ಏಕಾಏಕಿ ಡಿಕ್ಕಿ ಹೊಡೆದ ಬೊಲೆರೋ: ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಐವರು ದುರಂತ ಸಾವು

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೊಲೆರೋ ವಾಹನ ಮೂರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಏಕಾಏಕಿ ಡಿಕ್ಕಿ ಹೊಡೆದ ಬೊಲೆರೋ: ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಐವರು ದುರಂತ ಸಾವು
ಏಕಾಏಕಿ ಡಿಕ್ಕಿ ಹೊಡೆದ ಬೊಲೆರೋ: ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ನಾಲ್ವರು ದುರಂತ ಸಾವು
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಗಂಗಾಧರ​ ಬ. ಸಾಬೋಜಿ

Updated on:Dec 18, 2024 | 5:04 PM

ಕೋಲಾರ, ಡಿಸೆಂಬರ್​ 18: ಮೂರು ದ್ವಿಚಕ್ರ‌ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ ಮುಳಬಾಗಿಲು ತಾಲ್ಲೂಕಿನ ಎನ್.ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಕೋನಂಗುಂಟೆ ಗ್ರಾಮದ ರಾಧಪ್ಪ (45), ವೆಂಕಟರಾಮಪ್ಪ (45), ವೆಂಕಟರಾಮಪ್ಪ ಪತ್ನಿ ಅಲುವೇಲಮ್ಮ (30) ಹಾಗೂ ಇಬ್ಬರು ಅಪರಿಚಿತರು ಮೃತಪಟ್ಟಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಮನೆಗೆ ಹೋಗುತ್ತಿದ್ದ ಸಮಯದಲ್ಲಿ‌ ಈ ಘಟನೆ ಸಂಭವಿಸಿದ್ದು, ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಮತ್ತೊಂದು ಪ್ರಕರಣದಲ್ಲಿ ಕೋಲಾರ ಹೊರವಲಯದ ಶ್ರೀನಿವಾಸಪುರ ರಸ್ತೆಯ ಸೋಲಾರ್ ಸಿಟಿ ಮುಂಭಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವಂತಹ ಘಟನೆ ನಡೆದಿದೆ. ಕೋಲಾರದ ಕಡೆಯಿಂದ ಶ್ರೀನಿವಾಸಪುರಕ್ಕೆ ತೆರಳುವ ವೇಳೆ ಅವಘಡ ಸಂಭವಿಸಿದೆ.

ಇದನ್ನೂ ಓದಿ: ಪ್ರೀತಿಗಾಗಿ ಪ್ರಾಣಕೊಟ್ಟ‌ ವಿವಾಹಿತರು: ಪ್ರೇಮಿಗಳ ಲವ್ ಕಹಾನಿ ಸಾವಿನಲ್ಲಿ ಅಂತ್ಯ

ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಅಪಘಾತ ನಡೆದಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನ ತಲೆಗೆ ಗಂಭೀರ ಗಾಯವಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಡಿಕ್ಕಿಯಾಗಿ ಮಹಿಳೆ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಯಾಗಿ ಮಹಿಳೆ ದುರ್ಮರಣ ಹೊಂದಿರುವಂತಹ ಘಟನೆ ರಾಮನಗರದ ರಾಯರದೊಡ್ಡಿ ಬಳಿ ಸಂಭವಿಸಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ರೂಪಾ(44) ಮೃತ ಮಹಿಳೆ.

ಆಟೋಗೆ ಡಿಕ್ಕಿ ಬಳಿಕ ಹಲವು ವಾಹನಗಳಿಗೆ ಕಾರು ಡಿಕ್ಕೆ ಹೊಡೆದಿದೆ. ಚೇಸ್ ಮಾಡಿ ಕಾರಿನ ಚಾಲಕನನ್ನು ಪೊಲೀಸರು ಹಿಡಿದಿದ್ದು, ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಚಾಲಕ ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿರುವ ಆರೋಪ ಮಾಡಲಾಗಿದೆ. ರಾಮನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಟ್ರಾಕ್ಟರ್ ಮತ್ತು ಗ್ಯಾಸ್ ಲಾರಿ ನಡುವೆ ಭೀಕರ ಅಪಘಾತ: ಶಾಲಾ ಮಕ್ಕಳು ಜಸ್ಟ್​ ಮಿಸ್

ಇಟ್ಟಿಗೆ ತುಂಬಿದ್ದ ಟ್ರಾಕ್ಟರ್ ಮತ್ತು ಗ್ಯಾಸ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಕಾರ್ಮಿಕರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಕೂದಲಳತೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಬಳಿ ನಡೆದಿದೆ.

