ನವರಾತ್ರಿ ಉತ್ಸವ ಹಿನ್ನೆಲೆ: ಮಡಿಕೇರಿ ಕಡೆ ಯಾರೂ ಪ್ರವಾಸಕ್ಕೆ ಬರಬೇಡಿ- ಕೊಡಗು ಜಿಲ್ಲಾಡಳಿತದಿಂದ ಮಹತ್ವದ ಆದೇಶ
ಅಕ್ಟೋಬರ್ 17 ರವೆಗೆ ಪ್ರವಾಸಿ ಕೇಂದ್ರಗಳನ್ನು ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ರಾಜಾಸೀಟು, ಗದ್ದುಗೆ, ಓಂಕಾರೇಶ್ವರ ದೇವಸ್ಥಾನ, ನೆಹರು ಮಂಟಪ, ಜನರಲ್ ತಿಮ್ಮಯ್ಯ ಮ್ಯೂಸಿಯಂ ಬಂದ್ ಆಗಲಿದೆ.
ಕೊಡಗು: ನವರಾತ್ರಿ ಉತ್ಸವ ಹಿನ್ನೆಲೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಪ್ರವಾಸಿ ಕೇಂದ್ರಗಳನ್ನು ಬಂದ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಇಂದಿನಿಂದ (ಅಕ್ಟೋಬರ್ 8) 11 ದಿನಗಳ ಕಾಲ ಮಡಿಕೇರಿ ನಗರ ವ್ಯಾಪ್ತಿ ಪ್ರವಾಸಿ ಕೇಂದ್ರಗಳನ್ನು ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಕೊರೊನಾ ಸೋಂಕು ತಡೆಗಟ್ಟಲು ಜಿಲ್ಲಾಡಳಿತ ಈ ಕ್ರಮ ತೆಗೆದುಕೊಂಡಿದೆ.
ಅಕ್ಟೋಬರ್ 17 ರವೆಗೆ ಪ್ರವಾಸಿ ಕೇಂದ್ರಗಳನ್ನು ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ರಾಜಾಸೀಟು, ಗದ್ದುಗೆ, ಓಂಕಾರೇಶ್ವರ ದೇವಸ್ಥಾನ, ನೆಹರು ಮಂಟಪ, ಜನರಲ್ ತಿಮ್ಮಯ್ಯ ಮ್ಯೂಸಿಯಂ ಬಂದ್ ಆಗಲಿದೆ. ಕೊರೋನಾ ಸೋಂಕು ತಡೆಗಟ್ಟಲು ಜಿಲ್ಲಾಡಳಿತ ಈ ಕ್ರಮ ತೆಗೆದುಕೊಂಡಿದೆ. ಸದ್ಯ ಮಡಿಕೇರಿ ನಗರಕ್ಕೆ ಆಗಮಿಸಿದ ಪ್ರವಾಸಿಗರಿಗೆ ನಿರಾಸೆಯಾಗಿದೆ.
ವಿಶ್ವವಿಖ್ಯಾತ ದಸರಾ ಮಹೋತ್ಸವ; ಮೈಸೂರಿನ ಕೆಲ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧ ವಿಶ್ವವಿಖ್ಯಾತ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮೈಸೂರಿನ ಕೆಲ ಪ್ರದೇಶಗಳಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ. ಅಕ್ಟೋಬರ್ 7 ರಿಂದ 15ರವರೆಗೆ ವಾಹನ ನಿಲುಗಡೆ ನಿಷೇಧಿಸಿ ಮೈಸೂರು ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ಮಧ್ಯಾಹ್ನ 4 ರಿಂದ ಮಧ್ಯರಾತ್ರಿ 12ರವರೆಗೆ ಆದೇಶ ಜಾರಿಯಾಗಿರಲಿದೆ.
ಅಂಬಾವಿಲಾಸ ಅರಮನೆ ಸುತ್ತಮುತ್ತ, ಸಯ್ಯಾಜಿರಾವ್ ರಸ್ತೆ, ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಿಂದ ಬಸವೇಶ್ವರ ವೃತ್ತ, ಪುರಂದರ ರಸ್ತೆ, ಬಿ.ರಾಚಯ್ಯ ವೃತ್ತದಿಂದ ಬಿ.ಎನ್.ರಸ್ತೆ ಜಂಕ್ಷನ್, ಶಿವರಾತ್ರಿ ರಾಜೇಂದ್ರ ವೃತ್ತದಿಂದ ಜಯಚಾಮರಾಜೇಂದ್ರ ವೃತ್ತ, ಆಲ್ಬರ್ಟ್ ವಿಕ್ಟರ್ ರಸ್ತೆಯ ಜಯಚಾಮರಾಜೇಂದ್ರ ವೃತ್ತದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದವರೆಗೆ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ.
ಇನ್ನಿತರ ಪ್ರದೇಶಗಳಲ್ಲೂ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ ಅಶೋಕ ರಸ್ತೆಯ ನೆಹರು ವೃತ್ತದಿಂದ ಮಹಾವೀರ ವೃತ್ತದವರೆಗೆ, ಮಹಾವೀರ ವೃತ್ತದಿಂದ ಜಯಚಾಮರಾಜ ವೃತ್ತದವರೆಗೆ, ಬಲರಾಮ ದ್ವಾರದ ಮುಂಭಾಗ, ಡಾ.ರಾಜ್‌ಕುಮಾರ್ ವೃತ್ತದಿಂದ ವಸ್ತು ಪ್ರರ್ದಶನದ ಮುಂಭಾಗದ ಟ್ಯಾಂಕ್ ಬಂಡ್ ಬಿ.ಎನ್.ನರಸಿಂಹಮೂರ್ತಿ ವೃತ್ತ, ಬಿ.ಎನ್.ರಸ್ತೆ ಜಂಕ್ಷನ್‌ನಿಂದ ಮೃಗಾಲಯದ ರಸ್ತೆಯವರೆಗೆ, ಮಾನಸರ ರಸ್ತೆಯ ವಾಣಿವಿಲಾಸ ರಸ್ತೆ ಜಂಕ್ಷನ್‌ನಿಂದ ಲೋಕರಂಜನ್ ರಸ್ತೆ ವರೆಗೆ, ಮಲೆ ಮಹದೇಶ್ವರ ರಸ್ತೆಯ ಬಿ.ಎನ್.ರಸ್ತೆ ಜಂಕ್ಷನ್‌ನಿಂದ (ಛತ್ರಿಮರ) ಚನ್ನಯ್ಯ ವೃತ್ತದವರೆಗೆ, ಸರ್ಕಾರಿ ಭವನದ ರಸ್ತೆಯ ಸರ್ಕಾರಿ ಭವನದ ದ್ವಾರದ ರಾಜೇಂದ್ರ ಒಡೆಯರ್ ವೃತ್ತದವರೆಗೆ ಹಲವು ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ಬಂದ್; ನಿಯಮ ಉಲ್ಲಂಘನೆ ಶಿಕ್ಷಾರ್ಹ ಅಪರಾಧ: ಜಿಲ್ಲಾಡಳಿತದಿಂದ ಆದೇಶ
ಉತ್ತರಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳು ಓಪನ್, ಬಂದ್ ಆಗಿದ್ದ ಜಲಸಾಹಸ ಕ್ರೀಡೆಗಳಿಗೆ ಅನುಮತಿ ಕೊಟ್ಟ ಜಿಲ್ಲಾಡಳಿತ
Published On - 10:56 am, Fri, 8 October 21