ನಾಳೆಯೂ ಸಾರಿಗೆ ಸಿಬ್ಬಂದಿ ಮುಷ್ಕರ ಮುಂದುವರಿಯಲಿದೆ ಎಂದ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?

ನಾಳೆಯೂ ಸಾರಿಗೆ ಸಿಬ್ಬಂದಿ ಮುಷ್ಕರ ಮುಂದುವರಿಯಲಿದೆ ಎಂದ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?
ಕೋಡಿಹಳ್ಳಿ ಚಂದ್ರಶೇಖರ್

ಸರ್ಕಾರದ ಸಮಸ್ಯೆಯನ್ನು ಗೃಹ ಸಚಿವರು ಹೇಳಿಕೊಂಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಕೊರೊನಾ ಸೋಂಕಿನಿಂದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಕ್ವಾರಂಟೈನ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.

sandhya thejappa

|

Apr 19, 2021 | 4:10 PM


ಬೆಂಗಳೂರು: 13 ದಿನಗಳಿಂದ ನಡೆಯುತ್ತಿರುವ ಸಾರಿಗೆ ಸಿಬ್ಬಂದಿ ಮುಷ್ಕರ ನಾಳೆಯೂ ಮುಂದುವರಿಯುತ್ತದೆ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸಿಬ್ಬಂದಿ ಸತ್ಯಾಗ್ರಹಕ್ಕೂ ಮುನ್ನವೇ ಅರೆಸ್ಟ್ ಮಾಡಿದ್ದಾರೆ. ಗೃಹ ಸಚಿವರ ಜತೆ ಸಮಾಲೋಚನೆ ಮಾಡಿದ್ದೇನೆ. ಸಾರಿಗೆ ಸಿಬ್ಬಂದಿ ಮುಷ್ಕರದ ಬಗ್ಗೆಯೂ ಮಾತನಾಡಿದ್ದೇವೆ. ಮುಷ್ಕರದಿಂದ ಆಗುತ್ತಿರುವ ಸಮಸ್ಯೆ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಸರ್ಕಾರದ ಸಮಸ್ಯೆಯನ್ನು ಗೃಹ ಸಚಿವರು ಹೇಳಿಕೊಂಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಕೊರೊನಾ ಸೋಂಕಿನಿಂದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಕ್ವಾರಂಟೈನ್ ಆಗಿದ್ದಾರೆ. 2 ದಿನಗಳ ನಂತರ ಸಮಸ್ಯೆ ಇತ್ಯರ್ಥ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಎಂದು ತಿಳಿಸಿದರು.

ಮುಂದಿನ ಚಳುವಳಿ ಶಾಂತಿಯುತವಾಗಿ ನಡೆಯುತ್ತದೆ. ಯಾರೂ ಎಲ್ಲೂ ಕಲ್ಲು ಹೊಡೆಯದಂತೆ ಮನವಿ ಮಾಡುತ್ತೇನೆ. ಸರ್ಕಾರದ ಮುಂದೆ ಮೂರು ಆಯ್ಕೆ ನೀಡಿದ್ದೇವೆ. ಸರ್ಕಾರಿ ನೌಕರರನ್ನಾಗಿ ಮಾಡಬೇಕು. ಆರನೇ ವೇತನ ಆಯೋಗ ಜಾರಿ ಮಾಡಬೇಕು. 2004 ರ ಕೋರ್ಟಿನ ಆದೇಶ ಜಾರಿ ಮಾಡಬೇಕು ಎಂದು ಅಭಿಪ್ರಾಯಪಟ್ಟರು.

ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ಸಾರಿಗೆ ನೌಕರರು ಜೈಲ್ ಬರೋ ಚಳುವಳಿಯನ್ನು ಕೈಬಿಟ್ಟಿದ್ದಾರೆ. ಮುಷ್ಕರ ವಾಪಾಸ್ ಪಡೆಯುವ ಮಾತೇ ಇಲ್ಲ. ಸರ್ಕಾರದ ತೀರ್ಮಾನದವರೆಗೂ ಕಾಯುತ್ತೇವೆ. ಆರನೇ ವೇತನ ಆಯೋಗ ಜಾರಿ ಮಾಡುವವರೆಗೂ ಮುಷ್ಕರ ಮುಂದುವರೆಯುತ್ತದೆ ಎಂದು ಹೇಳಿದರು.

ಇದನ್ನೂ ಓದಿ

ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಸಿಗದೆ ಸಚಿವ ಸುರೇಶ್ ಕುಮಾರ್ ಆಪ್ತ ಕಾರ್ಯದರ್ಶಿ ಕೊರೊನಾಗೆ ಬಲಿ

ಸಿಂಗಾಪೂರದಲ್ಲಿ 25 ವರ್ಷದಲ್ಲೇ ಅತಿ ದೊಡ್ಡ ಪ್ರಮಾಣದ ಮಾದಕವಸ್ತುಗಳು ವಶಕ್ಕೆ

(Kodihalli Chandrasekhar says transport staff strike continues)

Follow us on

Related Stories

Most Read Stories

Click on your DTH Provider to Add TV9 Kannada