ಇದನ್ನೂ ಓದಿ: ಅತುಲ್ ಸಂತ್ರಸ್ತ ಅಲ್ಲ, ನಾನೇ ನಿಜವಾದ ಸಂತ್ರಸ್ತೆ: ಪೊಲೀಸರ ಮುಂದೆ ಸ್ಫೋಟಕ ಅಂಶ ಬಿಚ್ಚಿಟ್ಟ ಪತ್ನಿ

ಘಟನೆ ವೇಳೆ ಶಾಲೆ ಮುಗಿಸಿ ಮಕ್ಕಳು ಬರುತ್ತಿದ್ದ ಸಂದರ್ಭದಲ್ಲೇ ಭೀಕರ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳು ಕೂದಲಳತೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳಿಗೆ ದೇವನಹಳ್ಳಿಯ ಸರ್ಕಾರಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:42 pm, Wed, 18 December 24

ಮತ್ತೇ ಮುನ್ನೆಲೆಗೆ ಬಂದ ಐಎಎಸ್ ಮತ್ತು ಐಪಿಎಸ್ ಅಧಿಕಾರಿಣಿಗಳ ಜಗಳ
ಮತ್ತೇ ಮುನ್ನೆಲೆಗೆ ಬಂದ ಐಎಎಸ್ ಮತ್ತು ಐಪಿಎಸ್ ಅಧಿಕಾರಿಣಿಗಳ ಜಗಳ
ಯತ್ನಾಳ್ ಆರೋಪಗಳಿಗೆ ಕೌಂಟರ್ ನೀಡಿದ ಖರ್ಗೆ ಮತ್ತು ಎಂಬಿ ಪಾಟೀಲ್
ಯತ್ನಾಳ್ ಆರೋಪಗಳಿಗೆ ಕೌಂಟರ್ ನೀಡಿದ ಖರ್ಗೆ ಮತ್ತು ಎಂಬಿ ಪಾಟೀಲ್
ಉತ್ತರ ಕರ್ನಾಟಕದ ಭವ್ಯ ಪರಂಪರೆಯನ್ನು ಸದನದಲ್ಲಿ ವಿವರಿಸಿದ ಯತ್ನಾಳ್
ಉತ್ತರ ಕರ್ನಾಟಕದ ಭವ್ಯ ಪರಂಪರೆಯನ್ನು ಸದನದಲ್ಲಿ ವಿವರಿಸಿದ ಯತ್ನಾಳ್
ಬಿಳಿಗಿರಿರಂಗನಬೆಟ್ಟ ಮುಖ್ಯರಸ್ತೆಯಲ್ಲಿ ಕಾಡಾನೆಗಳ ಹಿಂಡು, ಹುಲಿ ಪ್ರತ್ಯಕ್ಷ
ಬಿಳಿಗಿರಿರಂಗನಬೆಟ್ಟ ಮುಖ್ಯರಸ್ತೆಯಲ್ಲಿ ಕಾಡಾನೆಗಳ ಹಿಂಡು, ಹುಲಿ ಪ್ರತ್ಯಕ್ಷ
ನಿವೃತ್ತಿ ಘೋಷಣೆಗೂ ಮುನ್ನ ವಿರಾಟ್ ಕೊಹ್ಲಿ ಮುಂದೆ ಕಣ್ಣೀರಿಟ್ಟ ಅಶ್ವಿನ್
ನಿವೃತ್ತಿ ಘೋಷಣೆಗೂ ಮುನ್ನ ವಿರಾಟ್ ಕೊಹ್ಲಿ ಮುಂದೆ ಕಣ್ಣೀರಿಟ್ಟ ಅಶ್ವಿನ್
ಸರ್ಕಾರೀ ಆಸ್ಪತ್ರೆಗಳ ವಿಷಯದಲ್ಲಿ ನೆಗೆಟಿವ್ ಮಾತು ಸರಿಯಲ್ಲ: ಕೋನರೆಡ್ಡಿ
ಸರ್ಕಾರೀ ಆಸ್ಪತ್ರೆಗಳ ವಿಷಯದಲ್ಲಿ ನೆಗೆಟಿವ್ ಮಾತು ಸರಿಯಲ್ಲ: ಕೋನರೆಡ್ಡಿ
ಕಣ್ಣೀರು ಅದುಮಿಟ್ಟು ನಿವೃತ್ತಿ ಘೋಷಿಸಿದ ಅಶ್ವಿನ್
ಕಣ್ಣೀರು ಅದುಮಿಟ್ಟು ನಿವೃತ್ತಿ ಘೋಷಿಸಿದ ಅಶ್ವಿನ್
ದರ್ಶನ್​ಗೆ ನಡೆದಾಡಲು ಮಗನ ಆಸರೆ; ಕುಂಟುತ್ತಲೇ ಕಾರು ಏರಿದ ನಟ
ದರ್ಶನ್​ಗೆ ನಡೆದಾಡಲು ಮಗನ ಆಸರೆ; ಕುಂಟುತ್ತಲೇ ಕಾರು ಏರಿದ ನಟ
ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್​; ಶಸ್ತ್ರಚಿಕಿತ್ಸೆ ಇಲ್ಲದೆ ಹೊರ ಬಂದ ನಟ
ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್​; ಶಸ್ತ್ರಚಿಕಿತ್ಸೆ ಇಲ್ಲದೆ ಹೊರ ಬಂದ ನಟ
ಹೆಡ್ ಔಟ್ ಮಾಡಿದ ಸಿರಾಜ್: ತೊಲಗು ಎಂದು ಸಂಭ್ರಮಿಸಿದ ಪುಟ್ಟ ಅಭಿಮಾನಿ
ಹೆಡ್ ಔಟ್ ಮಾಡಿದ ಸಿರಾಜ್: ತೊಲಗು ಎಂದು ಸಂಭ್ರಮಿಸಿದ ಪುಟ್ಟ ಅಭಿಮಾನಿ