ಬಾಲಕನಿಂದ ಅತ್ಯಾಚಾರ: ಸದ್ಯ 18 ವರ್ಷದ ಯುವತಿ 8 ತಿಂಗಳ ಗರ್ಭಿಣಿ
ಕೋಲಾರ ಜಿಲ್ಲೆಯಲ್ಲಿ ಎರಡು ಭಯಾನಕ ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. 17 ವರ್ಷದ ಬಾಲಕನೊಬ್ಬ 18 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದು, ಯುವತಿ 8 ತಿಂಗಳ ಗರ್ಭಿಣಿಯಾಗಿದ್ದಾಳೆ. ಇನ್ನೊಂದು ಪ್ರಕರಣದಲ್ಲಿ, ಆಟೋ ಚಾಲಕನೊಬ್ಬ 22 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೋಲಾರ, ಆಗಸ್ಟ್ 09: 17 ವರ್ಷದ ಬಾಲಕ 18 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೆಜಿಎಫ್ (KGF)ಉರಿಗಾಂ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಯುವತಿ 8 ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಯುವತಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಉರಿಗಾಂ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಯುವತಿ 17 ವರ್ಷದಳಾಗಿನಿಂದಲೇ ಬಾಲಕ ಅತ್ಯಾಚಾರ ಎಸಗುತ್ತಾ ಬಂದಿದ್ದಾನೆ ಎಂದು ತಿಳಿದುಬಂದಿದೆ.
ಆಟೋ ಡ್ರೈವರ್ನಿಂದ ಯುವತಿ ಮೇಲೆ ಅತ್ಯಾಚಾರ.
ಓರ್ವ ಆಟೋ ಚಾಲಕ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಶುಕ್ರವಾರ (ಆ.08) ರಾತ್ರಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಮಗರಲ್ ಗ್ರಾಮದ ಆಟೋ ಚಾಲಕ ಮಹೇಶ್ (26) ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತ ಯುವತಿ ಜಾರ್ಖಂಡ್ ಮೂಲದವರಾಗಿದ್ದು, ನರಸಾಪುರ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಶುಕ್ರವಾರ ರಾತ್ರಿ ಯುವತಿ ಮೇಲೆ ಅತ್ಯಾಚಾರ ಎಸಗಿ ಆರೋಪಿ ಮಹೇಶ್ ತಲೆಮರೆಸಿಕೊಂಡಿದ್ದನು.
ಇದನ್ನೂ ಓದಿ: ಮದುವೆಯಾಗವಂತೆ ದುಂಬಾಲು ಬಿದ್ದ ಮಹಿಳೆ: ಬಿದರ್ನ ಐಬಿಯಲ್ಲಿ ಯುವಕನ ಶವ ಪತ್ತೆ
ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಬೆಳಗಾಗುವಷ್ಟರಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಪಿಐ ದಯಾನಂದ್ ನೇತೃತ್ವದಲ್ಲಿ ಆರೋಪಿ ಮಹೇಶ್ನನ್ನು ಬಂಧಿಸಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಯುವತಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:36 pm, Sat, 9 August 25




