ಕೋಗಿಲು ಲೇಔಟ್ ನಿರಾಶ್ರಿತರ ಬಗ್ಗೆ ಅಶೋಕ್ ಸ್ಫೋಟಕ ಮಾಹಿತಿ: ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ
ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ನಡೆದ ಸ್ಥಳಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿದ್ದಾರೆ.ವಿಪಕ್ಷ ನಾಯಕ ಆರ್. ಅಶೋಕ್, ಶಾಸಕ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಮತ್ತು ಛಲವಾದಿ ನಾರಾಯಣಸ್ವಾಮಿ ಅವರು ಪರಿಶೀಲನೆ ನಡೆಸಿದ್ದು, ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಈ ವೇಳೆ ಮಾತನಾಡಿದ ಅಶೋಕ್ ದಾಖಲೆ ಸಮೇತ ನಿರಾಶ್ರಿತರ ಬಗ್ಗೆ ಸ್ಫೋಟಕ ಆರೋಪ ಮಾಡಿದ್ದಾರೆ.
ಬೆಂಗಳೂರು, ಡಿಸೆಂಬರ್ 31: ಕೋಗಿಲು ಲೇಔಟ್‌ನಲ್ಲಿ ನಡೆದ ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ಸ್ಥಳಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ತೆರವುಗೊಂಡ ಮನೆಗಳ ನಿವಾಸಿಗಳ ಪೌರತ್ವದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಒಂದು ವರ್ಷದ ಹಿಂದಿನ ಗೂಗಲ್ ಮ್ಯಾಪ್ ದಾಖಲೆಗಳನ್ನು ಪ್ರದರ್ಶಿಸಿರುವ ಅವರು, ಈ ಪ್ರದೇಶದಲ್ಲಿ ಕಟ್ಟಡಗಳ ನಿರ್ಮಾಣ ಆಗಿರೋದು ಇತ್ತೀಚೆಗೆ ಎಂದು ತಿಳಿಸಿದ್ದಾರೆ. ಇಲ್ಲಿ ವಾಸಿಸುತ್ತಿರುವವರು ಬಾಂಗ್ಲಾದೇಶದಿಂದ ಬಂದ ಅಕ್ರಮ ವಲಸಿಗರು ಎಂದು ಆರೋಪಿಸಿದ್ದಾರೆ.
ಅಕ್ರಮ ನಿವಾಸಿಗಳಿಗೆ ವಿದ್ಯುತ್ ಸಂಪರ್ಕ ಮತ್ತು ಇತರ ಮೂಲಭೂತ ಸೌಕರ್ಯಗಳನ್ನು ಒದಗಿಸಿರುವ ಬಗ್ಗೆ ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯದ ತೆರಿಗೆದಾರರಿಗೆ ಈ ಸೌಲಭ್ಯಗಳು ಸಿಗುತ್ತಿಲ್ಲ. ಸುಮಾರು 600 ಕೋಟಿ ರೂಪಾಯಿ ಮೌಲ್ಯದ ಜಮೀನನ್ನು ಬಾಂಗ್ಲಾದೇಶದವರಿಗೆ ಸಿದ್ದರಾಮಯ್ಯ ಸರ್ಕಾರ ನೀಡಲು ಹೊರಟಿದೆ. ಇದು ಬೆಂಗಳೂರನ್ನು ಮಿನಿ ಬಾಂಗ್ಲಾದೇಶವನ್ನಾಗಿ ಮಾಡುವ ಪ್ರಯತ್ನ ಎಂದು ಅಶೋಕ್ ಕಿಡಿ ಕಾರಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
