ಕೋಲಾರ ಕಾಂಗ್ರೆಸ್​ ನಾಯಕ ಶ್ರೀನಿವಾಸ್ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

| Updated By: ರಮೇಶ್ ಬಿ. ಜವಳಗೇರಾ

Updated on: Mar 17, 2025 | 3:59 PM

ಕೋಲಾರದ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ್ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪತ್ನಿ ಕೋರಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್​​ ಪುರಸ್ಕರಿಸಿದ್ದು, ಶ್ರೀನಿವಾಸ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿ ಆದೇಶ ಹೊರಡಿಸಿದೆ. ಯಾರು ಈ ಶ್ರೀನಿವಾಸ್? ಈ ಕೊಲೆ ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ.

ಕೋಲಾರ ಕಾಂಗ್ರೆಸ್​ ನಾಯಕ ಶ್ರೀನಿವಾಸ್ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
Kolar Srinivas Murder Case
Follow us on

ಬೆಂಗಳೂರು, (ಮಾರ್ಚ್​ 17): ಕೋಲಾರದ (Kolar) ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ್ ಕೊಲೆ ಪ್ರಕರಣದ M Srinivas Murder Case)  ತನಿಖೆಯನ್ನು ಸಿಬಿಐಗೆ ನೀಡಿ ಕರ್ನಾಟಕ ಹೈಕೋರ್ಟ್​ ಇಂದು (ಮಾರ್ಚ್ 17) ಮಹತ್ವದ ತೀರ್ಪು ನೀಡಿದೆ. ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಎಂ ಶ್ರೀನಿವಾಸ್ ಅವರನ್ನು 2023 ಅಕ್ಟೋಬರ್ 23ರಂದು ಶ್ರೀನಿವಾಸಪುರ ಹೊರವಲಯದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದರು. ಈ ಸಂಬಂಧ ಶ್ರೀನಿವಾಸ್ ಅವರ ಪತ್ನಿ ಡಾ. ಎಸ್. ಚಂದ್ರಕಲಾ ಅವರು ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕೆಂದು ಹೈಕೋರ್ಟ್​ಗೆ ಮನವಿ ಮಾಡಿದ್ದರು. ಇದೀಗ ಚಂದ್ರಕಲಾ ಅವರ ಮನವಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಆದೇಶ ಹೊರಡಿಸಿದ್ದಾರೆ.

ಸ್ಥಳೀಯ ಪೊಲೀಸರು ಹಾಗೂ ಸಿಐಡಿ ಅಧಿಕಾರಿಗಳು ಸಮರ್ಪಕ ತನಿಖೆ ನಡೆಸಿಲ್ಲ. ಸತ್ಯವನ್ನು ಆಳವಾದ ನೀರಿನಲ್ಲಿ ಮುಳುಗಿಸಲಾಗಿದೆ. ಹೀಗಾಗಿ ಸಿಬಿಐ ತನಿಖೆ ಅನಿವಾರ್ಯವೆಂದ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, 3 ತಿಂಗಳಿನಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಸಿಬಿಐಗೆ ಸೂಚನೆ ನೀಡಿದೆ. ಇನ್ನು ಸಿಬಿಐ ತನಿಖೆಗೆ ಸಹಕರಿಸುವಂತೆ ಪೊಲೀಸರಿಗೂ ಸಹ ಕೋರ್ಟ್​ ಸೂಚಿಸಿದೆ.

ಇದನ್ನೂ ಓದಿ: ಕೋಲಾರ: ಗೃಹಸಚಿವ ಪರಮೇಶ್ವರ್ ಆಪ್ತ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಲಗೈಬಂಟ ಎಂ ಶ್ರೀನಿವಾಸ್ ಬರ್ಬರ ಹತ್ಯೆ

ಕೊಲೆಯ ಹಿಂದೆ ರಾಜಕೀಯ ಷಡ್ಯಂತ್ರವಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಎಂದು ಶ್ರೀನಿವಾಸ್​ ಪತ್ನಿ ಡಾ.ಎಸ್.ಚಂದ್ರಕಲಾ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇನ್ನು ತನಿಖಾಧಿಕಾರಿಗಳು ಸೂಕ್ತ ತನಿಖೆ ನಡೆಸಿಲ್ಲ. ಇಂತಹ ತನಿಖೆಯನ್ನು ಸಮರ್ಥಿಸಲು ಸಾಧ್ಯವಿಲ್ಲವೆಂದು. ಹೀಗಾಗಿ ಸಿಬಿಐ ತನಿಖೆಗೆ ವಹಿಸುವಂತೆ ಎಸ್ ಪಿಪಿ ಸಿ.ಹೆಚ್. ಹನುಮಂತರಾಯ ಮನವಿ ಮಾಡಿದ್ದರು.

ಇದನ್ನೂ ಓದಿ
ಚಿನ್ನ ಕಳ್ಳಸಾಗಣೆ​: ರನ್ಯಾಗೆ ಕಾನೂನು ಕುಣಿಕೆ ಬಿಗಿ, ಪತಿಗೆ ಬಿಗ್ ರಿಲೀಫ್
ಕೋಲಾರ: ಕಾಂಗ್ರೆಸ್ ಮುಖಂಡ ಕೊಲೆ ಪ್ರಕರಣ, ಆಸ್ಪತ್ರೆಗೆ ಪರಮೇಶ್ವರ್ ಭೇಟಿ
ಕೋಲಾರ: ಪರಮೇಶ್ವರ್, ರಮೇಶ್ ಆಪ್ತ ಎಂ ಶ್ರೀನಿವಾಸ್ ಬರ್ಬರ ಹತ್ಯೆ

ಪ್ರಕರಣದ ಹಿನ್ನೆಲೆ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ, ಜಿಲ್ಲಾಪಂಚಾಯ್ತಿ ಮಾಜಿ ಅಧ್ಯಕ್ಷರೂ ಆಗಿದ್ದ ಶ್ರೀನಿವಾಸ್ ಅವರ ಮೇಲೆ 2023ರ ಅಕ್ಟೋಬರ್ 23ರಂದು ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದರು. ಬಳಿಕ ಶ್ರೀನಿವಾಸ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದರು. ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಿರಬಹುದು. ಪರಿಚಯಸ್ಥರು ಹಾಗೂ ಶ್ರೀನಿವಾಸಪುರ ಸ್ಥಳೀಯರೇ ಕೃತ್ಯ ಎಸಗಿರಬಹುದು. ಜಮೀನು ವಿವಾದದ ಹಿನ್ನಲೆಯಲ್ಲಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