AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡಿಹಳ್ಳಿ ಚಂದ್ರಶೇಖರ್ ಬ್ಲ್ಯಾಕ್​ಮೇಲ್ ತಂತ್ರ ರೂಪಿಸುತ್ತಿದ್ದಾರೆ: ಬೊಮ್ಮಾಯಿ ಆರೋಪ

ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ತರುವ ಕೆಲಸ ಆಗಿದೆ. ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ನೌಕರರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್ ಬ್ಲ್ಯಾಕ್​ಮೇಲ್ ತಂತ್ರ ರೂಪಿಸುತ್ತಿದ್ದಾರೆ: ಬೊಮ್ಮಾಯಿ ಆರೋಪ
ಬಸವರಾಜ ಬೊಮ್ಮಾಯಿ
ರಾಜೇಶ್ ದುಗ್ಗುಮನೆ
|

Updated on:Dec 13, 2020 | 10:19 PM

Share

ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಮುಷ್ಕರದ ಮುಂದಾಳತ್ವ ವಹಿಸಿರುವ ಕೋಡಿಹಳ್ಳಿ ಚಂದ್ರಶೇಖರ್ ಬ್ಲಾಕ್​ಮೇಲ್ ತಂತ್ರ ರೂಪಿಸುತ್ತಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೊಮ್ಮಾಯಿ, ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ತರುವ ಕೆಲಸ ಆಗಿದೆ. ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ನೌಕರರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ರೀತಿಯ ವ್ಯಕ್ತಿಗಳ ಬಗ್ಗೆ ಹುಷಾರಾಗಿರಬೇಕು ಎಂದು ನೌಕರರಿಗೆ ಸೂಚನೆ ನೀಡಿದ್ದಾರೆ.

ಬಸ್ ಚಾಲನೆಗೆ ಮುಂದಾಗಲಿರುವ ನೌಕರರಿಗೆ ಭದ್ರತೆ: ಸಾರಿಗೆ ಮುಷ್ಕರದ ನಡುವೆಯೇ ಸರ್ಕಾರ ಸಿಬ್ಬಂದಿಗೆ ಆಫರ್​ ಒಂದನ್ನು ನೀಡಿದೆ. ನಾಳೆ ಬಸ್​ ಸಂಚಾರ ಮಾಡಲು ಮುಂದಾಗುವ ನೌಕರರಿಗೆ ಭದ್ರತೆ ಒದಗಿಸುತ್ತೇವೆ ಎಂದು ಗೃಹ ಸಚಿವ ಬೊಮ್ಮಾಯಿ ಹೇಳಿದ್ದಾರೆ. ಶನಿವಾರ ಮುಷ್ಕರದ ನಡುವೆಯೂ ಓಡಾಡಿದ್ದ ಬಸ್​ಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. ಹೀಗಾಗಿ, ಅನೇಕ ಚಾಲಕರು ಬಸ್​ ಚಾಲನೆ ಮಾಡೋಕೆ ಹಿಂಜರಿದಿದ್ದರು. ಅಂಥವರಿಗೆ ಈ ಆಫರ್​ ನೀಡಲಾಗಿದೆ.

ಚಂದ್ರಶೇಖರ್ ಸ್ವಪ್ರತಿಷ್ಠೆಯಿಂದ ತೊಂದರೆ: ಚಂದ್ರಶೇಖರ್ ಸ್ವಪ್ರತಿಷ್ಠೆಯಿಂದ ರಾಜ್ಯದ ಆರೂವರೆ ಕೋಟಿ ಜನರಿಗೆ ತೊಂದರೆ ಆಗುತ್ತಿದೆ ಎಂದು ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ. ಮುಷ್ಕರದ ಗೊಂದಲಕ್ಕೆ ಕೋಡಿಹಳ್ಳಿ ಅವರೇ ಕಾರಣ. ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ನಷ್ಟಕ್ಕೂ ಅವರು ಕಾರಣ. ರೈತರ ವಿಚಾರದಲ್ಲಿ ಹೋರಾಟಕ್ಕೆ ಕೋಡಿಹಳ್ಳಿ ಸಿದ್ಧವಿಲ್ಲ ಎಂದು ಆರೋಪಿಸಿದ್ದಾರೆ.

ನಾಳೆ ಸರ್ಕಾರಿ ಬಸ್​ ಮಾತ್ರವಲ್ಲ ಖಾಸಗಿ ಬಸ್​ ಕೂಡ ರಸ್ತೆಗಿಳಿಯಲ್ಲ!

Published On - 9:31 pm, Sun, 13 December 20

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಒಳ್ಳೆಯ ದಿನ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಒಳ್ಳೆಯ ದಿನ
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?