ವಿಪ್ ಉಲ್ಲಂಘಿಸಿ ಅಡ್ಡ ಮತದಾನ; ಗುಬ್ಬಿ ಶ್ರೀನಿವಾಸ್, ಕೋಲಾರ ಶ್ರೀನಿವಾಸ ಗೌಡ ಉಚ್ಚಾಟನೆ ಮಾಡಿ ಜೆಡಿಎಸ್ ಆದೇಶ

ವಿಪ್ ಉಲ್ಲಂಘಿಸಿ ಅಡ್ಡ ಮತದಾನ; ಗುಬ್ಬಿ ಶ್ರೀನಿವಾಸ್, ಕೋಲಾರ ಶ್ರೀನಿವಾಸ ಗೌಡ ಉಚ್ಚಾಟನೆ ಮಾಡಿ ಜೆಡಿಎಸ್ ಆದೇಶ
ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್

ಗುಬ್ಬಿ ಶ್ರೀನಿವಾಸ್, ಕೋಲಾರ ಶ್ರೀನಿವಾಸ ಗೌಡ ಉಚ್ಚಾಟನೆ ಮಾಡಿ ಜೆಡಿಎಸ್ ಆದೇಶ ಹೊರಡಿಸಿದೆ. ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

TV9kannada Web Team

| Edited By: Ayesha Banu

Jun 22, 2022 | 11:23 PM

ಬೆಂಗಳೂರು: ಗುಬ್ಬಿ ಶ್ರೀನಿವಾಸ್, ಕೋಲಾರ ಶ್ರೀನಿವಾಸ ಗೌಡ ಉಚ್ಚಾಟನೆ(Expelled)  ಮಾಡಿ ಜೆಡಿಎಸ್(JDS) ಆದೇಶ ಹೊರಡಿಸಿದೆ. ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ಜೆಡಿಎಸ್ ಗುಬ್ಬಿ ಶ್ರೀನಿವಾಸ್ ಮತ್ತು ಶ್ರೀನಿವಾಸ್ ಗೌಡರನ್ನು ಉಚ್ಚಾಟನೆ ಮಾಡಲು ಜೆಡಿಎಸ್‍ ತೀರ್ಮಾನ ಮಾಡಿತ್ತು. ಸದ್ಯ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಉಚ್ಚಾಟನೆ ಮಾಡಿ ಜೆಡಿಎಸ್ ಆದೇಶ ಹೊರಡಿಸಿದೆ.

ರಾಜ್ಯಸಭೆ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ್ದ ಕೋಲಾರ ಶಾಸಕ ಕೆ. ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಇಬ್ಬರನ್ನೂ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿದೆ. ಜೆಪಿ ಭವನದಲ್ಲಿ ನಡೆದ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಕಾಶೆಂಪೂರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಇಬ್ಬರೂ ಶಾಸಕರನ್ನು ಅನರ್ಹಗೊಳಿಸಲು ವಿಧಾನಸಭಾಧ್ಯಕ್ಷರಿಗೆ ಶೀಘ್ರ ದೂರು ನೀಡಲಾಗುವುದು ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ನಾಳೆ ಅಥವಾ ನಾಡಿದ್ದು ಸ್ಪೀಕರ್​ಗೆ ದೂರು ನೀಡಲು ಜೆಡಿಎಸ್ ತೀರ್ಮಾನ ನೀಡಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: PM Kisan eKYC: ಪಿಎಂ ಕಿಸಾನ್ ಇಕೆವೈಸಿ ಅವಧಿ ವಿಸ್ತರಣೆ; ಇದನ್ನು ಮಾಡುವ ಹಂತಹಂತದ ವಿವರಣೆ ಇಲ್ಲಿದೆ

ರಾಜ್ಯಸಭೆ ಚುನಾವಣೆಯಲ್ಲಿ ನಡೆದ ಬೆಳೆವಣಿಗೆಗಳ ಬಗ್ಗೆ ಕೊಟ್ ಕಮಿಟಿ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಯಿತು. ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರು, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಜಪ್ರುಲ್ಲಾ ಖಾನ್, ಎಂ.ಕೃಷ್ಣಾರೆಡ್ಡಿ, ರಾಜಾ ವೆಂಕಟಪ್ಪ ನಾಯಕ, ಕೆ.ಎಂ.ತಿಮ್ಮರಾಯಪ್ಪ, ಟಿ.ಎ.ಶರವಣ, ಶಾರದಾ ಪೂರ್ಯನಾಯಕ್, ರುತ್ ಮನೋರಮಾ, ವಿ.ನಾರಾಯಣಸ್ವಾಮಿ, ಸಮೃದ್ಧಿ ಮಂಜುನಾಥ್, ವಿಲ್ಸನ್ ರೆಡ್ಡಿ, ಸುಧಾಕರ ಲಾಲ್, ಎಚ್.ಎಂ.ರಮೇಶ್ ಗೌಡ, ಆರ್.ಪ್ರಕಾಶ್, ಸಯ್ಯದ್ ಶಫಿ ಉಲ್ಲಾ, ನಾಸಿರ್ ಉಸ್ತಾದ್ ಹಾಗೂ ಕೋರ್ ಕಮಿಟಿ ಸಂಚಾಲಕರಾದ ಕೆ.ಎನ್.ತಿಪ್ಪೇಸ್ವಾಮಿ ಅವರು ಭಾಗವಹಿಸಿದ್ದರು. ಈ ಸಭೆಯಲ್ಲಿ ಎಚ್.ಡಿ.ದೇವೇಗೌಡರು ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರು ಕೆಲವು ಮಹತ್ವದ ಅಂಶಗಳ ಬಗ್ಗೆ ಪಕ್ಷದ ಪ್ರಮುಖರಿಗೆ ಸಲಹೆ, ಸೂಚನೆಗಳನ್ನು ನೀಡಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow us on

Related Stories

Most Read Stories

Click on your DTH Provider to Add TV9 Kannada