ಕೊಡಗಿನಲ್ಲಿ ಮುಂದುವರಿದ ವರುಣಾರ್ಭಟ; ದುಬಾರೆ ಪ್ರವಾಸಿ ತಾಣಕ್ಕೆ ಎಂಟ್ರಿ ಬಂದ್

ಕೊಡಗು ಜಿಲ್ಲಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಈ ಹಿನ್ನೆಲೆ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಬಳಿ ಇರುವ ದುಬಾರೆ ಪ್ರವಾಸಿ ತಾಣಕ್ಕೆ ಅರಣ್ಯ ಇಲಾಖೆ ನಿಷೇಧ ಹೇರಿದೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮಕೈಗೊಳ್ಳಲಾಗಿದೆ.

ಕೊಡಗಿನಲ್ಲಿ ಮುಂದುವರಿದ ವರುಣಾರ್ಭಟ; ದುಬಾರೆ ಪ್ರವಾಸಿ ತಾಣಕ್ಕೆ ಎಂಟ್ರಿ ಬಂದ್
ದುಬಾರೆ ಪ್ರವಾಸಿ ತಾಣಕ್ಕೆ ಎಂಟ್ರಿ ಬಂದ್
Follow us
Gopal AS
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 27, 2024 | 3:59 PM

ಕೊಡಗು, ಜೂ.27: ಮಳೆಗಾಲ ಶುರುವಾಗುತ್ತಲೇ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ. ಹೌದು, ಮಡಿಕೇರಿ(Madikeri) ನಗರದ ಹೃದಯ ಭಾಗದಲ್ಲಿಯೇ ಮುಖ್ಯ ರಸ್ತೆಯೊಂದು ಕುಸಿಯುತ್ತಿದೆ. ಇತ್ತ ಮುಂದುವರೆದ ಮಳೆ(Rain)ಯ ಆರ್ಭಟಕ್ಕೆ ಕಾವೇರಿ ನದಿ ಪ್ರವಾಹ ಹಿನ್ನೆಲೆ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಬಳಿ ಇರುವ ದುಬಾರೆ ಪ್ರವಾಸಿ ತಾಣಕ್ಕೆ ಅರಣ್ಯ ಇಲಾಖೆ ನಿಷೇಧ ಹೇರಿದೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮಕೈಗೊಳ್ಳಲಾಗಿದೆ.

ಭಾಗಮಂಡಲ ತ್ರಿವೇಣಿ ಸಂಗಮ‌ಜಲಾವೃತ

ಕೊಡಗಿನಾದ್ಯಂದ ಭಾರೀ ವರ್ಷ ಧಾರೆ ಹಿನ್ನೆಲೆ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಮಡಿಕೇರಿ ತಾಲೂಕಿನ ಭಾಗಮಂಡಲ ತ್ರಿವೇಣಿ ಸಂಗಮ‌ ಸಂಪೂರ್ಣ ಜಲಾವೃತವಾಗಿದ್ದು, ಪ್ರವಾಹದಲ್ಲಿ‌ ಸ್ನಾನ ಘಟ್ಟ ಮುಳುಗಡೆಯಾಗಿದೆ. ಇದರಿಂದ ಸ್ನಾನಘಟ್ಟದಲ್ಲಿ ಪವಿತ್ರ ಸ್ನಾನ ಮಾಡಲಾಗದೆ ಭಕ್ತರು ಪರದಾಟ ನಡೆಸಿದ್ದಾರೆ. ಜೊತೆಗೆ ಭಾಗಮಂಡಲ – ನಾಪೋಕ್ಲು ರಸ್ತೆ ಜಲಾವೃತವಾದರೂ ಮೇಲ್ಸೇತುವೆ ಇರುವುದರಿಂದ‌ ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಿಲ್ಲ.

ಇದನ್ನೂ ಓದಿ:ಮಳೆ..ಮಳೆ..ಕರಾವಳಿ ಭಾಗಕ್ಕೆ ರೆಡ್​, ಮಲೆನಾಡಿಗೆ ಆರೆಂಜ್ ಅಲರ್ಟ್: ಬೆಂಗಳೂರಿನಲ್ಲಿ ವಾತಾವರಣ ಬದಲಾವಣೆ

ಇನ್ನು ಭಾರಿ ಮಳೆಗೆ ಮಡಿಕೇರಿಯ ತ್ಯಾಗರಾಜ ಕಾಲೋನಿಯಲ್ಲಿ ಮೂರು ಮನೆಗಳಿಗೆ ಹಾನಿಯಾಗಿದ್ದು, ಮಳೆಯಿಂದ ಮನೆಯ ತಡೆಗೋಡೆ ಸಂಪೂರ್ಣ ಕುಸಿತವಾಗಿದೆ. ಇತ್ತ ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಳೆ ಹೀಗೆ ಮುಂದುವರೆದರೆ ನಾಳೆಯ ವೇಳೆಗೆ ಸಂಗಮ ಜಲಾವೃತವಾಗುವ ಸಾಧ್ಯತೆಯಿದೆ. ಹಾಗೆಯೇ ಮಡಿಕೇರಿ ತಾಲ್ಲೂಕಿನ ಮೂರ್ನಾಡು ಗ್ರಾಮದ ಬಲಮುರಿಯಲ್ಲಿ ಹಳೆಯ ಸೇತುವೆ ಮುಳಗಡೆಯಾಗಿದೆ. ಸಂಚಾರಕ್ಕೆ ಹೊಸ ಸೇತುವೆ ಇರುವುದರಿಂದ ಸದ್ಯ ಜನರಿಗೆ ಯಾವುದೇ ಅಪಾಯವಿಲ್ಲ. ಇನ್ನು ಜಿಲ್ಲಾಡಳಿತ ನದಿ ತೀರದ ನಿವಾಸಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಮುನ್ನೆಚ್ಚರಿಕೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್