AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನ ಮಾಲ್ದಾರೆಯಲ್ಲಿ ಉದ್ವಿಗ್ನ ಪರಿಸ್ಥಿತಿ: ದೇವಾಲಯದ ಆವರಣದಲ್ಲಿ ‘ಸಮಾಧಿ ಪೂಜೆ’? ಭಾರಿ ಪ್ರತಿಭಟನೆ

Kodagu News: ಕೊಡಗಿನ ಮಾಲ್ದಾರೆ ಗ್ರಾಮದ ಗದ್ದಿಗೆಬೆಟ್ಟ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾಧಿ ಮಾದರಿಯ ರಚನೆ ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿವೆ. ಸ್ಥಳದಲ್ಲಿ ಮುಸ್ಲಿಂ ಸಂಪ್ರದಾಯದ ಸಮಾಧಿ ಪೂಜೆ ಮಾಡಿದ ಅನುಮಾನ ವ್ಯಕ್ತವಾಗಿದ್ದು, ಆರೋಪಿಗಳ ತಕ್ಷಣದ ಬಂಧನಕ್ಕೆ ಹಿಂದೂ ಸಂಘಟನೆಗಳು ಒತ್ತಾಯಿಸಿವೆ.

ಕೊಡಗಿನ ಮಾಲ್ದಾರೆಯಲ್ಲಿ ಉದ್ವಿಗ್ನ ಪರಿಸ್ಥಿತಿ: ದೇವಾಲಯದ ಆವರಣದಲ್ಲಿ ‘ಸಮಾಧಿ ಪೂಜೆ’? ಭಾರಿ ಪ್ರತಿಭಟನೆ
ಗದ್ದಿಗೆಬೆಟ್ಟ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣImage Credit source: The New Indian Express
ಗಣಪತಿ ಶರ್ಮಾ
|

Updated on:Jul 28, 2026 | 11:36 AM

Share

ಮುಖ್ಯಾಂಶಗಳು

  • ದೇವಾಲಯ ಆವರಣದಲ್ಲಿ ಸಮಾಧಿ ರೀತಿಯ ಅವಶೇಷ
  • ಗ್ರಾಮಸ್ಥರಿಂದ ರಸ್ತೆ ತಡೆದು ಪ್ರತಿಭಟನೆ
  • ಆರೋಪಿಗಳ ಬಂಧನಕ್ಕೆ ಒತ್ತಾಯ

ಮಡಿಕೇರಿ, ಜುಲೈ 28: ಕೊಡಗು (Kodagu) ಜಿಲ್ಲೆಯ ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮದಲ್ಲಿರುವ ಗದ್ದಿಗೆಬೆಟ್ಟ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾಧಿ ಮಾದರಿಯ ರಚನೆ (‘ಸಮಾಧಿ ಪೂಜೆ’ ಮಾಡಿದ ಕುರುಹು) ಪತ್ತೆಯಾದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ನೂರಾರು ಗ್ರಾಮಸ್ಥರು, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳೊಂದಿಗೆ ಸೇರಿ ದೇವಾಲಯದ ಎದುರು ಪ್ರತಿಭಟನೆ ನಡೆಸಿ, ಘಟನೆಗೆ ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.

ದೇವಾಲಯದ ಆವರಣದಲ್ಲಿ ‘ಸಮಾಧಿ ಪೂಜೆ’!

ದೇವಾಲಯದ ಆಡಳಿತ ಮಂಡಳಿಯ ಮಾಹಿತಿ ಪ್ರಕಾರ, ಭಾನುವಾರ ಬೆಳಗ್ಗೆ ಸಿಬ್ಬಂದಿ ದೇವಸ್ಥಾನಕ್ಕೆ ಆಗಮಿಸಿದ ವೇಳೆ ಹೂಗಳಿಂದ ಅಲಂಕರಿಸಲಾದ ಸಮಾಧಿ ಮಾದರಿಯ ರಚನೆ ದೇವಾಲಯದ ಆವರಣದಲ್ಲಿ ಕಂಡುಬಂದಿದೆ. ಇದರಿಂದ ಮುಸ್ಲಿಂ ಸಂಪ್ರದಾಯದ ‘ಸಮಾಧಿ ಪೂಜೆ’ ಮಾಡಿರುವ ಅನುಮಾನ ವ್ಯಕ್ತವಾಗಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ ದೂರು ದಾಖಲಿಸಲಾಗಿದೆ.

ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುವ ಹಾಗೂ ಕೋಮು ಸೌಹಾರ್ದ ಕದಡುವ ಉದ್ದೇಶದಿಂದ ಕೆಲ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ದೇವಾಲಯದ ಆಡಳಿತ ಮಂಡಳಿ ಆರೋಪಿಸಿದೆ. ಇಬ್ಬರು ವ್ಯಕ್ತಿಗಳು ಈ ಕೃತ್ಯ ಎಸಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ ಎಂದು ತಿಳಿಸಿದ್ದು, ಅದರ ದೃಶ್ಯಾವಳಿಗಳನ್ನು ಪೊಲೀಸರಿಗೆ ಸಲ್ಲಿಸಲಾಗಿದೆ.

