ಸಾರಿಗೆ ಸಚಿವರ ಪ್ರಕಟಣೆಗೆ ಕೋಡಿಹಳ್ಳಿ ಚಂದ್ರಶೇಖರ್ ಅಸಮಾಧಾನ; ಬೇಡಿಕೆ ಈಡೇರಿಸದಿದ್ದರೆ ಏ.7ರಂದು ಸಾರಿಗೆ ಸೇವೆ ಬಂದ್
ರಾಜ್ಯ ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷರಾಗಿರುವ ಚಂದ್ರಶೇಖರ್, ನಾವು ಕೇಳಿರುವ ರೀತಿಯಲ್ಲಿ ಯಾವುದೇ ಬೇಡಿಕೆ ಈಡೇರಿಸಿಲ್ಲ. ನೌಕರರು ಕೇಳಿರುವ ರೀತಿಯಲ್ಲಿ ಬೇಡಿಕೆ ಈಡೇರಿಸದಿದ್ದರೆ ಏಪ್ರಿಲ್ 7ರಂದು ಸಾರಿಗೆ ಸೇವೆ ಬಂದ್ ಮಾಡಿ ಮುಷ್ಕರ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ದರೆ ಏಪ್ರಿಲ್ 7ರಿಂದ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ಮಾಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ ಎಚ್ಚರಿಕೆ ನೀಡಿದೆ. ಸಾರಿಗೆ ನೌಕರರ 8 ಬೇಡಿಕೆ ಈಡೇರಿವೆ ಎಂದು ಸಚಿವರು ಮಾಧ್ಯಮ ಪ್ರಕಟಣೆ ನೀಡಿದ ಹಿನ್ನೆಲೆಯಲ್ಲಿ, ಸಾರಿಗೆ ಸಚಿವರ ಪ್ರಕಟಣೆಗೆ ಕೋಡಿಹಳ್ಳಿ ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷರಾಗಿರುವ ಚಂದ್ರಶೇಖರ್, ನಾವು ಕೇಳಿರುವ ರೀತಿಯಲ್ಲಿ ಯಾವುದೇ ಬೇಡಿಕೆ ಈಡೇರಿಸಿಲ್ಲ. ನೌಕರರು ಕೇಳಿರುವ ರೀತಿಯಲ್ಲಿ ಬೇಡಿಕೆ ಈಡೇರಿಸದಿದ್ದರೆ ಏಪ್ರಿಲ್ 7ರಂದು ಸಾರಿಗೆ ಸೇವೆ ಬಂದ್ ಮಾಡಿ ಮುಷ್ಕರ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆ ಈಡೇರಿಸಲಾಗಿದೆ ಎಂದು ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ ಮಾಧ್ಯಮ ಪ್ರಕಟಣೆ ನೀಡಿದ್ದರು. ಉಳಿದ ಒಂದು ಬೇಡಿಕೆಯಾದ 6ನೇ ವೇತನ ಆಯೋಗ ಜಾರಿ ಕುರಿತು ನಿಗಮಗಳ ಮಟ್ಟದಲ್ಲಿ ಸಾರಿಗೆ ನೌಕರರ ಸಂಘಟನೆಗಳ ಸಭೆ ನಡೆಸಲಾಗಿದೆ. ಸಂಘಟನೆಗಳು ಸಲಹೆ ನೀಡಲು ಸಮಯಾವಕಾಶ ಕೇಳಿವೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದರು.
ಇದೀಗ, 8 ಬೇಡಿಕೆ ಈಡೇರಿವೆ ಎಂಬ ಸಚಿವರ ಪ್ರಕಟಣೆಗೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸಾರಿಗೆ ನೌಕರರ ಕೂಟ, ನಾವು ಕೇಳಿರುವ ರೀತಿಯಲ್ಲಿ ಯಾವ ಬೇಡಿಕೆಗಳು ಈಡೇರಿಲ್ಲ ಎಂದು ಹೇಳಿದ್ದಾರೆ. ರಾಜ್ಯಾದ್ಯಂತ ಸಾರಿಗೆ ಮುಷ್ಕರ ನಡೆಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.
ಬಜೆಟ್ನಲ್ಲಿ 6 ನೇ ವೇತನ ಆಯೋಗ ವಿಚಾರ ಪ್ರಸ್ತಾಪವಾಗಿಲ್ಲ ಎಂದು ಕೋಡಿಹಳ್ಳಿ ಅಸಮಾಧಾನ ಹೊರಹಾಕಿದ್ದರು ಮಾರ್ಚ್ 8ರಂದು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ ಬಜೆಟ್ನಲ್ಲಿ ಪ್ರಸ್ತಾಪವೇ ಆಗದ 6 ನೇ ವೇತನ ಆಯೋಗ ವಿಚಾರಕ್ಕೆ ಸಂಬಂಧಿಸಿದಂತೆ, ಮಾರ್ಚ್ 16ನೇ ತಾರೀಕಿನಂದು ಮತ್ತೆ ಮುಷ್ಕರ ಕೈಗೊಳ್ಳಲು ಸಾರಿಗೆ ನೌಕರರು ಮುಂದಾಗಿದ್ದರು. ಈ ಕುರಿತಂತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿತ್ತು. ರಾಜ್ಯ ಸರ್ಕಾರಕ್ಕೆ ಏಪ್ರಿಲ್ 7ರವರೆಗೆ ಗಡುವು ನೀಡಲಾಗುತ್ತದೆ. ಆ ನಂತರವೂ ಸರ್ಕಾರ ಸ್ಪಂದಿಸದಿದ್ದರೆ, ಧರಣಿ ನಡೆಸುತ್ತೇವೆ ಎಂದು ಹೇಳಿದ್ದರು.
ಸಾರಿಗೆ ನೌಕರರ ಬೇಡಿಕೆ ಬಗ್ಗೆ ಮಾ.16ಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ. ಮನವಿ ಸಲ್ಲಿಸಿದ ದಿನದಿಂದ 22 ದಿನ ಅಂದರೆ ಏಪ್ರಿಲ್ 7ರವರೆಗೆ ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗುತ್ತದೆ. ಆದರೂ ಸರ್ಕಾರ ಸ್ಪಂದನೆ ನೀಡದಿದ್ದರೆ ಧರಣಿ ನಡೆಸುತ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಮಾರ್ಚ್ 9ರಂದು ಹೇಳಿದ್ದರು.
ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರ; ಸರ್ಕಾರ ಸ್ಪಂದಿಸದಿದ್ದರೆ ಮತ್ತೆ ಧರಣಿ ಮಾಡ್ತೇವೆ: ಕೋಡಿಹಳ್ಳಿ ಚಂದ್ರಶೇಖರ್
ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ಗಡುವು ನೀಡಿದ ಕೋಡಿಹಳ್ಳಿ ಚಂದ್ರಶೇಖರ್
Published On - 10:09 pm, Wed, 17 March 21