AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon 2023: ಕೊಡಗಿನಲ್ಲಿ ಮತ್ತೆ ಮಳೆ ಆತಂಕ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜನರಿಗೆ ಸೂಚನೆ

ಮಳೆ ಹಿನ್ನೆಲೆ ಭೂ ಕುಸಿತ ಆತಂಕ ಹೆಚ್ಚಿದ್ದು ಮಂಗಳಾದೇವಿ ನಗರ, ಚಾಮುಂಡೇಶ್ವರಿ ನಗರ, ಇಂದಿರಾ ನಗರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನಗರಸಭೆ ಮೌಖಿಕ ಆದೇಶ ನೀಡಿದೆ.

Monsoon 2023: ಕೊಡಗಿನಲ್ಲಿ ಮತ್ತೆ ಮಳೆ ಆತಂಕ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜನರಿಗೆ ಸೂಚನೆ
ಮಳೆ
ಆಯೇಷಾ ಬಾನು
| Edited By: |

Updated on:May 31, 2023 | 2:38 PM

Share

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರಂಭವಾಗುವ ಮುನ್ನವೇ ಮಳೆಯ ಆರ್ಭಟ ಜೋರಾಗಿದೆ(Monsoon Rains). ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್(​Yellow Alert) ನೀಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ಜೂನ್ 3 ರವರೆಗೆ ಮಳೆಯಾಗುವ‌ ಸಾಧ್ಯತೆ ಇದ್ದು ಜಿಲ್ಲೆಯಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಮಡಿಕೇರಿ ನಗರಸಭಾ ವ್ಯಾಪ್ತಿಯ ಹಲವು ಬಡಾವಣೆಗಳಿಗೆ ಹಾಗೂ ಅಪಾಯಕಾರಿ ಪ್ರದೇಶಗಳ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

ಮಳೆ ಹಿನ್ನೆಲೆ ಭೂ ಕುಸಿತ ಆತಂಕ ಹೆಚ್ಚಿದ್ದು ಮಂಗಳಾದೇವಿ ನಗರ, ಚಾಮುಂಡೇಶ್ವರಿ ನಗರ, ಇಂದಿರಾ ನಗರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನಗರಸಭೆ ಮೌಖಿಕ ಆದೇಶ ನೀಡಿದೆ. ಈ ಬಗ್ಗೆ ಟಿವಿ9ಗೆ ನಗರಸಭಾಧ್ಯಕ್ಷೆ ಅನಿತಾ ಪೂವಯ್ಯ ಮಾಹಿತಿ ನೀಡಿದ್ದಾರೆ. ಜಿಲ್ಲೆಯ ನದಿ ತೀರದ‌ ನಿವಾಸಿಗಳಿಗೆ ಹಾಗೂ ಸೋಮವಾರಪೇಟೆ ತಾಲೂಕಿನ ನೆಲ್ಲಿ ಹುದಿಕೇರಿ, ವಿರಾಜಪೇಟೆ ತಾಲೂಕಿನ ಕರಡಿಗೋಡು ಸೇರಿದಂತೆ ಹಲವು ಪ್ರದೇಶಗಳ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು. ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕರೆ ನೀಡಿದ್ದಾರೆ.

ಇದನ್ನೂ ಓದಿ: Viral Video: ಮಳೆಯ ಆಹ್ಲಾದಕ್ಕೆ ಮನಸೋತ ಮರಿಯಾಮೆಗಳ ವಿಡಿಯೋ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹರಪನಹಳ್ಳಿ, ಕುಷ್ಟಗಿ, ಹಗರಿಬೊಮ್ಮನಹಳ್ಳಿ, ಯಲಬುರ್ಗಾ, ಹಿರೆಕೆರೂರು, ಹಡಗಲಿ, ತ್ಯಾಗರ್ತಿ, ಶಿಗ್ಗಾಂವಿ, ಕೋಣಂದೂರು, ಶಿವಮೊಗ್ಗ, ಆನವಟ್ಟಿ, ವಿರಾಜಪೇಟೆ, ಪೊನ್ನಂಪೇಟೆ, ಮುರ್ನಾಡು, ಕೊಟ್ಟಿಗೆಹಾರ, ಜಯಪುರ, ಧರ್ಮಸ್ಥಳ, ಬನವಾಸಿ, ಬೇವೂರು, ಮುನಿರಾಬಾದ್, ಕವಡಿಮಟ್ಟಿ, ಹುಂಚದಕಟ್ಟೆ, ಹೊನ್ನಾಳಿ, ಗೋಣಿಕೊಪ್ಪಲು, ರಾಯಲ್ಪಾಡು, ಕಿರವತ್ತಿ, ಯಡ್ರಾಮಿ, ಕಲಘಟಗಿ, ದಾವಣಗೆರೆ, ಅಜ್ಜಂಪುರ, ಹೊಸಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ನಾಯಕನಹಟ್ಟಿ, ಗೋಪಾಲ್​ನಗರ, ಬೇಲೂರಿನಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:37 pm, Wed, 31 May 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?