Kodi Sri: ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗಳನ್ನ ಕಿತ್ತು ತಿನ್ನುತ್ತವೆ ಎಂದು ಘೋರ ಭವಿಷ್ಯ ನುಡಿದ ಕೋಡಿಮಠ ಶ್ರೀ

Kodi Mutt Seer Sri Shivananda Shivayogi Rajendra Swamiji: ಮಲೆನಾಡು ಬಯಲಾಗುತ್ತದೆ, ಬಯಲು ಮಲೆನಾಡಾಗುತ್ತದೆ. ನಿರೀಕ್ಷಿತ ಪ್ರದೇಶದಲ್ಲಿ ಮಳೆ ಸರಿಯಾಗಿ ಆಗುವುದಿಲ್ಲ ಎಂದೂ ಭವಿಷ್ಯ ನುಡಿದಿದ್ದಾರೆ ಕೋಡಿಮಠ ಶ್ರೀ.

Kodi Sri: ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗಳನ್ನ ಕಿತ್ತು ತಿನ್ನುತ್ತವೆ ಎಂದು ಘೋರ ಭವಿಷ್ಯ ನುಡಿದ ಕೋಡಿಮಠ ಶ್ರೀ
ಕೋಡಿಮಠ ಶ್ರೀ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 05, 2022 | 3:55 PM

ಹಾಸನ: ಹಾರನಹಳ್ಳಿ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ (Prediction). ಈ ವರ್ಷದ ಮಳೆ ಕೆಂಡಮಂಡಲ. ಈ ಬಾರಿ ಮುಂಗಾರು ಚೆನ್ನಾಗಿ ಆಗುತ್ತದೆ, ಹಿಂಗಾರು ಕಡಿಮೆಯಾಗಲಿದೆ. ಅಶಾಂತಿ, ಮತೀಯ ಗಲಭೆ, ದೊಂಬಿಗಳು, ಸಾವು, ಕೊಲೆ ನೋವುಗಳು ಹೆಚ್ಚಾಗಲಿವೆ. ವಿಶೇಷವಾಗಿ ಎಲಕ್ಟ್ರಿಕ್‌ನಿಂದ ಹೆಚ್ಚು ಅಪಾಯವಿದೆ ಎಂದು ಮಾರ್ಮಿಕವಾಗಿ ಕೋಡಿಮಠ ಶ್ರೀ ನುಡಿದಿದ್ದಾರೆ

ಮತ್ತೊಂದು ಭಯಾನಕ ಭವಿಷ್ಯ ನುಡಿದ ಕೋಡಿಮಠ ಶ್ರೀ: ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗಳನ್ನ ಕಿತ್ತು ತಿನ್ನುತ್ತವೆ ಎಂದು ಘೋರ ಭವಿಷ್ಯ ನುಡಿದಿರುವ ಕೋಡಿಮಠ ಶ್ರೀ ರಾಜಕೀಯ ವಿಪ್ಲವವಾಗಿ, ಗುಂಪುಗಳಾಗುತ್ತವೆ. ಬೆಂಕಿ, ಗಾಳಿ, ಗುಡುಗು ಸಿಡಿಲಿನಿಂದ ವಿಪರೀತ ಅನಾಹುತಗಳಾಗುತ್ತವೆ. ಭಾರತದಲ್ಲಿ ಇಲ್ಲಿಯವರೆಗೂ ಕಂಡೂ ಕೇಳರಿಯದಂತ ಬಹುದೊಡ್ಡ ಆಘಾತ ಆಗುತ್ತದೆ. ಜಗತ್ತಿನ ಸಾಮ್ರಾಟರುಗಳು ತಲ್ಲಣಗೊಳ್ಳುತ್ತಾರೆ. ಸಾವು ನೋವುಗಳು ಹೆಚ್ಚಾಗುತ್ತವೆ ಎಂದು ಕೋಡಿಮಠ ಶ್ರೀ ಆಘಾತಕಾರಿ ಭವಿಷ್ಯ ಹೇಳಿದ್ದಾರೆ.

ಮಲೆನಾಡು ಬಯಲಾಗುತ್ತದೆ, ಬಯಲು ಮಲೆನಾಡಾಗುತ್ತದೆ. ನಿರೀಕ್ಷಿತ ಪ್ರದೇಶದಲ್ಲಿ ಮಳೆ ಸರಿಯಾಗಿ ಆಗುವುದಿಲ್ಲ ಎಂದೂ ಭವಿಷ್ಯ ನುಡಿದಿದ್ದಾರೆ ಕೋಡಿಮಠ ಶ್ರೀ.

