Sign In

By signing in or creating an account, you agree with Associated Broadcasting Company's Terms & Conditions and Privacy Policy.

Bus Strike: ಬೇಡಿಕೆ ಈಡೇರಿಸಲು ಆಗಲ್ಲ ಎಂಬ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೇಳಿಕೆ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿ – ಕೋಡಿಹಳ್ಳಿ ಚಂದ್ರಶೇಖರ್

KSRTC BMTC Bus Strike: ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ.ಮುಂದೆ ಇಟ್ಟ ಹೆಜ್ಜೆಯನ್ನು ಹಿಂದೆ ತೆಗೆಯೋ ಮಾತೇ ಇಲ್ಲ. ನಾಳೆ ಒಂದು ಬಸ್​ನ್ನೂ ರಸ್ತೆಗೆ ಇಳಿಸುವುದಿಲ್ಲ. ಸರ್ಕಾರದ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ. ಎಸ್ಮಾ ಜಾರಿ ಮಾಡಿದ್ರೂ ತಲೆ ಕೆಡಿಸಿಕೊಳ್ಳುವುದಿಲ್ಲ; ಬಸ್ ಸಿಬ್ಬಂದಿ

Bus Strike: ಬೇಡಿಕೆ ಈಡೇರಿಸಲು ಆಗಲ್ಲ ಎಂಬ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೇಳಿಕೆ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿ - ಕೋಡಿಹಳ್ಳಿ ಚಂದ್ರಶೇಖರ್
ಕೋಡಿಹಳ್ಳಿ ಚಂದ್ರಶೇಖರ್​ (ಸಂಗ್ರಹ ಚಿತ್ರ)
Follow us
guruganesh bhat
|

Updated on:Apr 06, 2021 | 1:23 PM

ಬೆಂಗಳೂರು: ಸಾರಿಗೆ ಸಿಬ್ಬಂದಿಗಳ ಬೇಡಿಕೆ ಈಡೇರಿಸಲು ಆಗಲ್ಲ ಎಂಬ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿಕೆ ಸರ್ವಾಧಿಕಾರಿ ಧೋರಣೆಯನ್ನು ಸೂಚಿಸುತ್ತದೆ. ಈಗ ಶೇ 8ರಷ್ಟು ವೇತನ ಹೆಚ್ಚಿಸುತ್ತೇವೆ ಎಂದು ಹೇಳುತ್ತಾರೆ. ಈ ಹೇಳಿಕೆ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆಗುವುದಿಲ್ಲವೇ? ಸಾಮಾನ್ಯ ಜನರು ಪ್ರಶ್ನಿಸಿದ್ರೆ ಮಾತ್ರ ನೀತಿಸಂಹಿತೆ ಉಲ್ಲಂಘನೆ ಆಗುತ್ತದೆಯೇ? ಎಂದು ಟಿವಿ9 ಮೂಲಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರವನ್ನು ಪ್ರಶ್ನಿಸಿದರು.

