AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಮಹಿಳೆ ಮೇಲೆ ಅತ್ಯಾಚಾರದ ಆರೋಪ! ಹೋಂಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್

ಕೊಡಗಿನ ಕುಟ್ಟದಲ್ಲಿ ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಗರದ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿದ್ದು, ಪ್ರಮುಖ ಆರೋಪಿ ಹಾಗೂ ಹೋಂಸ್ಟೇ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರೆದಿದೆ.

ವಿದೇಶಿ ಮಹಿಳೆ ಮೇಲೆ ಅತ್ಯಾಚಾರದ ಆರೋಪ! ಹೋಂಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್
ವಿದೇಶಿ ಮಹಿಳೆ ಮೇಲೆ ಅತ್ಯಾಚಾರದ ಆರೋಪ!
ಗೋಪಾಲ್​ ಸೋಮಯ್ಯ
| Edited By: |

Updated on:Apr 22, 2026 | 11:45 AM

Share

ಕೊಡಗು, ಏಪ್ರಿಲ್ 22: ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ (Physical Assault) ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ನಡೆದ ಘಟನೆ

ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ, ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯಾಗಿರುವ ವೃಜೇಶ್ ಕುಮಾರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಹೋಂಸ್ಟೇ ಮಾಲೀಕ ವಿಶಾಲ್ ಮೇಲೂ ಆರೋಪಗಳಿದ್ದು, ಅವರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಹಿನ್ನೆಲೆ ಹಾಗೂ ಆರೋಪಗಳ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಸಿಟಿ ರವಿ ಖಂಡನೆ

ಪ್ರಕರಣದ ಬಗ್ಗೆ ಟ್ವೀಟ್(X) ಮಾಡಿರುವ ಎಂಎಲ್​ಸಿ ಸಿಟಿ ರವಿ, ಕೊಡಗಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆಯ ಮೇಲೆ ನಡೆದ ಭೀಕರ ಹಲ್ಲೆ ಅತ್ಯಂತ ನಾಚಿಕೆಗೇಡಿನ ಸಂಗತಿ ಮತ್ತು ಇದು ಎಂದಿಗೂ ಒಪ್ಪಲಾಗದ ಕೃತ್ಯ. ಇಂತಹ ಘಟನೆಗಳು ಭಾರತದ ‘ಅತಿಥಿ ದೇವೋ ಭವ’ ಎಂಬ ಸಂಸ್ಕೃತಿಯ ಆತ್ಮಕ್ಕೆ ಏಟು ನೀಡುತ್ತವೆ.ಇದು ಕೇವಲ ವ್ಯಕ್ತಿಯ ವಿರುದ್ಧದ ಅಪರಾಧವಲ್ಲ, ಬದಲಾಗಿ ನಮ್ಮ ರಾಷ್ಟ್ರದ ಪ್ರತಿಷ್ಠೆ ಮತ್ತು ಮೌಲ್ಯಗಳ ಮೇಲಿನ ಕಳಂಕ.ರಾಜ್ಯ ಸರ್ಕಾರವು ಭಾಗಿಯಾಗಿರುವ ಎಲ್ಲರ ವಿರುದ್ಧ ತ್ವರಿತ ಮತ್ತು ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ವಿಳಂಬವಿಲ್ಲದೆ ನ್ಯಾಯ ದೊರಕಿಸಿಕೊಡಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:26 am, Wed, 22 April 26

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