Siddaramiah: ಕೋಳಿ ಸಾರು ತಿಂದು ದೇಗುಲಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ ಆರೋಪ: ವಿಡಿಯೊ ವೈರಲ್

| Updated By: ಗಂಗಾಧರ​ ಬ. ಸಾಬೋಜಿ

Updated on: Aug 21, 2022 | 12:24 PM

ಮಡಿಕೇರಿಯ ಅತಿಥಿ ಗೃಹದಲ್ಲಿ‌ ಮಧ್ಯಾಹ್ನ ಕೋಳಿ ಸಾರು‌ ಸವಿದಿದ್ದ ಸಿದ್ದರಾಮಯ್ಯ, ಮಧ್ಯಾಹ್ನದ ಬಳಿಕ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನಕ್ಕೆ‌ ಭೇಟಿ ನೀಡಿದ್ದಾರೆ ಎನ್ನಲಾಗುತ್ತಿದೆ.

Siddaramiah: ಕೋಳಿ ಸಾರು ತಿಂದು ದೇಗುಲಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ ಆರೋಪ: ವಿಡಿಯೊ ವೈರಲ್
ಸಾಮಾಜಿಕ‌ ಜಾಲತಾಣದಲ್ಲಿ ವೈರಲ್‌ ಆದ ಫೋಟೋ.
Follow us on

ಮಡಿಕೇರಿ: ನಾಟಿ ಕೋಳಿ ಸಾರು ತಿಂದು ದೇಗುಲಕ್ಕೆ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿದ್ದಾರೆ ಎನ್ನಲಾಗುವ ಫೋಟೋ, ವಿಡಿಯೋ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್‌ ಆಗಿವೆ. ಹಾಗಾಗಿ ಕೊಡಗಿನಲ್ಲಿ ಮತ್ತೊಂದು ವಿವಾದಕ್ಕೆ ಸಿದ್ದರಾಮಯ್ಯ ಸಿಲುಕಿದರಾ ಎನ್ನುವ ಅನುಮಾನಗಳು ಹುಟ್ಟಿಕೊಂಡಿವೆ. ಮಡಿಕೇರಿಯ ಅತಿಥಿ ಗೃಹದಲ್ಲಿ‌ ಮಧ್ಯಾಹ್ನ ಕೋಳಿ ಸಾರು‌ ಸವಿದಿದ್ದ ಸಿದ್ದರಾಮಯ್ಯ, ಮಧ್ಯಾಹ್ನದ ಬಳಿಕ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನಕ್ಕೆ‌ ಭೇಟಿ ನೀಡಿದ್ದಾರೆ ಎನ್ನಲಾಗುತ್ತಿದೆ. ಮಾಂಸ ತಿಂದು ದೇಗುಲಕ್ಕೆ ತೆರಳಿದ್ದಾರೆ ಎನ್ನಲಾದ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.

ಇದನ್ನೂ ಓದಿ; ಹಿಂದೂಗಳ ಬಗ್ಗೆ ಸಿದ್ದರಾಮಯ್ಯ ಕೊಟ್ಟಿದ್ದ ಹೇಳಿಕೆಗಳಿಗೆ ಬೇಸತ್ತು ಮೊಟ್ಟೆ ಎಸೆದೆ: ಸಂಪತ್

ಸಿದ್ದರಾಮಯ್ಯ ತಪ್ಪು ಮಾಡಿದ್ದರೆ ಆ ದೇವರೇ ಶಿಕ್ಷೆ ಕೊಡುತ್ತಾನೆ: ಶಾಸಕ ಕೆ.ಜಿ.ಬೋಪಯ್ಯ 

ಈ ವಿಚಾರವಾಗಿ ಟಿವಿ9ಗೆ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಪ್ರತಿಕ್ರಿಯೆ ನೀಡಿದ್ದು, ಹಿಂದೂ ಪದ್ಧತಿಯಲ್ಲಿ ಮಾಂಸ ತಿಂದು ದೇಗುಲಕ್ಕೆ ಹೋಗಲ್ಲ. ಮಾಂಸ ಸೇವಿಸಿ ಯಾರೂ ದೇವಸ್ಥಾನಕ್ಕೆ ಹೋಗುವುದಿಲ್ಲ. ಆದರೆ ಸಿದ್ದರಾಮಯ್ಯ ಮಾಂಸ ತಿಂದು ಹೋಗಿದ್ದರೆ ಖಂಡನೀಯ. ಸಿದ್ದರಾಮಯ್ಯ ತಪ್ಪು ಮಾಡಿದ್ದರೆ ಆ ದೇವರೇ ಶಿಕ್ಷೆ ಕೊಡುತ್ತಾನೆ. ಮಾಂಸ ಸೇವಿಸಿಲ್ಲ ಎನ್ನುವುದಾದರೆ ದೇವರೇ ನೋಡಿಕೊಳ್ಳುತ್ತಾನೆ ಎಂದು ಹೇಳಿದರು.

ಇದನ್ನೂ ಓದಿ: ಸಿದ್ಧರಾಮಯ್ಯ ಪ್ರತಿಯೊಂದು ಊರಲ್ಲಿ ಪಾಕಿಸ್ತಾನ ನಿರ್ಮಾಣ ಮಾಡುವ ಕನಸು ಕಾಣುತ್ತಿದ್ದಾರೆ: ಶಾಸಕ ಅಭಯ್ ಪಾಟೀಲ್

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾದ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ನಗರದ ಕೆ.ವಿ.ಕ್ಯಾಂಪಸ್​​ ಬಳಿ ನಡೆಯುತ್ತಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ದಸಂಸ, ಶೋಷಿತ ಸಮುದಾಯಗಳ ಅಭಿವೃದ್ಧಿ ಟ್ರಸ್ಟ್​ ಆಯೋಜನೆ ಮಾಡಿದ್ದು, ದಾಂಪತ್ಯ ಜೀವನಕ್ಕೆ ಕಾಲಿಟ್ಟ 42 ಜೋಡಿಗಳಿಗೆ ಶುಭ ಹಾರೈಸಿದರು. ಮಾಜಿ ಸಚಿವರಾದ ಡಾ.ಮಹದೇವಪ್ಪ, ಕೆ.ಆರ್.ರಮೇಶ್​ ಕುಮಾರ್, ಶಾಸಕ ಎನ್.ಹೆಚ್.ಶಿವಶಂಕರರೆಡ್ಡಿ, ನಿಡುಮಾಮಿಡಿ ಸ್ವಾಮೀಜಿ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 12:14 pm, Sun, 21 August 22