ಇತ್ತ ಸಾರಿಗೆ ಸಿಬ್ಬಂದಿಗಳೂ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ.ಮುಂದೆ ಇಟ್ಟ ಹೆಜ್ಜೆಯನ್ನು ಹಿಂದೆ ತೆಗೆಯೋ ಮಾತೇ ಇಲ್ಲ. ನಾಳೆ ಒಂದು ಬಸ್​ ಕೂಡಾ ರಸ್ತೆಗೆ ಇಳಿಯುವುದಿಲ್ಲ. ಸರ್ಕಾರದ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ. ಎಸ್ಮಾ ಜಾರಿ ಮಾಡಿದ್ರೂ ತಲೆ ಕೆಡಿಸಿಕೊಳ್ಳುವುದಿಲ್ಲ. 6ನೇ ವೇತನ ಆಯೋಗ ಜಾರಿಯಾಗಲೇಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಬೇಡಿಕೆ ಈಡೇರುವವರೆಗೂ ಅನಿರ್ದಿಷ್ಟಾವಧಿ ಹೋರಾಟ ಮಾಡುತ್ತೇವೆ. ಬೇಡಿಕೆ ಈಡೇರಿಸಿದರೆ ಹಾಲಿನ ಅಭಿಷೇಕ ಮಾಡುತ್ತೇವೆ ಎಂದು ಸಾರಿಗೆ ಸಿಬ್ಬಂದಿ ಸರ್ಕಾರಕ್ಕೆ ಗಂಭೀರ ಪ್ರತಿಕ್ರಿಯೆ ನೀಡಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಇಂದು ಮಾತನಾಡಿ, ಕೊವಿಡ್ ಕಾರಣ ಮುಷ್ಕರ ಮಾಡದಂತೆ ಸಾರಿಗೆ ಇಲಾಖೆ ನೌಕರರಲ್ಲಿ ಮನವಿ ಮಾಡುತ್ತೇವೆ. ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. 6ನೇ ವೇತನ ಆಯೋಗ ಜಾರಿಗೆ ಮನವಿ ಮಾಡಿದ್ದಾರೆ. ಆದರೆ ನೀತಿಸಂಹಿತೆ ಜಾರಿಯಾದ ಕಾರಣ 6ನೇ ವೇತನ ಆಯೋಗದ ಬೇಡಿಕೆ ಈಡೇರಿಸಲು ಆಗಲ್ಲ. ಸಾರಿಗೆ ಇಲಾಖೆಗೆ ಆದಾಯ ಇಲ್ಲದಿದ್ದರೂ ಲಾಕ್‌ಡೌನ್ ಸಮಯದಲ್ಲೂ ಸಂಬಳ ನೀಡಲಾಗಿದೆ ಎಂದು ಹೇಳಿದ್ದಾರೆ.

ನಾಳೆ ಸಾರಿಗೆ ನೌಕರರ ಮುಷ್ಕರ ಮಾಡಲು ಮುಂದಾದ್ರೆ ಸಾರಿಗೆ ಇಲಾಖೆಯಿಂದ ಪರ್ಯಾಯ ವ್ಯವಸ್ಥೆ ಮಾಡ್ತೇವೆ. ಸಾರಿಗೆ ನೌಕರರ ಜತೆ ಸಂಧಾನ ಪ್ರಶ್ನೆಯೇ ಇಲ್ಲ. ಬಸ್‌ಗಳಿಗೆ ಹಾನಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪೊಲೀಸ್ ಆ್ಯಕ್ಟ್, ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳುತ್ತೇವೆ. ಎಸ್ಮಾ ಜಾರಿ ಮಾಡುವ ಸಂಬಂಧವೂ ಚರ್ಚಿಸಿದ್ದೇವೆ. ಸೌರಿಗೆ ನೌಕರರು ಕೆಲಸಕ್ಕೆ ಗೈರಾದರೆ, ಸಂಬಳ ಕಡಿತ ಮಾಡುತ್ತೇವೆ. ಸಾರಿಗೆ ಇಲಾಖೆಯಿಂದ ಪ್ರತಿದಿನ 4 ಕೋಟಿ ನಷ್ಟವಾಗ್ತಿದೆ. ಇದರ ನಡುವೆಯೂ ನಾವು ಸಂಬಳವನ್ನು ನೀಡುತ್ತಿದ್ದೇವೆ. ಎಲ್ಲ ಖಾಸಗಿ ವಾಹನ ಓಡಿಸುವುದಕ್ಕೆ ಅನುಮತಿ ನೀಡುತ್ತೇವೆ. ಖಾಸಗಿ ವಾಹನಗಳಲ್ಲಿ ಓಡಾಟಕ್ಕೆ ದರ ಫಿಕ್ಸ್ ಮಾಡುತ್ತೇವೆ ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ.

(Kodihalli Chandrashekar Says Government acts like a dictator after Chief Secretary statement on Bus workers demand)

Published On - 12:51 pm, Tue, 6 April 21

Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