AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಇಂದು 3ನೇ ಬಾರಿಗೆ ಮಡಿಕೇರಿಯ ಚೆಂಬು ಗ್ರಾಮದಲ್ಲಿ ಮತ್ತೆ ಕಂಪಿಸಿದ ಭೂಮಿ

Chembu Village: ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಲ್ಲಿ ಮತ್ತೆ ಭೂಮಿ ಕಂಪಿಸಿದೆ. ಶನಿವಾರ ರಾತ್ರಿ 8.28ರಲ್ಲಿ ಚೆಂಬು ಗ್ರಾಮದಲ್ಲಿ ಭೂ ಕಂಪನವಾಗಿದೆ.

Earthquake: ಇಂದು 3ನೇ ಬಾರಿಗೆ ಮಡಿಕೇರಿಯ ಚೆಂಬು ಗ್ರಾಮದಲ್ಲಿ ಮತ್ತೆ ಕಂಪಿಸಿದ ಭೂಮಿ
ಕೊಡಗಿನಲ್ಲಿ 12 ಕಡೆಗಳಲ್ಲಿ ಭೂಕುಸಿತ
TV9 Web
| Edited By: ಸಾಧು ಶ್ರೀನಾಥ್​|

Updated on:Jul 02, 2022 | 9:49 PM

Share

ಮಡಿಕೇರಿ: ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಲ್ಲಿ ಮತ್ತೆ ಭೂಮಿ ಕಂಪಿಸಿದೆ. ಶನಿವಾರ ರಾತ್ರಿ 8.28ರಲ್ಲಿ ಚೆಂಬು ಗ್ರಾಮದಲ್ಲಿ ಭೂ ಕಂಪನವಾಗಿದೆ. ಇದರೊಂದಿಗೆ ಗ್ರಾಮದಲ್ಲಿ ಇಂದು ಒಂದೇ ದಿನ 3 ಸಲ ಭೂಮಿ ಕಂಪಿಸಿದೆ. ಪೆರಾಜೆ, ಕರಿಕೆ ಸೇರಿದಂತೆ ಹಲವು ಗ್ರಾಮಗಳಲ್ಲೂ ಕಂಪನದ ಅನುಭವವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲೂ ಕಂಪನವಾಗಿದ್ದು ಗೂನಡ್ಕ, ಕಲ್ಲುಗುಂಡಿ ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದೆ.

ಇಂದು (ಜುಲೈ 2) ಚೆಂಬು ಗ್ರಾಮದಲ್ಲಿ ಮಧ್ಯಾಹ್ನ 1.24ರ ಸುಮಾರಿಗೆ ಮತ್ತೆ ಭೂಕಂಪನ  ಸಂಭವಿಸಿದೆ. ಕಳೆದ ಒಂದು ವಾರದಲ್ಲಿ 6 ಬಾರಿ ಭೂಮಿ ಕಂಪಿಸಿತ್ತು.  ಮಡಿಕೇರಿ ತಾಲ್ಲೂಕಿನ ಸಂಪಾಜೆ, ಚೆಂಬು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಲುಗುಂಡಿ, ಗೂನಡ್ಕ ಭಾಗದಲ್ಲಿ ಕೂಡ ಭೂಮಿ ಕಂಪಿಸಿದ ಅನುಭವವಾಗಿದೆ.ಜಿಲ್ಲೆಯಲ್ಲಿ ನಿರಂತರವಾಗಿ ಭೂಕಂಪನ ಆಗುತ್ತಿದ್ದು, ಜನರಿಗೆ ಆತಂಕ ಹೆಚ್ಚಾಗುತ್ತಿದೆ.

2018ರಲ್ಲಿ ಜಿಲ್ಲೆಯಲ್ಲಿ ಇದೇ ರೀತಿ ಭೂಕಂಪನ ಆಗಿತ್ತು. ಅದೇ ವರ್ಷ ಪ್ರಾಕೃತಿಕ ವಿಕೋಪ ಸಂಭವಿಸಿತ್ತು. ಈ ಬಾರಿಯೂ ಪ್ರಾಕೃತಿಕ ವಿಕೋಪ ಸಂಭವಿಸುವ ಬಗ್ಗೆ ಜನರಿಗೆ ಭಯ ಶುರುವಾಗಿದೆ. ಜೂನ್ 28ರಂದು ಬೆಳಗ್ಗೆ 7.45ರ ಸುಮಾರಿಗೆ ಮಡಿಕೇರಿ ತಾಲೂಕಿನ ಕರಿಕೆ, ಪೆರಾಜೆ ಭಾಗಮಂಡಲ ಹಾಗೂ ಸಂಪಾಜೆ ಕರ್ಣಂಗೇರಿ ಸೇರಿ ಹಲವೆಡೆ ಭೂಕಂಪನ ಅನುಭವವಾಗಿದೆ.

ಇದಕ್ಕೂ ಮೊದಲು ಅಂದರೆ ವಾರದ ಹಿಂದೆ ಜಿಲ್ಲೆಯಲ್ಲಿ ಆಗಿದ್ದ ಭೂಕಂಪನ ದೃಢವಾಗಿದೆ. ಈ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಕೋಶ ದೃಢಪಡಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ. ಭೂಕಂಪನದಿಂದಾಗಿ ಕೊಡಗು-ದಕ್ಷಿಣ ಕನ್ನಡ ಜಿಲ್ಲೆ ಗಡಿಭಾಗವಾದ ಸಂಪಾಜೆಯಲ್ಲಿ ಮನೆ ಗೋಡೆಗಳು ಬಿರುಕು ಬಿಟ್ಟಿದ್ದವು. ಜೂನ್ 28 ರ ಬೆಳಗ್ಗೆ 7.45 ಕ್ಕೆ ಭೂಮಿ ಕಂಪಿಸಿತ್ತು. ಕಂಪನದ ತೀವ್ರತೆಗೆ ಮನೆಯ ಕಂಬಗಳು ಅಲುಗಾಡಿವೆ. ಜೂನ್ 28 ರಂದು ಮಡಿಕೇರಿ ಲೂಕಿನ ಕರಿಕೆ, ಪೆರಾಜೆ ಭಾಗಮಂಡಲ ಹಾಗೂ ಸಂಪಾಜೆ ಕರ್ಣಂಗೇರಿ ಸೇರಿ ಹಲವೆಡೆ ಭೂಕಂಪನ ಅನುಭವಾಗಿದೆ. ಇನ್ನು ಮಡಿಕೇರಿ ನಗರದಲ್ಲೂ ಲಘು ಭೂಕಂಪನ ಆಗಿತ್ತು.

ಅಣಶಿ ಗಟ್ಟದಲ್ಲಿ ಗುಡ್ಡ ಕುಸಿತ

ಕಾರವಾರ ತಾಲೂಕಿನ ಅಣಶಿ ಘಟ್ಟದಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಕಳೆದ 2 ದಿನದಿಂದ ಸುರಿದ ಮಳೆಗೆ ಗುಡ್ಡ ಕುಸಿಯುತ್ತಿದೆ. ಗುಡ್ಡ ಕುಸಿದು ರಸ್ತೆಯ ಮೇಲೆ ಕಲ್ಲುಗಳು ಉರುಳುತ್ತಿವೆ.

Published On - 9:06 pm, Sat, 2 July 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