ಇಂಜಲಗರೆಯಲ್ಲಿ ಆನೆ ದಾಳಿ, ವಿದ್ಯಾರ್ಥಿನಿಗೆ ಗಾಯ
ಮಡಿಕೇರಿ: ಕಾಡಾನೆಯೊಂದು ಏಕಾಏಕಿ ಶಾಲಾ ವಿದ್ಯಾರ್ಥಿನಿ ಮೇಲೆ ದಾಳಿ ಮಾಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಇಂಜಲಗರೆಯಲ್ಲಿ ನಡೆದಿದೆ. ವಿದ್ಯಾರ್ಥಿನಿಯರಿಬ್ಬರು ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಬಂದ ಕಾಡಾನೆಯೊಂದು ದಾಳಿ ನಡೆಸಿದೆ. ದಾಳಿಯಲ್ಲಿ ಯುವಶ್ರೀ ಎಂಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ಮತ್ತೋರ್ವ ವಿದ್ಯಾರ್ಥಿನಿ ಕಾಲಿಗೆ ಗಾಯಗಳಾಗಿದ್ದು, ಇಬ್ಬರನ್ನು ಅಮ್ಮತ್ತಿ ಆರ್.ಐ.ಹೆಚ್.ಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಡಿಕೇರಿ: ಕಾಡಾನೆಯೊಂದು ಏಕಾಏಕಿ ಶಾಲಾ ವಿದ್ಯಾರ್ಥಿನಿ ಮೇಲೆ ದಾಳಿ ಮಾಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಇಂಜಲಗರೆಯಲ್ಲಿ ನಡೆದಿದೆ. ವಿದ್ಯಾರ್ಥಿನಿಯರಿಬ್ಬರು ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಬಂದ ಕಾಡಾನೆಯೊಂದು ದಾಳಿ ನಡೆಸಿದೆ.
ದಾಳಿಯಲ್ಲಿ ಯುವಶ್ರೀ ಎಂಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ಮತ್ತೋರ್ವ ವಿದ್ಯಾರ್ಥಿನಿ ಕಾಲಿಗೆ ಗಾಯಗಳಾಗಿದ್ದು, ಇಬ್ಬರನ್ನು ಅಮ್ಮತ್ತಿ ಆರ್.ಐ.ಹೆಚ್.ಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.