ಅತಿವೇಗ: KSRTC-ಖಾಸಗಿ ಬಸ್ ನಡುವೆ ಡಿಕ್ಕಿ, 10 ಜನರ ಸ್ಥಿತಿ ಗಂಭೀರ
ಕೋಲಾರ: ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ಶೆಟ್ಟಿಹಳ್ಳಿ ಗೇಟ್ ಬಳಿ ಸಂಭವಿಸಿದೆ. ಚಾಲಕರಿಬ್ಬರ ಅತಿ ವೇಗವೇ ಅಪಘಾತಕ್ಕೆ ಕಾರಣವಾಗಿದೆ. ಶ್ರೀನಿವಾಸಪುರ ಡಿಪೋಗೆ ಸೇರಿದ KSRTC ಬಸ್ ಮತ್ತು ಖಾಸಗಿ ಬಸ್ ಚಾಲಕರ ನಿರ್ಲಕ್ಷ್ಯದಿಂದಲೇ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕೋಲಾರ: ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ಶೆಟ್ಟಿಹಳ್ಳಿ ಗೇಟ್ ಬಳಿ ಸಂಭವಿಸಿದೆ. ಚಾಲಕರಿಬ್ಬರ ಅತಿ ವೇಗವೇ ಅಪಘಾತಕ್ಕೆ ಕಾರಣವಾಗಿದೆ.
ಶ್ರೀನಿವಾಸಪುರ ಡಿಪೋಗೆ ಸೇರಿದ KSRTC ಬಸ್ ಮತ್ತು ಖಾಸಗಿ ಬಸ್ ಚಾಲಕರ ನಿರ್ಲಕ್ಷ್ಯದಿಂದಲೇ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Published On - 7:18 pm, Wed, 8 January 20