Kodi Mutt Swamiji: ಕರ್ನಾಟಕದಲ್ಲಿ ಜಲಪ್ರಳಯ, ಜಾಗತಿಕ ಮಟ್ಟದಲ್ಲಿ ದೊಡ್ಡ ದುರಂತ; ಕೋಡಿಮಠ ಶ್ರೀ ಭವಿಷ್ಯ

ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರಲಿದೆ. ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

Kodi Mutt Swamiji: ಕರ್ನಾಟಕದಲ್ಲಿ ಜಲಪ್ರಳಯ, ಜಾಗತಿಕ ಮಟ್ಟದಲ್ಲಿ ದೊಡ್ಡ ದುರಂತ; ಕೋಡಿಮಠ ಶ್ರೀ ಭವಿಷ್ಯ
ಕೋಡಿಮಠ ಶ್ರೀ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: Ganapathi Sharma

Updated on:Jul 01, 2023 | 2:51 PM

ಹುಬ್ಬಳ್ಳಿ: ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ, ಸ್ಥಿರ ಸರ್ಕಾರ ರಚನೆಯಾಗಲಿದೆ ಎಂದು ಚುನಾವಣಾಪೂರ್ವದಲ್ಲಿ ಭವಿಷ್ಯ ನುಡಿದಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ (Kodi Mutt Swamiji) ಇದೀಗ ಸ್ಫೋಟಕ ಭವಿಷ್ಯವೊಂದನ್ನು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಪಕ್ಷದ ಸರ್ಕಾರ ಬರಲಿದೆ, ಸ್ಥಿರ ಸರ್ಕಾರ ರಚನೆಯಾಗಲಿದೆ ಎಂಬುದಾಗಿ ಹೇಳಿದ್ದೆ. ಅದು ನಿಜ ಆಗಿದೆ. ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರಲಿದೆ. ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಭವಿಷ್ಯ ನುಡಿದಿದ್ದಾರೆ.

ಜಾಗತಿಕ ಮಟ್ಟದಲ್ಲಿ ದುರಂತ; ಕೋಡಿಮಠ ಶ್ರೀ

ಜಾಗತಿಕ ಮಟ್ಟದಲ್ಲಿ ಮೂರು ಗಂಡಾಂತರಗಳು ನಡೆಯಲಿವೆ. ಒಂದೆರಡು ರಾಷ್ಟಗಳು ಮುಚ್ಚಿ ಹೋಗಲಿವೆ ಎಂದು ಶ್ರೀಗಳು ಹೇಳಿದ್ದಾರೆ. ಜನರ ಅಕಾಲಿಕ ಮೃತ್ಯು ಆಗುವ ಸೂಚನೆ ಇದೆ. ವಿಜಯದಶಮಿಯಿಂದ ಸಂಕ್ರಾಂತಿವರೆಗೆ ಜಗತ್ತಿನಲ್ಲಿ ದುರ್ಘಟನೆಗಳು ನಡೆಯಲಿವೆ. ಆಳುವವರು ಅರಿತರೆ ಗಂಡಾತರದಿಂದ ಪಾರಾಗಬಹುದು. ಇಲ್ಲವಾದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕೋಡಿಮಠ ಶ್ರೀ ಹೇಳಿದ್ದಾರೆ.

ಕರುನಾಡಿಗೆ ಇದೆ ಆಪತ್ತು; ಕೋಡಿಮಠ ಸ್ವಾಮೀಜಿ

ಕರುನಾಡಿಗೆ ಕೆಲವೊಂದು ಆಪತ್ತುಗಳು ಇವೆ. ಕೆಲ ಸಾವು ನೋವುಗಳು ಆಗಲಿವೆ. ಆದರೆ, ದೈವ ಕೃಪೆಯಿಂದ ಪಾರಾಗಬಹುದು. ಭಾರತದಲ್ಲಿ ನಾನು ಹೇಳಿದಂಥ ಒಂದು ಘಟನೆ ಸಂಭವಿಸಲಿದೆ. ತಪ್ಪಿಸುವ ಹೊಣೆಗಾರಿಕೆ ಆಳುವವರ ಕೈಯಲ್ಲಿದೆ ಎಂದು ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳಲಿದ್ದಾರೆ. ಬಡವರಿಗೆ ಗ್ಯಾರಂಟಿ ಒಳ್ಳೆಯದೇ. ಯಾವ ಹೆಣ್ಣಿಗೆ ಸ್ವತಂತ್ರ ಇರಲಿಲ್ಲವೋ ಅಂಥ ಹೆಣ್ಣು ಈಗ ಸ್ವತಂತ್ರವಾಗಿ ಹೊರಗಡೆ ಬರುವಂತಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮತೀಯ ಗಲಭೆ ಆಗುತ್ತೆ ಅಂತಾ ಹೇಳಿದ್ದೆ, ಸಾವು ನೋವು ಆಗುತ್ತೆ ಅಂದಿದ್ದೆ ಅದು ಆಗ್ತಿದೆ ಎಂದ ಕೋಡಿಮಠ ಸ್ವಾಮೀಜಿ

ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಅಧಿಕಾರ ನಡೆಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಾಯಿಯ ವಾಸನೆ ಮೂಗಿಗೆ ಬಡಿಯುವುದಿಲ್ಲ, ಆದರೆ ಊರಿನಲ್ಲಿನ ಎಲ್ಲಾ ವಾಸನೆ ಮೂಗಿಗೆ ಬರುತ್ತದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:37 pm, Sat, 1 July 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