ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಸಾರಿಗೆ ಇಲಾಖೆಯ ಜಂಟಿ ಆಯುಕ್ತೆ ಗಾಯತ್ರಿದೇವಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ನಗರದಲ್ಲಿ ಒಂದೇ ನಂಬರ್ ಪ್ಲೇಟ್ ಹಾಕಿ ಸಂಚಾರ ಮಾಡುತ್ತಿದ್ದ ಎರಡು ಖಾಸಗಿ ಬಸ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಎರಡು ಖಾಸಗಿ ಬಸ್ಗಳನ್ನು ಕೋಲಾರ ಜಿಲ್ಲೆಯ ಕೆಜಿಎಫ್ ಆರ್.ಟಿ.ಓ ಕಚೇರಿಯಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೋಲಾರ, ಡಿಸೆಂಬರ್ 15: ನಗರದಲ್ಲಿ ಒಂದೇ ನಂಬರ್ ಪ್ಲೇಟ್ ಹಾಕಿಕೊಂಡು ಸಂಚಾರ ನಡೆಸಿದ್ದ ಎರಡು ಖಾಸಗಿ ಬಸ್ಗಳನ್ನು ಆರ್ಟಿಒ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲೆಯ ಕೆಜಿಎಫ್ ತಾಲೂಕಿನ ಕೋಟಿಲಿಂಗೇಶ್ವರ ಬಳಿ ಒಂದು ಬಸ್ ವಶಕ್ಕೆ ಪಡೆಯಲಾಗಿದ್ದು, ಮಾಲೂರು ತಾಲೂಕಿನ ಹೊಸೂರು ರಸ್ತೆಯಲ್ಲಿ ಇನ್ನೊಂದು ಬಸ್ ವಶಕ್ಕೆ ಪಡೆಯಲಾಗಿದೆ. ಜಿಎಂಜಿ ಟ್ರಾವೆಲ್ಸ್ ಹೆಸರಿನ ಎರಡು ಖಾಸಗಿ ಬಸ್ಗಳಿಗೆ KL05R7522 ಒಂದೇ ನಂಬರ್ ಪ್ಲೇಟ್ ಹಾಕಿ ಸಂಚಾರ ಮಾಡಲಾಗುತ್ತಿತ್ತು. ಇದನ್ನು ಕಂಡ ಅಧಿಕಾರಿಗಳೇ ಶಾಕ್ ಆಗಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Dec 15, 2025 09:28 PM
Latest Videos

