AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲಾರದ ಗಾರ್ಮೆಂಟ್ಸ್​ನಲ್ಲಿ 33 ಉದ್ಯೋಗಿಗಳಿಗೆ ಕೊರೊನಾ ಪಾಸಿಟಿವ್

ಕೋಲಾರ ತಾಲ್ಲೂಕು ಬೆತ್ತನಿ ಗ್ರಾಮದ ಬಳಿ ಇರುವ ಶಾಹಿ ಗಾರ್ಮೆಂಟ್ಸ್​ನ 33 ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಲಾರದ ಗಾರ್ಮೆಂಟ್ಸ್​ನಲ್ಲಿ 33 ಉದ್ಯೋಗಿಗಳಿಗೆ ಕೊರೊನಾ ಪಾಸಿಟಿವ್
ಸಂಗ್ರಹ ಚಿತ್ರ
Skanda
| Edited By: |

Updated on:Apr 05, 2021 | 9:03 AM

Share

ಕೋಲಾರ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ವೇಗವಾಗಿ ಹಬ್ಬಲು ಆರಂಭಿಸಿದೆ. ಕೋಲಾರ ತಾಲ್ಲೂಕು ಬೆತ್ತನಿ ಗ್ರಾಮದ ಬಳಿ ಇರುವ ಶಾಹಿ ಗಾರ್ಮೆಂಟ್ಸ್​ನ 33 ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾರ್ಮೆಂಟ್ಸ್​ನ ಒಟ್ಟು 900 ಜನರಿಗೆ ಕೊವಿಡ್​ ಟೆಸ್ಟ್​ ಮಾಡಿಸಲಾಗಿದ್ದು, ಆ ಪೈಕಿ 33 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ.

ಕೊರೊನಾ ಸೋಂಕಿಗೆ ತುತ್ತಾದವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಆ ಮೂಲಕ ಸೋಂಕು ಹಬ್ಬುವುದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ ಮಾಹಿತಿ ನೀಡಿದ್ದಾರೆ.

ಅನಾಥಾಶ್ರಮದ 27 ಮಕ್ಕಳಿಗೆ ಕೊರೊನಾ ಸೋಂಕು ಇನ್ನೊಂದೆಡೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅತ್ತಿಗಿರಿಕುಪ್ಪ ಬಳಿಯಿರುವ ಅನಾಥಾಶ್ರಮದ 27 ಮಕ್ಕಳಿಗೆ ಕೊವಿಡ್​ ಸೋಂಕು ದೃಢಪಟ್ಟಿದ್ದು, ಆತಂಕ ಮೂಡಿಸಿದೆ. ಅನಾಥಾಶ್ರಮದ ಒಬ್ಬ ವಿದ್ಯಾರ್ಥಿನಿಗೆ ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲಾ ಮಕ್ಕಳಿಗೂ ಕೊವಿಡ್ ಟೆಸ್ಟ್ ಮಾಡಿಸಲಾಗಿದೆ. ಬಜೇರಿಯಾ ಟ್ರಸ್ಟ್​ನಿಂದ ನಡೆಸುತ್ತಿರುವ ಅನಾಥಾಶ್ರಮದಲ್ಲಿ 60ಕ್ಕೂ ಹೆಚ್ಚು ಮಕ್ಕಳಿದ್ದು, ಆ ಪೈಕಿ 27 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಪಾಸಿಟಿವ್​ ಬಂದ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಆಶ್ರಮವನ್ನು ಕಂಟೈನ್ಮೆಂಟ್​ ಜೋನ್ ಮಾಡಿದ್ದಾರೆ.

ಇದನ್ನೂ ಓದಿ: ಕೋಲಾರದ ಅನಾಥಾಶ್ರಮದಲ್ಲಿನ 27 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ 

ಕೊರೊನಾ ವಿರುದ್ಧ ಸೂಕ್ತ ನಡವಳಿಕೆಯ ಬಗ್ಗೆ ಏಪ್ರಿಲ್ 6ರಿಂದ 21ರವರೆಗೆ ಜಾಗೃತಿ ಅಭಿಯಾನ: ಪ್ರಧಾನಿ ನರೇಂದ್ರ ಮೋದಿ

Published On - 9:03 am, Mon, 5 April 21

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?