ಭಾರಿ ಪ್ರತಿಭಟನೆ, ರಸ್ತೆ ತಡೆ

ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಬಿಜೆಪಿ ಮತ್ತು ವಿವಿಧ ಹಿಂದೂ ಸಂಘಟನೆಗಳ ಬೆಂಬಲದೊಂದಿಗೆ ಸೋಮವಾರ ದೇವಾಲಯದ ಎದುರು ಭಾರಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ, ಆರೋಪಿಗಳನ್ನು ಇನ್ನೂ ಬಂಧಿಸದಿರುವುದಕ್ಕೆ ಪೊಲೀಸ್ ಇಲಾಖೆಯ ವಿರುದ್ಧ ಘೋಷಣೆ ಕೂಗಿದರು. ಘಟನೆ ನಡೆದ ಪ್ರದೇಶ ಅರಣ್ಯ ಇಲಾಖೆಯ ವ್ಯಾಪ್ತಿಗೆ ಸೇರಿರುವುದರಿಂದ ಅರಣ್ಯ ಇಲಾಖೆಯ ಅಧಿಕಾರಿಗಳೂ ಸ್ಥಳಕ್ಕೆ ಆಗಮಿಸಿದ್ದು, ಪ್ರತಿಭಟನಾಕಾರರು ಅವರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದರು.

ಸಮಾಧಿ ಮಾದರಿಯ ರಚನೆ ತೆರವುಗೊಳಿಸಿದ ಪ್ರತಿಭಟನಾಕಾರರು

ಪ್ರತಿಭಟನೆಯ ವೇಳೆ ಸ್ಥಳದಲ್ಲಿದ್ದ ಸಮಾಧಿ ಮಾದರಿಯ ರಚನೆಯನ್ನು ಪ್ರತಿಭಟನಾಕಾರರು ತೆರವುಗೊಳಿಸಿದರು. ಅದರೊಳಗೆ ಯಾವುದೇ ವಸ್ತು ಇರಲಿಲ್ಲ ಎಂದು ಅವರು ಹೇಳಿದ್ದು, ಹೂವುಗಳನ್ನು ತೆರವುಗೊಳಿಸಿದರು. ಇದೇ ವೇಳೆ, ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವಿಸಲಾಗಿದೆ ಎಂಬ ಆರೋಪವನ್ನೂ ಪ್ರತಿಭಟನಾಕಾರರು ಮಾಡಿದ್ದು, ಈ ಎಲ್ಲ ಬೆಳವಣಿಗೆಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪೊಲೀಸರಿಂದ ಕಠಿಣ ಕ್ರಮದ ಭರವಸೆ

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ಅರಣ್ಯ ಇಲಾಖೆಯ ಆರ್‌ಎಫ್‌ಒ ನವೀನ್ ಕುಮಾರ್ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚುವ ಭರವಸೆ ನೀಡಿದರು. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪ್ರದೇಶದಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿದೆ.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ರಾಬಿನ್ ದೇವಯ್ಯ, ರವಿ ಕುಶಾಲಪ್ಪ ಸೇರಿದಂತೆ ಆರ್‌ಎಸ್‌ಎಸ್ ಹಾಗೂ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:36 am, Tue, 28 July 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?
ದೀಪಾವಳಿ ಹಬ್ಬದ ಖರೀದಿ ಭರಾಟೆ:  ಕೆ.ಆರ್.ಮಾರ್ಕೆಟ್‌ನಲ್ಲಿ ಜನಸಾಗರ
ದೀಪಾವಳಿ ಹಬ್ಬದ ಖರೀದಿ ಭರಾಟೆ:  ಕೆ.ಆರ್.ಮಾರ್ಕೆಟ್‌ನಲ್ಲಿ ಜನಸಾಗರ
ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಳ್ಳಿ
ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಳ್ಳಿ
ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದ ಯುವಕ: ಗಂಭೀರ ಗಾಯ
ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದ ಯುವಕ: ಗಂಭೀರ ಗಾಯ
ಕರ್ನಾಟಕದ ಡಿಪಿಆರ್‌ ತಿರಸ್ಕರಿಸಲು ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ
ಕರ್ನಾಟಕದ ಡಿಪಿಆರ್‌ ತಿರಸ್ಕರಿಸಲು ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ
ಪೋಲೆಂಡ್‌ನ ಕ್ರಾಕೋವ್‌ನಲ್ಲಿ ಗುಂಡಿನ ದಾಳಿ; 5 ಜನ ಸಾವು
ಪೋಲೆಂಡ್‌ನ ಕ್ರಾಕೋವ್‌ನಲ್ಲಿ ಗುಂಡಿನ ದಾಳಿ; 5 ಜನ ಸಾವು