ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಸಾವು, ಕೊಡಗು ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಣೆ

Elephant Attack Death: ಮಡಿಕೇರಿ ತಾಲೂಕಿನ ಅರೆಕಾಡು ಗ್ರಾಮದಲ್ಲಿ ನಿನ್ನೆ ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಬಲಿಯಾಗಿದ್ದರು. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಸಾವು, ಕೊಡಗು ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಣೆ
ಟ್ರ್ಯಾಕ್ಟರ್
Follow us
| Updated By: ಆಯೇಷಾ ಬಾನು

Updated on:Aug 14, 2023 | 7:50 AM

ಕೊಡಗು, ಆ.14: ಆನೆ ದಾಳಿಗೆ(Elephant Attack) ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಅವರು ಬಲಿಯಾಗಿದ್ದಾರೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೊಡಗು(Kodagu) ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಸೋಮವಾರಪೇಟೆ ತಾಲೂಕಿನ ನೆಲ್ಲಿಹುದಿಕೇರಿ, ಅಭ್ಯತ್​ ಮಂಗಲ, ಮಡಿಕೇರಿ ತಾಲೂಕಿನ ಹೊಸ್ಕೇರಿ, ಮುರಗೋಡ, ಕಟ್ಟೆಮಾಡು, ಅರೆಕಾಡು, ಗುಯ್ಯ, ಸಿದ್ದಾಪುರದ ಶಾಲೆಗಳಿಗೆ ಇಂದು ರಜೆ ಘೋಷಿಸಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

ಮಡಿಕೇರಿ ತಾಲೂಕಿನ ಅರೆಕಾಡು ಗ್ರಾಮದಲ್ಲಿ ನಿನ್ನೆ ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಬಲಿಯಾಗಿದ್ದರು. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಮಧ್ಯಾಹ್ನದ ವೇಳೆ ದೇವಪ್ಪ ಕೆಲಸದ ಮೇಲೆ ಟ್ರ್ಯಾಕ್ಟರ್ ಚಾಲನೆ ಮಾಡಿಕೊಂಡು ಅರೆಕಾಡು ಗ್ರಾಮದ ಬಳಿ ತೆರಳಿದ್ದರು. ಈ ವೇಳೆ ಕಾಡಾನೆಯೊಂದು ದಾಳಿ ನಡೆಸಿದ್ದು ದೇವಪ್ಪ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಇನ್ನು ಈ ಘಟನೆ ನಡೆಯುವ ಮುನ್ನ ಅರಣ್ಯ ಇಲಾಖೆ ಸಿಬ್ಬಂದಿ ಕಾಫಿ ತೋಟಕ್ಕೆ ಬಂದಿದ್ದ ಕಾಡಾನೆಗಳ ಹಿಂಡನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಸಿದ್ದರು. ಹೀಗಾಗಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆರೋಪ ಮಾಡಿದ್ದಾರೆ. ಜನರಿಗೆ ಯಾವುದೇ ಮಾಹಿತಿ ನೀಡದೆ ಕಾರ್ಯಾಚರಣೆ ನಡೆಸಿದ್ದಾರೆ. ಇದರಿಂದಾಗಿ ಟ್ರ್ಯಾಕ್ಟರ್ ಚಾಲಕನ ಮೇಲೆ ಕಾಡಾನೆ ದಾಳಿ ನಡೆಸಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದರು. ಸದ್ಯ ಈಗ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Elephant Census: ಆನೆಗಳಿಗೂ ಬಂಡೀಪುರ ಅಂದ್ರೆ ಪಂಚಪ್ರಾಣ!

ಬಹು ಅಂಗಾಂಗ ವೈಫಲ್ಯದಿಂದ ಆನೆ ಸಾವು

ನಾಗರಹೊಳೆ ಅರಣ್ಯ ಪ್ರದೇಶದ ಆನೆಚೌಕೂರಿನ ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಪಳಗಿಸಲಾಗುತ್ತಿದ್ದ 50 ವರ್ಷದ ಸುಬ್ರಹ್ಮಣ್ಯ ಎಂಬ ಆನೆ ಮೃತಪಟ್ಟಿದೆ. ಪಶು ವೈದ್ಯಾಧಿಕಾರಿಗಳು ಅಗತ್ಯ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದೆ. ಆರ್ಥ್ರೈಟಿಸ್ ನಿಂದ ಬಳಲುತ್ತಿದ್ದ ಸುಬ್ರಹ್ಮಣ್ಯ ಸೋಂಕಿನಿಂದ ಮೃತಪಟ್ಟಿದೆ ಎಂದು ಮರಣೋತ್ತರ ಪರೀಕ್ಷೆ ವೇಳೆ ಮಾಹಿತಿ ಸಿಕ್ಕಿದೆ.

ಆನೆಯು ಬಹು ಅಂಗಾಂಗ ವೈಫಲ್ಯ ಕಾಯಿಲೆ (ಆರ್ಥ್ರೈಟಿಸ್)ಯಿಂದ ಸೆಪ್ಟಿಸೀಮಿಯಾ (ಇನ್‌ಫೆಕ್ಷನ್)ನಿಂದ ಬಳಲಿ ಮೃತಪಟ್ಟಿರುವುದಾಗಿ ಪಶುವೈದ್ಯರ ತಂಡ ಮಾಹಿತಿ ನೀಡಿದೆ. ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಆನೆಯ ಶವವನ್ನು ಮಣ್ಣಲ್ಲಿ ಹೂತಿರುವುದಾಗಿ ಡಿಸಿಎಫ್ ತಿಳಿಸಿದರು.

ಕೊಡಗು ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:26 am, Mon, 14 August 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!