ಹಿಮಾಚಲ ಪ್ರದೇಶದಲ್ಲಿ ಕರ್ತವ್ಯ ನಿರತ ಕೋಲಾರದ ಬಿಎಸ್​ಎಫ್​ ಯೋಧ ಅನಾರೋಗ್ಯದಿಂದ ನಿಧನ

ಹಿಮಾಚಲ ಪ್ರದೇಶದಲ್ಲಿ ಕರ್ತವ್ಯ ನಿರತ ಕೋಲಾರ ಮೂಲದ ಬಿಎಸ್​ಎಫ್ ಯೋಧ ಮುನಿಯಪ್ಪ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇಂದು ಮುನಿಯಪ್ಪ ಅವರ ಪಾರ್ಥಿವ ಶರೀರ ಸ್ವಗ್ರಾಮ ತಲುಪಲಿದೆ. ಇವರು ಕಳೆದ 12 ವರ್ಷಗಳಿಂದ BSFನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಹಿಮಾಚಲ ಪ್ರದೇಶದಲ್ಲಿ ಕರ್ತವ್ಯ ನಿರತ ಕೋಲಾರದ ಬಿಎಸ್​ಎಫ್​ ಯೋಧ ಅನಾರೋಗ್ಯದಿಂದ ನಿಧನ
ಹಿಮಾಚಲ ಪ್ರದೇಶದಲ್ಲಿ ಕರ್ತವ್ಯ ನಿರತ ಕೋಲಾರದ ಬಿಎಸ್​ಎಫ್​ ಯೋಧ ಮುನಿಯಪ್ಪ ಅನಾರೋಗ್ಯದಿಂದ ನಿಧನ
Edited By: Rakesh Nayak Manchi

Updated on: Dec 17, 2023 | 6:45 AM

ಕೋಲಾರ, ಡಿ.17: ಹಿಮಾಚಲ ಪ್ರದೇಶದಲ್ಲಿ (Himachal Pradesh) ಕರ್ತವ್ಯ ನಿರತ ಕೋಲಾರ (Kolar) ಮೂಲದ ಬಿಎಸ್​ಎಫ್ (BSF) ಯೋಧರೊಬ್ಬರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಮುನಿಯಪ್ಪ ನಿಧನರಾದ ಬಿಎಸ್​ಎಫ್​ ಯೋಧ.

ಕೋಲಾರ ತಾಲೂಕಿನ ಅಗ್ರಹಾರ ಸೋಮರಸನಹಳ್ಳಿಯ ನಿವಾಸಿ ಮುನಿಯಪ್ಪ ಅವರು ಕಳೆದ 12 ವರ್ಷಗಳಿಂದ ಬಿಎಸ್​​ಎಫ್​​ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮುನಿಯಪ್ಪ ಅವರ ಪಾರ್ಥಿವ ಶರೀರ ಇಂದು ಸ್ವಗ್ರಾಮ ತಲುಪಲಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಇದನ್ನೂ ಓದಿ: Video: ತನ್ನ ಮದುವೆಯಲ್ಲಿ ಹುತಾತ್ಮ ಯೋಧರ ಪತ್ನಿಯರಿಗೆ, ಗಾಯಾಳು ಯೋಧರಿಗೆ ಸನ್ಮಾನ ಮಾಡಿ ಸೈ ಅನ್ನಿಸಿಕೊಂಡ ಯೋಧ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
Loading...
Unable to load recommendations.
Follow Us