Suicide: ಪುತ್ರ ನಿಂದಿಸಿದ ಎಂದು ತಂದೆ ಆತ್ಮಹತ್ಯೆ, ತಂದೆ ಸಾವಿನ ಸುದ್ದಿ ಕೇಳಿ ಪುತ್ರನೂ ನೇಣಿಗೆ ಶರಣು
ತಂದೆ ಆತ್ಮಹತ್ಯೆ ನೋಡಿ ಮನನೊಂದು ಪುತ್ರ ಗಿರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೋಟದ ಕೆರೆಗೆ ಹಾರಿ ಗಿರೀಶ್ ಸಾವನ್ನಪ್ಪಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಡಗು: ಇಲ್ಲಿನ ವಿರಾಜಪೇಟೆ ತಾಲೂಕಿನ ಬಿಳಗುಂದ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ತಂದೆ ಹಾಗೂ ಮಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ತಂದೆ ಸುಬ್ಬಯ್ಯ (75) ಹಾಗೂ ಪುತ್ರ ಗಿರೀಶ್ ಗಣಪತಿ (36) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಪುತ್ರ ನಿಂದಿಸಿದ ಎಂಬ ಕಾರಣಕ್ಕೆ ಕೆರೆಗೆ ಹಾರಿ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಬಳಿಕ ಪುತ್ರನೂ ನೇಣಿಗೆ ಶರಣಾಗಿದ್ದಾರೆ.
ಮಂಗಳವಾರ ತಂದೆ ಮಗನ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ಏರ್ಪಟ್ಟಿತ್ತು ಎಂದು ತಿಳಿದುಬಂದಿದೆ. ಪುತ್ರ ನಿಂದಿಸಿದ ಎಂಬ ಕಾರಣಕ್ಕೆ ತಂದೆ ಸುಬ್ಬಯ್ಯ ನೇಣಿಗೆ ಶರಣಾಗಿದ್ದಾರೆ. ತಂದೆ ಆತ್ಮಹತ್ಯೆ ನೋಡಿ ಮನನೊಂದು ಪುತ್ರ ಗಿರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೋಟದ ಕೆರೆಗೆ ಹಾರಿ ಗಿರೀಶ್ ಸಾವನ್ನಪ್ಪಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ 7 ಎಕರೆ ಕಬ್ಬು ಬೆಂಕಿಗಾಹುತಿ
ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ ಆದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಅವರಳ್ಳಿ ಎಂಬಲ್ಲಿ ನಡೆದಿದೆ. ಅವರಳ್ಳಿಯಲ್ಲಿ 7 ಎಕರೆಯಲ್ಲಿದ್ದ ಕಬ್ಬು ಬೆಳೆ ಸುಟ್ಟುಭಸ್ಮವಾಗಿದೆ. ಯಲ್ಲಾಲಿಂಗ ಪಾಟೀಲ್, ಮಲ್ಲಮ್ಮಗೆ ಸೇರಿದ ಕಬ್ಬು ಬೆಳೆ ನಾಶವಾಗಿದೆ. ಲೈನ್‌ಗಳು ಜೋತುಬಿದ್ದ ಹಿನ್ನೆಲೆ ಶಾರ್ಟ್ ಸರ್ಕ್ಯೂಟ್ ಆಗಿದೆ ಎಂದು ತಿಳಿದುಬಂದಿದೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇತ್ತ ಬೀದರ್ ಭಾಲ್ಕಿ ತಾಲೂಕಿನ ಕಣಜಿ ಗ್ರಾಮದಲ್ಲಿ ಕೀಟನಾಶಕ ಸಿಂಪಡಿಸಿದ ಹಿನ್ನೆಲೆ, 2 ಎಕರೆ ಪ್ರದೇಶದಲ್ಲಿ ಸೋಯಾ ಬೆಳೆ ನಾಶವಾದ ಘಟನೆ ಸಂಭವಿಸಿದೆ. ರೈತ ಉಮೇಶ್ ಸ್ವಾಮಿ ಎಂಬುವವರಿಗೆ ಸೇರಿದ ಸೋಯಾ ಬೆಳೆ ನಾಶವಾಗಿದೆ. ಕಟಾವಿಗೆ ಬಂದ ಬೆಳೆ ನಾಶವಾದ ಹಿನ್ನೆಲೆ ಪರಿಹಾರ ನೀಡಬೇಕೆಂದು ಕೀಟನಾಶಕ ನೀಡಿದ್ದ ಕಂಪನಿಗೆ ರೈತ ಒತ್ತಾಯ ಮಾಡಿದ್ದಾರೆ.
ಇದನ್ನೂ ಓದಿ: Bengaluru Crime: ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಬೈಕನ್ನೇ ಕದ್ದ ಕಳ್ಳ, ತಡರಾತ್ರಿ ನಡೆದ ಕೊಲೆ ಪ್ರಕರಣದ 5 ಆರೋಪಿಗಳು ಅರೆಸ್ಟ್
ಇದನ್ನೂ ಓದಿ: Crime News: ಬೆಂಗಳೂರಿನಲ್ಲಿ ಮುಂಬೈನ ಗ್ಯಾಂಗ್ಸ್ಟರ್ ಬಂಧನ, ಮೈಸೂರು ದೇವು ಹತ್ಯೆ ಪ್ರಕರಣದ 11 ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Published On - 9:38 am, Wed, 9 March 22