ಕೊಡಗು; ಸಿದ್ದಾಪುರ ಸಮೀಪ ಕಾಡಾನೆ ದಾಳಿಗೆ ಮಹಿಳೆ ಸಾವು, ವಾರದ ಅವಧಿಯಲ್ಲಿ ಎರಡನೇ ಘಟನೆ

Wild Elephant Attack in Kodagu Siddapur; ಬಡಗ ಗ್ರಾಮದ ನಿವಾಸಿ ಆಯಿಷಾ ಬೆಳಗಿನ ವಾಕಿಂಗ್‌ಗೆಂದು ಮನೆಯಿಂದ ಹೊರಟಿದ್ದರು. ಗ್ರಾಮದ ಮುಖ್ಯರಸ್ತೆಯಲ್ಲಿ ಕಾಡಾನೆಯೊಂದು ಎದುರಿಗೆ ಬಂದು ದಾಳಿ ಮಾಡಿದೆ. ಆನೆ ಆಕೆಯ ತಲೆಯನ್ನು ತುಳಿದಿದ್ದರಿಂದ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆಲವು ಕಾರ್ಮಿಕರು ಎಸ್ಟೇಟ್ ಕೆಲಸಕ್ಕೆ ಹೋಗುತ್ತಿದ್ದಾಗ ಘಟನೆ ಬೆಳಕಿಗೆ ಬಂದಿದೆ.

ಕೊಡಗು; ಸಿದ್ದಾಪುರ ಸಮೀಪ ಕಾಡಾನೆ ದಾಳಿಗೆ ಮಹಿಳೆ ಸಾವು, ವಾರದ ಅವಧಿಯಲ್ಲಿ ಎರಡನೇ ಘಟನೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Aug 21, 2023 | 9:13 PM

ಮಡಿಕೇರಿ, ಆಗಸ್ಟ್ 21: ಕಾಡಾನೆ ದಾಳಿಗೆ (Wild Elephant Attack) 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಡಗು (Kodagu) ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಇದು ಕಳೆದ ಒಂದು ವಾರದ ಅವಧಿಯಲ್ಲಿ ನಡೆದ ಎರಡನೇ ಘಟನೆಯಾಗಿದೆ. ಕೆಲವೇ ದಿನಗಳ ಹಿಂದೆ ದಕ್ಷಿಣ ಕೊಡಗಿನ ಅರೆಕಾಡು ಪ್ರದೇಶದಲ್ಲಿ ಕಟ್ಟೆಮಾಡು ದೇವಪ್ಪ (58) ಎಂಬವರು ಆನೆ ದಾಳಿಯಿಂದ ಮೃತಪಟ್ಟಿದ್ದರು. ಬಡಗ ಗ್ರಾಮದ ನಿವಾಸಿ ಆಯಿಷಾ ಬೆಳಗಿನ ವಾಕಿಂಗ್‌ಗೆಂದು ಮನೆಯಿಂದ ಹೊರಟಿದ್ದರು. ಗ್ರಾಮದ ಮುಖ್ಯರಸ್ತೆಯಲ್ಲಿ ಕಾಡಾನೆಯೊಂದು ಎದುರಿಗೆ ಬಂದು ದಾಳಿ ಮಾಡಿದೆ. ಆನೆ ಆಕೆಯ ತಲೆಯನ್ನು ತುಳಿದಿದ್ದರಿಂದ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕೆಲವು ಕಾರ್ಮಿಕರು ಎಸ್ಟೇಟ್ ಕೆಲಸಕ್ಕೆ ಹೋಗುತ್ತಿದ್ದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಕಾರ್ಮಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಆದರೆ, ಘಟನೆ ನಡೆದ ಎರಡು ಗಂಟೆಗಳ ನಂತರವೇ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ವನ್ಯಜೀವಿ ಸಂಘರ್ಷ ನಿವಾರಣೆಗೆ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದ ಸ್ಥಳೀಯರು, ಕೂಡಲೇ ಆನೆಯನ್ನು ಸೆರೆ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಸಹ ಆಗಮಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಆದರೆ, ಘಟನಾ ಸ್ಥಳಕ್ಕೆ ಮಡಿಕೇರಿ ಡಿಸಿಎಫ್ ಎ.ಟಿ. ಪೂವಯ್ಯ, ವಿರಾಜಪೇಟೆ ಡಿಸಿಎಫ್ ಶರಣಪ್ಪ ಮತ್ತಿತರರು ಭೇಟಿ ನೀಡಿದ್ದು, ಆನೆಯನ್ನು ಹಿಡಿಯುವುದಾಗಿ ಭರವಸೆ ನೀಡಿದ್ದಾರೆ.

