AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಮೂವರು ಸಾವು

ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಕಾಡು ಬಳಿ ಪಿಕ್‌ಅಪ್ ಜೀಪ್, ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ. ಅಪಘಾತಕ್ಕೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ.

ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಮೂವರು ಸಾವು
ಸಾಂದರ್ಭಿಕ ಚಿತ್ರImage Credit source: Getty Images
ಗೋಪಾಲ್​ ಸೋಮಯ್ಯ
| Edited By: |

Updated on:Sep 20, 2026 | 11:28 PM

Share

ಮಡಿಕೇರಿ, ಸೆಪ್ಟೆಂಬರ್​​ 20: ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಕುಶಾಲನಗರ ತಾಲೂಕಿನ ಆನೆಕಾಡು ಬಳಿ  ಪಿಕ್​​ಅಪ್ ಜೀಪ್, ಕಾರು ಮತ್ತು ಬೈಕ್ ಮಧ್ಯೆ ಸರಣಿ ಅಪಘಾತ ನಡೆದಿದ್ದು, ಮೃತರನ್ನು ಬೈಕ್ ಚಾಲಕ ಕುಮಾರ, ಕಾರು ಚಾಲಕ ರತನ್ ಮತ್ತು ಸಹ ಪ್ರಯಾಣಿಕ ಆದರ್ಶ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕುಶಾಲನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: 5 ತಿಂಗಳ ಬಳಿಕ ಪ್ರವಾಸಿಗರಿಗೆ ಓಪನ್ ಆಯ್ತು ಹಾರಂಗಿ, ಮತ್ತಿಗೋಡು ಆನೆ ಶಿಬಿರ: ಕಟ್ಟುನಿಟ್ಟಿನ ರೂಲ್ಸ್ ಜಾರಿ!

ಅಪಘಾತದ ತೀವ್ರತೆಗೆ ಗಾಯಾಳುಗಳು ರಸ್ತೆಯಲ್ಲಿ ಬಿದ್ದು ನರಳಾಡಿದ್ದು, ಕೂಡಲೇ ಸ್ಥಳೀಯರು ಅವರ ನೆರವಿಗೆ ಧಾವಿಸಿ ಮಾನವೀಯತೆ ಮೆರೆದಿದ್ದಾರೆ. ಅಪಘಾತದಲ್ಲಿ ಒಟ್ಟು 7 ಮಂದಿಗೆ ಗಾಯಗಳಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸುವಿನ್, ಚಂದ್ರಶೇಖರ್, ಆದರ್ಶ್ ಮತ್ತು ಅಜಯ್ ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:27 pm, Sun, 20 September 26

Follow Us
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್