ಈ ವರ್ಷಾರಂಭದಲ್ಲಿ ಚಿಕ್ಕಬಳ್ಳಾಪುರದಲ್ಲಿ ಹೀಗೆ ಭವಿಷ್ಯ ನುಡಿದಿದ್ದ ಕೋಡಿಮಠ ಶ್ರೀ: ಮುಂದಿನ ದಿನಗಳಲ್ಲಿ ಗಾಳಿ ಗಂಡಾಂತರವಿದೆ. ಮುಂದಿನ ದಿನಗಳಲ್ಲಿ ಬರ ಹೆಚ್ಚಾಗಲಿದೆ. ಪ್ರಕೃತಿ ಅವಾಂತರಗಳು ಹೆಚ್ಚಾಗಿ ಮನುಷ್ಯರಿಗೆ ತೊಂದೆಯಾಗಿದೆ ಎಂದು ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ. ನೈಜ ಶಿಕ್ಷಣದ ಬದಲು ವ್ಯವಸ್ಥೆಯಲ್ಲಿ ಜಾತಿ ಶಿಕ್ಷಣ ಹೆಚ್ಚಾಗ್ತಿದೆ. ನ್ಯಾಯಯುತ ಧರ್ಮದ ಬದಲು ಜಾತಿ ಭೇದ ಭಾವ ಹೆಚ್ಚಾಗ್ತಿದೆ ಎಂದು ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ (ಫೆಬ್ರವರಿ 11) ಕೋಡಿಮಠದ ಡಾ. ಶಿವಾನಂದ ಶಿವಯೋಗೀಂದ್ರಶ್ರೀ ಕಳವಳ ವ್ಯಕ್ತಪಡಿಸಿದ್ದರು.

ಈ ಮೊದಲು ಕೊರೊನಾ ರೂಪಾಂತರ ಆಗುವ ಲಕ್ಷಣಗಳು ಬಹಳ ಇವೆ. ಸಂಶಯ, ಅಸಹನೆ, ದ್ವೇಷ, ರಾಜಕೀಯ ಕಲಹ ಹೆಚ್ಚಾಗುತ್ತೆ. ಆಶ್ವಿಜದಿಂದ ಸಂಕ್ರಾಂತಿಯೊಳಗೆ ರಾಷ್ಟ್ರಮಟ್ಟದಲ್ಲಿ ಅವಘಡ ಸಂಭವಿಸಲಿದೆ ಎಂದು ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಕೋಡಿಮಠದ ಡಾ. ಶಿವಾನಂದ ಶಿವಯೋಗೀಂದ್ರಶ್ರೀ ಭವಿಷ್ಯ ನುಡಿದಿದ್ದರು.

ಭವಿಷ್ಯ ಎಂಬ ವಿಚಾರವನ್ನು ಒಪ್ಪುವ ಬಹುತೇಕರು ಕೋಡಿಮಠದ ಶ್ರೀಗಳ ಭವಿಷ್ಯದ ಬಗ್ಗೆ ಬಹಳಷ್ಟು ನಂಬಿಕೆ ಇಟ್ಟುಕೊಂಡಿರುತ್ತಾರೆ. ಕೋಡಿಮಠದ ಸ್ವಾಮೀಜಿ ಭವಿಷ್ಯ ಈ ಮೊದಲು ನಿಜವಾದ ಬಗ್ಗೆ ಉದಾಹರಣೆಗಳಿವೆ. ದೇಶದಲ್ಲಿ ಬಹಳ ದೊಡ್ಡ ಗಂಡಾಂತರ ಆಗಲಿದೆ ಎಂಬ ಬಗ್ಗೆ ಈ ಮೊದಲು ಹೇಳಿದ್ದರು. ಬಳಿಕ ಸೇನಾ ವಿಮಾನ ಪತನ ಆಗಿದ್ದನ್ನು ಉಲ್ಲೇಖಿಸಿ ತಮ್ಮ ಭವಿಷ್ಯದ ಬಗ್ಗೆ ಕೋಡಿಶ್ರೀಗಳು ಹೇಳಿದ್ದರು.

ಕೊರೊನಾ ಹೆಚ್ಚಾಗಲಿದೆ ಎಂಬ ಭವಿಷ್ಯವನ್ನು ಮೂರನೇ ಅಲೆಗೂ ಮೊದಲು ನೀಡಿದ್ದರು. ಅಲ್ಲದೇ, ಮಳೆ ಹೆಚ್ಚಾಗಿ, ಅತಿವೃಷ್ಟಿ, ಪ್ರಕೃತಿ ವಿಕೋಪ ಸಂಭವಿಸಲಿರುವ ಬಗ್ಗೆಯೂ ಈ ಮೊದಲು ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದರು.

Also Read: ಗೃಹ ಬಳಕೆ ವಿದ್ಯುತ್​ ದರ ಏರಿಕೆಯಾಯ್ತು! ಏಪ್ರಿಲ್​ 1ರಿಂದಲೇ ಯೂನಿಟ್​​ಗೆ 35 ಪೈಸೆ ಹೆಚ್ಚಳ, ಲೆಕ್ಕಾಚಾರ ಇಲ್ಲಿದೆ

ಬೆಲೆ ಏರಿಕೆ ನಮಗೆ ನುಂಗಲಾರದ ತುತ್ತಾಗಿದೆ, ತಿಂಡಿ ಬೆಲೆ ಶೇ. 10 ಜಾಸ್ತಿ ಮಾಡ್ತಿದ್ದೇವೆ -ಸಹಿಸಿಕೊಳೀ ಎಂದ ಹೋಟೆಲು ಮಾಲೀಕರು

Published On - 1:25 pm, Tue, 5 April 22

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