ಒಂದೇ ಮರಕ್ಕೆ ನೇಣುಬಿಗಿದುಕೊಂಡು ದಂಪತಿ ಆತ್ಮಹತ್ಯೆ; ಅನಾಥವಾದವು ಮಕ್ಕಳು

ಅವರಿಬ್ಬರು ಕಳೆದ ಹದಿಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರು ಮಕ್ಕಳೂ ಕೂಡ ಇದ್ದರು. ಪುಟ್ಟದೊಂದು ಸಂಸಾರ ನೆಮ್ಮದಿಯಿಂದ ಇತ್ತು. ಆದರೆ, ಇಂದು(ಗುರುವಾರ) ಬೆಳಂಬೆಳಿಗ್ಗೆ ಅದೇನಾಯ್ತೋ ಏನೋ! ಗಂಡ ಹೆಂಡತಿ ಇಬ್ಬರೂ ಒಂದೇ ಹಗ್ಗದ ಕುಣಿಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಒಂದೇ ಮರಕ್ಕೆ ನೇಣುಬಿಗಿದುಕೊಂಡು ದಂಪತಿ ಆತ್ಮಹತ್ಯೆ; ಅನಾಥವಾದವು ಮಕ್ಕಳು
ದಂಪತಿ ಆತ್ಮಹತ್ಯೆ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 11, 2024 | 10:56 PM

ಕೋಲಾರ, ಜು.11: ಕೋಲಾರ(Kolar)ತಾಲೂಕಿನ ಕಲ್ವಮಂಜಲಿ ಗ್ರಾಮದಲ್ಲಿ ಇಂದು(ಗುರುವಾರ) ಬೆಳ್ಳಂ ಬೆಳಿಗ್ಗೆಯೇ ಇಡೀ ಗ್ರಾಮಕ್ಕೆ ಗ್ರಾಮವೇ ಬೆಚ್ಚಿ ಬಿದ್ದಿತ್ತು. ಗ್ರಾಮದ ಲಕ್ಷ್ಮಣ್​ ಹಾಗೂ ಮಾಲಾಶ್ರೀ ಎಂಬ ದಂಪತಿ ಊರ ಹೊರಗಿನ ಮರವೊಂದಕ್ಕೆ ಒಂದೇ ಹಗ್ಗದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಓಡೋಡಿ ಬಂದಿದ್ದ ಗ್ರಾಮಸ್ಥರಿಗೆ ಒಂದು ರೀತಿಯ ಶಾಕ್​ ಆಗಿತ್ತು. ನಿನ್ನೆ(ಜು.10) ಅಷ್ಟೊಂದು ಅನ್ಯೋನ್ಯವಾಗಿದ್ದ ಕುಟುಂಬಕ್ಕೆ ದಿಢೀರ್​ ಏನಾಯ್ತು ಎಂದು ಬಂದಿದ್ದವರು ತಾವೇ ಪ್ರಶ್ನೆ ಮಾಡಿಕೊಳ್ಳುತ್ತಿದ್ದರು.

ಘಟನೆ ವಿವರ?

