ಪರಿಷತ್​ ಚುನಾವಣೆಯಲ್ಲಿ ಜೆಡಿಎಸ್​ನ ಪ್ರತಿಯೊಬ್ಬ ಶಾಸಕರಿಗೆ 50 ಲಕ್ಷ ನೀಡಲಾಗಿದೆ: ಶಾಸಕ ಕೆ.ಶ್ರೀನಿವಾಸಗೌಡ

| Updated By: ವಿವೇಕ ಬಿರಾದಾರ

Updated on: Jun 11, 2022 | 2:39 PM

ಪರಿಷತ್​ ಚುನಾವಣೆಯಲ್ಲಿ ಶಾಸಕರಿಗೆ 50 ಲಕ್ಷ ನೀಡಲಾಗಿದೆ. ಕೋಲಾರದ ಗೋವಿಂದರಾಜು MLC ಆಗುವಾಗ ಹಣ ನೀಡಿದ್ದರು ಎಂದು ಕೋಲಾರದ ಪತ್ರಕರ್ತರ ಭವನದಲ್ಲಿ ಶಾಸಕ ಕೆ.ಶ್ರೀನಿವಾಸಗೌಡ ಹೇಳಿದ್ದಾರೆ. 

ಪರಿಷತ್​ ಚುನಾವಣೆಯಲ್ಲಿ ಜೆಡಿಎಸ್​ನ ಪ್ರತಿಯೊಬ್ಬ ಶಾಸಕರಿಗೆ 50 ಲಕ್ಷ ನೀಡಲಾಗಿದೆ: ಶಾಸಕ ಕೆ.ಶ್ರೀನಿವಾಸಗೌಡ
ಕೊಲಾರ ಶಾಸಕ ಕೆ ಶ್ರಿನಿವಾಸ ಗೌಡ
Image Credit source: India Today
Follow us on

ಕೋಲಾರ:  ಪರಿಷತ್​ ಚುನಾವಣೆಯಲ್ಲಿ (MLC Election) ಶಾಸಕರಿಗೆ 50 ಲಕ್ಷ ನೀಡಲಾಗಿದೆ. ಕೋಲಾರದ ಗೋವಿಂದರಾಜು MLC ಆಗುವಾಗ ಹಣ ನೀಡಿದ್ದರು ಎಂದು ಕೋಲಾರದ ಪತ್ರಕರ್ತರ ಭವನದಲ್ಲಿ ಶಾಸಕ ಕೆ.ಶ್ರೀನಿವಾಸಗೌಡ (MLA Srinivas Gowda) ಹೇಳಿದ್ದಾರೆ.  MLC ಚುನಾವಣೆಯಲ್ಲಿ ಜೆಡಿಎಸ್​ನ (JDS) ಪ್ರತಿಯೊಬ್ಬ ಶಾಸಕರಿಗೆ 50 ಲಕ್ಷ ನೀಡಿದ್ದಾರೆ. ನನಗೂ 50 ಲಕ್ಷ ಹಣ ಕೊಡಲು ಬಂದಿದ್ದರು, ನಾನು ತೆಗೆದುಕೊಳ್ಳಲಿಲ್ಲ ಎಂದು ಹೇಳಿದರು. ನಿನ್ನೆ (ಜೂನ್​ 10)ರ ವರೆಗು ರಾಜ್ಯಸಭಾ ಚುನಾವಣೆ ರಂಗೇರಿತ್ತು. ಚುನಾವಣೆ ಮುಗಿದು ಫಲಿತಾಂಶ ಹೊರಬಂದಿದ್ದು, ಎರಡು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಇನ್ನುಮುಂದೆ ವಿಧಾನ ಪರಿಷತ್​​ ಚುನಾವಣೆಯ ಅಖಾಡ ಸಿದ್ದವಾಗಿದೆ. ಎರಡು ರಾಷ್ಟ್ರೀಯ ಪಕ್ಷಗಳು, ಪ್ರಾದೇಶಿಕ ಪಕ್ಷ ಮತ್ತು ಪಕ್ಷೇತರ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಸಾಧಿಸಲು ಎಲ್ಲಿಲ್ಲದ ಹರಸಾಹಸ ಪಡುತ್ತಿವೆ.

