ಕೋಲಾರ ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳ; ಸಿಟಿ ಸ್ಕ್ಯಾನ್​ ಮಾಡಿಸಲು ಆಸ್ಪತ್ರೆ ಮುಂದೆ ಕ್ಯೂ ನಿಂತ ಸಾರ್ವಜನಿಕರು

ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್​ಗೆ ಬೇಡಿಕೆ ಹೆಚ್ಚಾಗಿದೆ. ಮೊದಲು ಪ್ರತಿದಿನ 30-40 ಸ್ಕ್ಯಾನ್ ಮಾಡಲಾಗುತ್ತಿತ್ತು, ಈಗ 100-120 ರ ವರೆಗೆ ಮಾಡಲಾಗುತ್ತಿದೆ ಎಂದು ಜಿಲ್ಲಾಸ್ಪತ್ರೆ ಸರ್ಜನ್ ಡಾ.ಜಗದೀಶ್ ಹೇಳಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳ; ಸಿಟಿ ಸ್ಕ್ಯಾನ್​ ಮಾಡಿಸಲು ಆಸ್ಪತ್ರೆ ಮುಂದೆ  ಕ್ಯೂ ನಿಂತ ಸಾರ್ವಜನಿಕರು
ಕೋಲಾರ ಜಿಲ್ಲಾಸ್ಪತ್ರೆ
Follow us
preethi shettigar
|

Updated on: May 04, 2021 | 2:04 PM

ಕೋಲಾರ: ರಾಜ್ಯದಾದ್ಯಂತ ಕೊರೊನಾ ಎರಡನೇ ಅಲೆ ಪ್ರಸರಣಗೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಮತ್ತು ಸಾವಿನ ಸಂಖ್ಯೆಯಲ್ಲೂ ಕೂಡ ಏರಿಕೆ ಕಂಡುಬಂದಿದೆ. ಸದ್ಯ ಕೋಲಾರ ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗಿದ್ದು, ಆರ್​​ಟಿಪಿಸಿಆರ್​ ಹಾಗೂ ರ್‍ಯಾಪಿಡ್ ಪರೀಕ್ಷೆಗೂ ಸಿಗದೆ ಕಣ್ತಪ್ಪಿಸಿಕೊಳ್ಳುತ್ತಿರುವ ಸೋಂಕು ಜನರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊವಿಡ್ ಪರಿಸ್ಥಿತಿ ಗಂಭೀರವಾಗುತ್ತಿದ್ದು, ಕೊರೊನಾ ಸೋಂಕಿತರು ನರಕಯಾತನೆ ಅನುಭವಿಸುವಂತಾಗಿದೆ. ಇದಕ್ಕಿಂತ ಹೆಚ್ಚಾಗಿ ಸೋಂಕಿತರು ಕೊರೊನಾ ಸೋಂಕಿನ ಲಕ್ಷಣಗಳಿಲ್ಲದೆ ಕೊನೆ ಕ್ಷಣದಲ್ಲಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ಬಂದು ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹಾಗಾಗಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಮತ್ತು ತೀವ್ರ ನಿಗಾ ಘಟಕದ ಬೆಡ್‌ಗಳಿಗೆ ಬೇಡಿಕೆ ಹೆಚ್ಚಾಗಿ ಮೃತಪಡುವವರ ಸಂಖ್ಯೆ ಹೆಚ್ಚಾಗುತ್ತಿದೆ.