ನಾವು ಹಲವಾರು ಪ್ರದೇಶಗಳಲ್ಲಿ ಅರಣ್ಯ ಪ್ರದೇಶಕ್ಕೆ ಗೇಟ್​​ಗಳನ್ನು ಅಳವಡಿಸಿದ್ದೇವೆ. ರಾತ್ರಿಯ ಸಮಯದಲ್ಲಿ ಅವುಗಳನ್ನು ಮುಚ್ಚಲಾಗುತ್ತದೆ. ಆದರೆ, ಗ್ರಾಮಸ್ಥರು ತಮ್ಮ ಪ್ರಯಾಣದ ಸಮಯದಲ್ಲಿ ಗೇಟ್‌ಗಳನ್ನು ತೆರೆದಿಡುತ್ತಾರೆ. ಆದರೂ, ಆನೆಗಳ ಓಡಾಟ ನಿಯಂತ್ರಿಸಲು ಯೋಜನೆ ಸಿದ್ಧಪಡಿಸಲಾಗುತ್ತಿದ್ದು, ಕಾಡಾನೆಗಳ ಪ್ರವೇಶ ತಡೆಯಲು ಕಾಂಕ್ರೀಟ್ ಗೋಡೆಗಳ ನಿರ್ಮಾಣಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಡಿಸಿಎಫ್ ಶರಣಪ್ಪ ಹೇಳಿದ್ದಾರೆ.

ಇದನ್ನೂ ಓದಿ: ಕೊಡಗು; ಅರೆಕಾಡು ಗ್ರಾಮದಲ್ಲಿ ಟ್ರ್ಯಾಕ್ಟರ್ ಚಾಲಕನ ಕೊಂದ ಆನೆ ಕೊನೆಗೂ ಸೆರೆ, ದುಬಾರೆ ಶಿಬಿರಕ್ಕೆ ಸ್ಥಳಾಂತರ

ಆನೆಗಳನ್ನು ಮತ್ತೆ ಕಾಡಿಗೆ ಓಡಿಸುವ ಕಾರ್ಯದಲ್ಲಿ ಕಾಡಾನೆಗಳು ನಿರತರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ದಾಳಿ ಮಾಡಿದ ಆನೆಯನ್ನು ಪತ್ತೆಹಚ್ಚಿ ಸೆರೆಹಿಡಿಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಪ್ರದೇಶದಲ್ಲಿ ಎರಡು ಆನೆಗಳನ್ನು ಸೆರೆಹಿಡಿಯಲು ನಾವು ಅನುಮತಿ ಪಡೆದಿದ್ದೇವೆ ಮತ್ತು ಕಳೆದ ವಾರ ಒಂದನ್ನು ಸೆರೆಹಿಡಿಯಲಾಗಿದೆ. ಪದೇ ಪದೇ ದಾಳಿ ಮಾಡುತ್ತಿರುವ ಮತ್ತೊಂದು ಆನೆಯನ್ನು ಪತ್ತೆಹಚ್ಚಲಾಗುತ್ತಿದ್ದು, ಶೀಘ್ರದಲ್ಲಿ ಸೆರೆ ಹಿಡಿಯಲಾಗುವುದು ಎಂದು ಅವರು ಹೇಳಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಕಟ್ಟೆಮಾಡು ದೇವಪ್ಪ ಅವರನ್ನು ಹತ್ಯೆ ಮಾಡಿದ್ದ ಆನೆಯನ್ನು ಕಳೆದ ವಾರ ಸೆರೆಹಿಡಿದು, ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿತ್ತು.

ಕೊಡಗು ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್