ಹಸುವಿನ ಕರು ಮೇಲೆಯೇ ಅತ್ಯಾಚಾರ ಎಸಗಿದ ಕಾಮುಕ ಶಫೀ ಉಲ್ಲಾ ಪೊಲೀಸ್ ವಶಕ್ಕೆ

ಮನುಷ್ಯರಲ್ಲದೇ ಪ್ರಾಣಿಗಳ ಮೇಲೆಯೂ ಅತ್ಯಾಚಾರ ನಡೆಸುವ ಅತ್ಯಂತ ಹೇಯ ಹಾಗೂ ಅಮಾನುಷ ಕೃತ್ಯಗಳು ಬೆಳಕಿಗೆ ಬರುತ್ತಲೇ ಇವೆ. ಇದೀಗ ಕೋಲಾರ ಜಿಲ್ಲೆಯಲ್ಲಿ ಕಾಮುಕನೊಬ್ಬ ಕರುವಿನ ಮೇಲೆ ಅತ್ಯಾಚಾರವೆಸಗಿ ಸಿಕ್ಕಿಬಿದ್ದಿದ್ದಾನೆ.

ಹಸುವಿನ ಕರು ಮೇಲೆಯೇ ಅತ್ಯಾಚಾರ ಎಸಗಿದ ಕಾಮುಕ ಶಫೀ ಉಲ್ಲಾ ಪೊಲೀಸ್ ವಶಕ್ಕೆ
ಕರು ಮೇಲೆಯೇ ಅತ್ಯಾಚಾರ ಎಸಗಿದ ಕಾಮುಕ
Edited By:

Updated on: Jan 11, 2023 | 3:08 PM

ಕೋಲಾರ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಕಾಮುಕರು ತಮ್ಮ ಲೈಂಗಿಕ ತೃಷೆ ತೀರಿಸಿಕೊಳ್ಳಲು ಪ್ರಾಣಿಗಳನ್ನು ಸಹ ಬಳಸಿಕೊಳ್ಳುತ್ತಿರುವುದು ನಾಗರಿಕ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದೆ. ಹೌದು, ಕಾಮುಕನೊಬ್ಬ ಹಸುವಿನ ಕರು ಮೇಲೆ ಕೀಚಕತನ ಮೆರೆದಿರುವ ವಿಲಕ್ಷಣ ಘಟನೆ ಕೋಲಾರದ ಜಿಲ್ಲೆಯಲ್ಲಿ ನಡೆದಿದೆ.

ಇದನ್ನೂ ಒದಿ: Crime News: ಕೊಟ್ಟಿಗೆಗೆ ನುಗ್ಗಿ ಹಸುಗಳ ಮೇಲೆ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ; ಬೇಸತ್ತು ದನಗಳನ್ನೇ ಮಾರುತ್ತಿದ್ದಾರೆ ರೈತರು

ರಾಮರೆಡ್ಡಿ ಎಂಬುವವರಿಗೆ ಸೇರಿದ ಹಸುವಿನ ಕರು ಮೇಲೆ ಶಫೀ ಉಲ್ಲಾ ಎನ್ನುವ ಕಾಮುಕ ಅತ್ಯಾಚಾರ ಎಸಗಿದ್ದಾನೆ. ಈ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಗ್ರಾಮದಲ್ಲಿ ನಡೆದಿದೆ.

ಈ ಹಿಂದೆ ಹಸುವಿನ ಮೇಲೆ ಅತ್ಯಾಚಾರ ಎಸಗಿ ಷಫೀ ಉಲ್ಲಾ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದ. ಆ ವೇಳೆ ಗ್ರಾಮಸ್ಥರೇ ಬೈದು ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದ್ರೆ, ಕಾಮುಕ ಶಫೀ ಉಲ್ಲಾ ಮತ್ತೆ ತಮ್ಮ ಹಳೇ ಚಾಳಿ ಮುಂದುವರೆಸಿದ್ದಾನೆ. ಇದರಿಂದ ಗ್ರಾಮಸ್ಥರು ಈ ಬಾರಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೇತಮಂಗಲ ಪೊಲೀಸರು ಶಫೀ ಉಲ್ಲಾನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