ಪರಿಣಾಮ ಎಚ್ಛೆತ್ತ ಜನರು ಸ್ವಲ್ಪವೂ ತಡ ಮಾಡದೆ ಗಂಟಲು ದ್ರವದ ಪರೀಕ್ಷೆ ಮಾಡಿಸುವುದಕ್ಕೂ ಮೊದಲು ಸಿಟಿ ಸ್ಕ್ಯಾನ್ ಮಾಡಿಸಿ ತಮ್ಮ ಎಲ್ಲಾ ಗೊಂದಲಗಳಿಗೂ ತೆರೆ ಎಳೆಯುತ್ತಿದ್ದಾರೆ. ಸ್ಕ್ಯಾನ್ ಮಾಡಿಸಿದ್ದೇ ಆದಲ್ಲಿ ಕೊರೊನಾ ಸೇರಿದಂತೆ ತಮಗಿರುವ ಎಲ್ಲಾ ಅನುಮಾನಗಳಿಗೂ ಇಲ್ಲಿ ಪರಿಹಾರ ಸಿಗಲಿದೆ. ಮಾತ್ರವಲ್ಲದೆ ಶ್ವಾಸ ಕೋಶಗಳಲ್ಲಿ ತೊಂದರೆ, ಲಂಗ್ಸ್​ನಲ್ಲಿ ಆಗಿರುವ ಇನ್ಪೆಕ್ಷನ್ ಎಲ್ಲವೂ ಇಲ್ಲಿ ಗೊತ್ತಾಗುತ್ತದೆ. ಆಗ ತಕ್ಷಣ ಏನು ಚಿಕಿತ್ಸೆ ತೆಗೆದುಕೊಳ್ಳಬೇಕು. ಯಾವ ಮಟ್ಟಗಿನ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎನ್ನುವುದರ ಬಗ್ಗೆ ನಿರ್ಧಾರಕ್ಕೆ ಬರಬಹುದು ಎನ್ನುವುದು ಕೆಲವು ವೈದ್ಯರ ಲೆಕ್ಕಾಚಾರ ಹಾಗಾಗಿ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್​ ಮಾಡಿಸಲು ಜನರು ಸಾಲುಗಟ್ಟಿ ನಿಲ್ಲುತಿದ್ದಾರೆ.

ಕೊರೊನಾ ಪರೀಕ್ಷೆಗೆ ಇತ್ತೀಚೆಗೆ ಎಲ್ಲರೂ ಸಿಟಿ ಸ್ಕ್ಯಾನ್ ರಿಪೋರ್ಟ್​ನ್ನು ಹೆಚ್ಚಾಗಿ ಪರಿಗಣಿಸುತ್ತಿದ್ದಾರೆ. ಕೆಲವೊಂದು ಪ್ರಕರಣಗಳಲ್ಲಿ ಆರ್ಟಿಪಿಸಿಆರ್ ಟೆಸ್ಟ್​ನಲ್ಲಿ ಕೊರೊನಾ ನೆಗೆಟಿವ್ ಎಂದು ಬಂದಿದ್ದರು, ಕೆಲವು ರೋಗ ಲಕ್ಷಣಗಳು ಇರುವ ಹಿನ್ನೆಲೆ ಜನರು ಹೆಚ್ಚಾಗಿ ಸಿಟಿ ಸ್ಕ್ಯಾನ್ ಮೇಲೆ ಅವಲಂಬಿತರಾಗುತ್ತಿದ್ದಾರೆ, ಜೊತೆಗೆ ಕೆಲವು ಖಾಸಗಿ ವೈದ್ಯರು ಇದನ್ನೇ ಪರಿಗಣಿಸುತ್ತಿದ್ದಾರೆ ಹಾಗಾಗಿ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್​ಗೆ ಬೇಡಿಕೆ ಹೆಚ್ಚಾಗಿದೆ. ಮೊದಲು ಪ್ರತಿದಿನ 30-40 ಸ್ಕ್ಯಾನ್ ಮಾಡಲಾಗುತ್ತಿತ್ತು, ಈಗ 100-120 ರ ವರೆಗೆ ಮಾಡಲಾಗುತ್ತಿದೆ ಎಂದು ಜಿಲ್ಲಾಸ್ಪತ್ರೆ ಸರ್ಜನ್ ಡಾ.ಜಗದೀಶ್ ಹೇಳಿದ್ದಾರೆ.

