ನೆಯಷ್ಟೇ ಸಂಧ್ಯಾ ಕುಟುಂಬ ದೆಹಲಿಯಿಂದ‌ ಸ್ವಗ್ರಾಮಕ್ಕೆ ಬಂದಿದ್ದರು.

ನಡೆದಿದ್ದೇನು?

ಬೆಳಗ್ಗೆ 9 ಗಂಟೆಗೆ ತಮ್ಮ ಸ್ವಂತ ಎಸ್ಟೇಟ್​ಗೆ ತೆರಳಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಗಾಯಗೊಂಡ ಸಂಧ್ಯಾರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾರ್ಮಿಕರಿಗೂ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾಸನದಲ್ಲಿ ನಾಲ್ವರ ಮೇಲೆ‌ ಚಿರತೆ ದಾಳಿ‌

ಇನ್ನು ಹಾಸನ ಹೊಳೆನರಸೀಪುರ ತಾಲೂಕಿನ ಅಂಕವಳ್ಳಿಯಲ್ಲಿ ನಾಲ್ವರ ಮೇಲೆ‌ ಚಿರತೆ ದಾಳಿ‌ ಮಾಡಿದೆ. ಬೆಳಿಗ್ಗೆ ಜಮೀನಿನಲ್ಲಿ ಕೆಲಸಕ್ಕೆ ತೆರಳಿದ್ದ ವೇಳೆ ಏಕಾಏಕಿ ಚಿರತೆ ದಾಳಿ ಮಾಡಿದೆ. ಗ್ರಾಮದ ರೈತ ನವೀನ್(40), ನಾಗರಾಜ್(55) ಮತ್ತು ಜಯಮ್ಮ(70) ಮೇಲೆ ದಾಳಿ ಮಾಡಿದ್ದು, ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳು ರೈತರನ್ನು ಹೊಳೆನರಸೀಪುರ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ದುಬಾರೆಯಲ್ಲಿ ಪ್ರವಾಸಿ ಮಹಿಳೆ ಮತ್ತು ಆನೆ ಸಾವು ಪ್ರಕರಣ: ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದ ಅರಣ್ಯ ಇಲಾಖೆ!

ಗ್ರಾಮದಲ್ಲಿ ಚಿರತೆ ಇರುವ ಬಗ್ಗೆ ಮಾಹಿತಿ ನೀಡಿದ್ದರು ಅರಣ್ಯ ಇಲಾಖೆ ನಿರ್ಲಕ್ಷಿಸಿರುವ ಆರೋಪ ಕೇಳಿಬಂದಿದೆ. ಸದ್ಯ ರೈತರು ಜಮೀನು ಕೆಲಸಕ್ಕೆ ತೆರಳಲು ರೈತರಿಗೆ ಜೀವಭಯದ ಆತಂಕ ಶುರುವಾಗಿದೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭ

ಅಂಕವಳ್ಳಿಯಿಂದ ಬೂವನಹಳ್ಳಿ ಕಡೆಗೆ ಓಡಿದ ಚಿರತೆ ವಸಂತಮ್ಮ ಎನ್ನುವವರ ಮೇಲೂ ದಾಳಿ ಮಾಡಿದೆ. ಕೂಡಲೇ ಮಹಿಳೆ ಕೂಗಾಡಿದ್ದರಿಂದ ಗಾಬರಿಯಿಂದ ಚಿರತೆ ದನದ ಕೊಟ್ಟಿಗೆ ಸೇರಿಕೊಂಡಿದೆ. ಕೂಡಲೇ ಎಚ್ಚೆತ್ತ ಗ್ರಾಮಸ್ಥರು ಕೊಟ್ಟಿಗೆ ಬಾಗಿಲು ಮುಚ್ಚಿದ್ದಾರೆ. ಸದ್ಯ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಮೈಸೂರಿನ ವನ್ಯಜೀವಿ ವೈದ್ಯ ಡಾ ಆದರ್ಶ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸ್ಥಳದಲ್ಲಿ ಸಿಸಿಎಫ್ ಏಡುಕೊಂಡಲು ಮೊಕ್ಕಾಂ ಹೂಡಿದ್ದಾರೆ. ಅರವಳಿಕೆ‌ ಮದ್ದು ನೀಡಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆದಿದೆ.

ಡಿಸಿ ಲತಾ ಕುಮಾರಿ ಹೇಳಿದಿಷ್ಟು

ಇನ್ನು ಈ ಬಗ್ಗೆ ಡಿಸಿ ಲತಾ ಕುಮಾರಿ ಪ್ರತಿಕ್ರಿಯಿಸಿದ್ದು, ಈಗಾಗಲೇ ಚಿರತೆ ಇರುವ ಸ್ಥಳ ಗುರುತು ಮಾಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಟ್ಯಾಕ್ ಮಾಡಿದ ಚಿರತೆಯನ್ನ ಸೆರೆ ಹಿಡಿಯಲಾಗುತ್ತೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್