ಇದನ್ನು ಓದಿ: ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ! ಬೆಂಗಳೂರಿನಲ್ಲಿ ಪೊಲೀಸರಿಂದ ಕಟ್ಟೆಚ್ಚರ

ವಿಧಾನ ಪರಿಷತ್​ ಚುನಾವಣೆ

ವಿಧಾನ ಪರಿಷತ್​ನ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಪದವೀಧರ ಕ್ಷೇತ್ರಗಳ ಎರಡು ಮತ್ತು ಶಿಕ್ಷಕರ ಕ್ಷೇತ್ರಗಳ ಎರಡು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರ, ವಾಯವ್ಯ ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 19ರಂದು ಪರಿಷತ್​ ಚುನಾವಣೆಯ ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರ ಸಲ್ಲಿಕೆಗೆ ಮೇ 26 ಕೊನೆಯ ದಿನಾಂಕವಾಗಿತ್ತು. ಜೂನ್ 13ರಂದು ಮತದಾನ ಮತ್ತು ಜೂನ್ 15ರಂದು ಮತ ಎಣಿಕೆ ನಡೆಯಲಿದೆ.

ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಹನುಮಂತ ನಿರಾಣಿ, ಶ್ರೀಕಂಠೇಗೌಡ ಮತ್ತು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಸವರಾಜ ಹೊರಟ್ಟಿ, ಅರುಣ ಶಹಾಪುರ ಅವಧಿ ಜುಲೈ 7ಕ್ಕೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ.

ಇದನ್ನು ಓದಿ: ಮತೀಯ ಗಲಭೆ ಆಗುತ್ತೆ ಅಂತಾ ಹೇಳಿದ್ದೆ, ಸಾವು ನೋವು ಆಗುತ್ತೆ ಅಂದಿದ್ದೆ ಅದು ಆಗ್ತಿದೆ ಎಂದ ಕೋಡಿಮಠ ಸ್ವಾಮೀಜಿ

ವಿಧಾನ ಪರಿಷತ್​ ಚುನಾವಣೆ ಸ್ಪರ್ಧಿಸುವ ಅಭ್ಯರ್ಥಿಗಳು 

ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದ್ದು, ಲಿಂಗಾಯತರ ಕೋಟದಡಿಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಕೋಟದಡಿಯಲ್ಲಿ ಕೊಪ್ಪಳ ಮೂಲದ ಲಂಬಾಣಿ ಸಮುದಾಯದ ಹೇಮಲತಾ ನಾಯಕ್‌, ಹಿಂದುಳಿದ ವರ್ಗ ಕೋಟಾದಲ್ಲಿ ಪಕ್ಷದ ಕಚೇರಿ ಕಾರ್ಯದರ್ಶಿಯಾಗಿದ್ದ ಕೇಶವ ಪ್ರಸಾದ್‌, ದಲಿತರ ಕೋಟದಲ್ಲಿ ಎಸ್ಸಿ ಘಟಕದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರಿಗೆ ಟಿಕೆಟ್‌ ನೀಡಲಾಗಿದೆ. ಇನ್ನು ವಿಧಾನ ಪರಿಷತ್‌ನ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮಾಜಿ ಸಭಾಪತಿ ಬಸವರಾಜ್‌ ಹೊರಟ್ಟಿಗೆ ಟಿಕೆಟ್‌ ನೀಡಲಾಗಿದೆ.

ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ 2 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕೆ. ಅಬ್ದುಲ್ ಜಬ್ಬಾರ್ ಮತ್ತು ಎಂ. ನಾಗರಾಜ್ ಯಾದವ್ ಅವರನ್ನು ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಘೋಷಣೆ ಮಾಡಲಾಗಿದೆ. ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಶ್ರೀಶೈಲ ನಿಂಗಪ್ಪ ಗಡದಿನ್ನಿ ಅವರನ್ನು, ಹಾಗೂ ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಇ ಲೋಣಿ ಅವರನ್ನು ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳಾಗಿ ಘೋಷಿಸಿದ್ದಾರೆ.

ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ 1.37 ಲಕ್ಷಕ್ಕೂ ಹೆಚ್ಚು ಮತದಾರರಿದ್ದು, ವಿಜೇತ ಅಭ್ಯರ್ಥಿಯು 55,000 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆಯುವುದು ಅಗತ್ಯವಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 2:32 pm, Sat, 11 June 22