ಇನ್ನೂ ಈ ಸಿಟಿ ಸ್ಕ್ಯಾನ್​ನಿಂದ ಮೃದು ಅಂಗಾಂಗಗಳು, ರಕ್ತನಾಳಗಳ ಚಲನ ವಲನ, ಉಸಿರಾಟದ ತೊಂದರೆಯಂತಹ ಸಮಸ್ಯೆಗಳು ತಿಳಿಯಲಿದೆ. ಹಾಗಾಗಿಯೇ ಕೆಲವು ಖಾಸಗಿ ಆಸ್ಪತ್ರೆಗಳು ಕೊರೊನಾ ಹೆಸರಲ್ಲಿ ರೋಗಿಗಳನ್ನ ಕಿತ್ತು ತಿನ್ನಲು ಶುರುಮಾಡಿವೆ. ಈ ಮಧ್ಯೆ ಬೆಡ್ ಇಲ್ಲ, ಆಕ್ಸಿಜನ್ ಇಲ್ಲ, ವೆಂಟಿಲೇಟರ್ ಇಲ್ಲವೆ ಇಲ್ಲ ಎನ್ನುವ ಮೂಲಕ ಜನರನ್ನ ಮತ್ತಷ್ಟು ಭಯ ಬೀಳಿಸುತ್ತಿವೆ. ಇದರಿಂದ ಎಚ್ಚೆತ್ತ ಸಾಕಷ್ಟು ಜನರು ಆರ್ಟಿಪಿಸಿಆರ್, ರ್‍ಯಾಪಿಡ್ ಆಂಟಿಜೆನ್ ಪರೀಕ್ಷೆ ಮಾಡಿಸಿ ಅದರಲ್ಲಿ ರೋಗದ ಗುಣ ಲಕ್ಷಣಗಳು ಕಂಡು ಬಂದರೆ ಸಿಟಿ ಸ್ಕ್ಯಾನ್ ಮೊರೆ ಹೋಗುತ್ತಿದ್ದರು ಆದರೆ ಈಗ ಅದರಲ್ಲಿ ಪಾಸಿಟಿವ್ ಅಥವಾ ನೆಗೆಟಿವ್​ ಏನೇ ಬಂದರು ಒಮ್ಮೆ ಸಿಟಿ ಸ್ಕ್ಯಾನ್​ ಮಾಡಿಸಿ ನೋಡೋಣ ಎನ್ನುವ ನಿರ್ಧಾರಕ್ಕೆ ಜನರು ಬಂದಿದ್ದಾರೆ ಎಂದು ರೋಗಿಯ ಸಂಬಂಧಿ ಶಂಕರ್ ಹೇಳಿದ್ದಾರೆ.

ನಮ್ಮ ಜೀವ ನಮ್ಮ ಕೈಯಲ್ಲಿದೆ ಎಂದು ಖಾಸಗಿ ಆಸ್ಪತ್ರೆಯಲ್ಲಿ ಸಾವಿರಾರು ರೂಪಾಯಿ ಕೊಟ್ಟು ಕೆಲವರು ಸಿಟಿ ಸ್ಕ್ಯಾನ್​ ಮಾಡಿಸಿಕೊಂಡರೆ, ಇನ್ನು ಕೆಲವರು ಸರ್ಕಾರಿ ಆಸ್ಪತ್ರೆಯಲ್ಲಿ ಗಂಟೆಗಟ್ಟಲೆ ಕ್ಯೂ ನಿಂತಾದರೂ ಸಿಟಿ ಸ್ಕ್ಯಾನ್​ ಮಾಡಿಸಿಕೊಂಡು ರಿಪೋರ್ಟ್​ ಪಡೆದು ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಒಟ್ಟಾರೆ ಕೊರೊನಾ ಸೋಂಕಿನಿಂದ ಉಂಟಾದ ಸಾವು-ನೋವುಗಳಿಗೆ ಎಚ್ಛೆತ್ತುಕೊಂಡ ಜನ ಸದ್ಯ ಸಿಟಿ ಸ್ಕ್ಯಾನ್ ಮಾಡಿಸಿಕೊಳ್ಳಲು ಮುಂದಾಗಿರುವುದು ಮಾತ್ರ ನಿಜ. ಅದೇನೇ ಇರಲಿ ಇನ್ನಾದರು ಜನರು ಸಾರ್ವಜನಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಧರಿಸಿ ಸೋಂಕಿನಿಂದ ದೂರವೇ ಉಳಿಯುವುದು ಉತ್ತಮ ಎನ್ನುವುದು ಮಾತ್ರ ಸತ್ಯ.

ಇದನ್ನೂ ಓದಿ:

ಕೊರೊನಾ ಸೋಂಕಿತರ ಚಿಕಿತ್ಸೆಯಲ್ಲಿ ಶತದಿನ ಪೂರೈಸಿದರೆ ವೈದ್ಯಕೀಯ ಸಿಬ್ಬಂದಿಗೆ ಕಾದಿದೆ ಬಂಪರ್​ ಕೊಡುಗೆ!

ಇಷ್ಟಕ್ಕೂ ಕೊರೊನಾ ಸೋಂಕಿತ ವ್ಯಕ್ತಿಗೆ ಆಕ್ಸಿಜನ್​ ಎಷ್ಟು ಬೇಕು? ಆಕ್ಸಿಜನ್ ಕಾನ್ಸೆಂಟ್ರೇಟ್ ಮಾತ್ರವೇ ಸಾಕಾದೀತಾ?

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