ಕೋಲಾರದ ಅನಾಥಾಶ್ರಮದಲ್ಲಿನ 27 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ
ಅನಾಥಾಶ್ರಮದ ಒಬ್ಬ ವಿದ್ಯಾರ್ಥಿನಿಗೆ ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲಾ ಮಕ್ಕಳಿಗೂ ಕೊವಿಡ್ ಟೆಸ್ಟ್ ಮಾಡಿಸಲಾಗಿದೆ. ಬಜೇರಿಯಾ ಟ್ರಸ್ಟ್ನಿಂದ ನಡೆಸುತ್ತಿರುವ ಅನಾಥಾಶ್ರಮದಲ್ಲಿ 60ಕ್ಕೂ ಹೆಚ್ಚು ಮಕ್ಕಳಿದ್ದು, ಆ ಪೈಕಿ 27 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕೋಲಾರ: ದೇಶದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಭಯ ದಿನೇದಿನೇ ಹೆಚ್ಚಾಗುತ್ತಲೇ ಇದ್ದು, ಕರ್ನಾಟಕದಲ್ಲಿ ಈಗಾಗಲೇ ನೂತನ ನಿಯಮಾವಳಿಗಳನ್ನು ಜಾರಿಗೊಳಿಸಿ ಸೋಂಕು ಹರಡುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ. ಇದರ ನಡುವೆಯೇ ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದ್ದು ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇದೀಗ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅತ್ತಿಗಿರಿಕುಪ್ಪ ಬಳಿಯಿರುವ ಅನಾಥಾಶ್ರಮದ 27 ಮಕ್ಕಳಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, ಆತಂಕ ಮೂಡಿಸಿದೆ.
ಅನಾಥಾಶ್ರಮದ ಒಬ್ಬ ವಿದ್ಯಾರ್ಥಿನಿಗೆ ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲಾ ಮಕ್ಕಳಿಗೂ ಕೊವಿಡ್ ಟೆಸ್ಟ್ ಮಾಡಿಸಲಾಗಿದೆ. ಬಜೇರಿಯಾ ಟ್ರಸ್ಟ್ನಿಂದ ನಡೆಸುತ್ತಿರುವ ಅನಾಥಾಶ್ರಮದಲ್ಲಿ 60ಕ್ಕೂ ಹೆಚ್ಚು ಮಕ್ಕಳಿದ್ದು, ಆ ಪೈಕಿ 27 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಪಾಸಿಟಿವ್ ಬಂದ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಆಶ್ರಮವನ್ನು ಕಂಟೈನ್ಮೆಂಟ್ ಜೋನ್ ಮಾಡಿದ್ದಾರೆ.
ವಸತಿ ಶಾಲೆಯಲ್ಲಿದ್ದ 12 ವಿದ್ಯಾರ್ಥಿಗಳಿಗೆ ಕೊರೊನಾ ದೃಢ ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿದ್ದ 12 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ನಿನ್ನೆ ವರದಿಯಾಗಿದೆ. 7 ರಿಂದ 10ನೇ ತರಗತಿವರೆಗೆ 162 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ವಸತಿ ಶಾಲೆಯಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ಕೊವಿಡ್ ಪರೀಕ್ಷೆ ಮಾಡಿಸಲಾಗಿದ್ದು, 12 ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಇನ್ನೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವ ಶಂಕೆ ಇದ್ದು, ಸೋಂಕಿತ ವಿದ್ಯಾರ್ಥಿಗಳಿದ್ದ ವಸತಿ ಶಾಲೆಯನ್ನು ಸೀಲ್‌ಡೌನ್ ಮಾಡಲಾಗಿದೆ.
ಇದನ್ನೂ ಓದಿ: ಕೊರೊನಾ ವಿರುದ್ಧ ಸೂಕ್ತ ನಡವಳಿಕೆಯ ಬಗ್ಗೆ ಏಪ್ರಿಲ್ 6ರಿಂದ 21ರವರೆಗೆ ಜಾಗೃತಿ ಅಭಿಯಾನ: ಪ್ರಧಾನಿ ನರೇಂದ್ರ ಮೋದಿ
ಕೊರೊನಾ ಹೆಚ್ಚಳದ ಮಧ್ಯೆ ರಾಜ್ಯಕ್ಕೆ ಗುಡ್ ನ್ಯೂಸ್: ಕರ್ನಾಟಕಕ್ಕೆ ತುರ್ತಾಗಿ 15.25 ಲಕ್ಷ ಕೊರೊನಾ ಲಸಿಕೆ ರವಾನೆ