ಕಲ್ವಮಂಜಲಿ ಗ್ರಾಮದ ಲಕ್ಷ್ಮಣ್​ ಹಾಗೂ ಮಾಲಶ್ರೀ ಕಳೆದ ಹದಿಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಪ್ರೀತಿಯಿಂದ ಸಂಸಾರ ಮಾಡುತ್ತಿದ್ದ ಅವರಿಗೆ ಒಂದು ಹೆಣ್ಣು ಒಂದು ಗಂಡು ಮಕ್ಕಳಿದ್ದರು. ಪ್ರೀತಿಸಿ ಮದುವೆಯಾಗಿದ್ದ ಕುಟುಂಬ ಕಷ್ಟ ಪಟ್ಟು ದುಡಿಯುತ್ತಿದ್ದರು. ಲಕ್ಷ್ಮಣ್​ ಆಟೋ ಓಡಿಸುತ್ತಿದ್ದರೆ, ಮಾಲಾಶ್ರೀ ಕಲ್ವಮಂಜಲಿ ಗ್ರಾಮದಲ್ಲೇ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಕಷ್ಟು ಪಟ್ಟು ದುಡಿದು ಸ್ವಂತ ಮನೆ ಕಟ್ಟಿಕೊಂಡಿದ್ದರು. ಮಕ್ಕಳನ್ನು ವೇಮಗಲ್​ನಲ್ಲಿ ಖಾಸಗಿ ಶಾಲೆಗೆ ಕಳುಹಿಸುತ್ತಿದ್ದರು. ಇಷ್ಟೆಲ್ಲ ಇದ್ದರೂ ಕೂಡ ಇಂದು(ಜು.11) ಡೆತ್​ ನೋಟ್​ ಬರೆದಿಟ್ಟುಕೊಂಡು ಲಕ್ಷ್ಮಣ ಹಾಗೂ ಆತನ ಪತ್ನಿ ಮಾಲಾಶ್ರೀ ಇಬ್ಬರೂ ಮನೆಯ ಬಳಿಯಲ್ಲೇ ಇರುವ ಒಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇಂದು ಬೆಳಗಿನ ಜಾವ 3 ಗಂಟೆಗೆ ಲಕ್ಷ್ಮಣ್​ ಎಂದಿನಂತೆ ಮಾರುಕಟ್ಟೆಗೆ ಹೋಗಿ ತರಕಾರಿ ತಂದಿದ್ದಾನೆ. ಆದಾದ ನಂತರ ಇಬ್ಬರ ನಡುವೆ ಅದೇನು ಮಾತುಕಥೆ ನಡೆಯಿತೋ ಗೊತ್ತಿಲ್ಲ. ಬೆಳಿಗ್ಗೆಯಾಗುವಷ್ಟರಲ್ಲಿ ಗಂಡ ಹೆಂಡತಿ ಇಬ್ಬರೂ ಸಾವಿನ ಮನೆ ಸೇರಿದ್ದರು. ಇನ್ನು ವಿಷಯ ತಿಳಿದು ಸ್ಥಳಕ್ಕೆ ಬಂದ ವೇಮಗಲ್ ಪೊಲೀಸರು ಪರಿಶೀಲನೆ ವೇಳೆ ಲಕ್ಷ್ಮಣ ಬಳಿಯಲ್ಲಿ ಒಂದು ಡೆತ್​ ನೋಟ್​ ಸಿಕ್ಕಿದ್ದು, ಅದರಲ್ಲಿ ತಾನು ಮಾನಸೀಕ ಕಾಯಿಲೆಯಿಂದ ಬಳಲುತ್ತಿದ್ದು, ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಬರೆದಿದ್ದಾನೆ. ತಂದೆ ಇಲ್ಲದ ಮಕ್ಕಳು ಸಮಾಜದಲ್ಲಿ ಬದುಕೊದು ಕಷ್ಟ ಹಾಗಾಗಿ ನನ್ನ ಜೊತೆಗೆ ನನ್ನ ಮಕ್ಕಳನ್ನು ಕರೆದುಕೊಂಡು ಹೋಗುತ್ತೇನೆಂದು ಬರೆದಿದ್ದಾನೆ. ಅಲ್ಲದೆ ನನ್ನ ಸಾವಿಗೆ ನಾನೇ ಕಾರಣ ನಾನೇ ಸ್ವ ಇಚ್ಚೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಇದರಲ್ಲಿ ನನ್ನ ಹೆಂಡತಿ ಮಾಲಾಶ್ರೀ ಪಾತ್ರವಿಲ್ಲ, ನನ್ನ ಸಾವಿನ ನಂತರವೂ ಅವಳಿಗೆ ಯಾವುದೇ ತೊಂದರೆ ಕೊಡಬೇಡಿ ಎಂದು ಲಕ್ಷ್ಮಣ ಬಳಿ ಸಿಕ್ಕ ಡೆತ್​ ನೋಟ್​ನಲ್ಲಿ ಬರೆಯಲಾಗಿದೆ.
ಆದರೆ, ಇಲ್ಲಿ ಗಂಡ ಹೆಂಡತಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡು ಮಕ್ಕಳನ್ನು ಅನಾಥ ಮಾಡಿ ಹೋಗಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ವೇಮಗಲ್ ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ. ಒಟ್ಟಾರೆ ಪ್ರೀತಿಸಿ ಮದುವೆಯಾಗಿ ಸುಂದರವಾದ ಸಂಸಾರ ನಡೆಸುತ್ತಿದ್ದ ಕುಟುಂಬಕ್ಕೆ ಸಾವಿನ ಆಘಾತ ಬಂದೊದಗಿದೆ. ಚೆನ್ನಾಗಿದ್ದ ಸಂಸಾರಕ್ಕೆ ಏನಾಯ್ತು? ಆತ್ಮಹತ್ಯೆ ದಾರಿ ಹಿಡಿದಿದ್ದಾರೂ ಯಾಕೆ ಎನ್ನುವ  ಹಲವು ಪ್ರಶ್ನೆಗಳು ಕಾಡುತ್ತಿದ್ದು. ಸದ್ಯ ಪೊಲೀಸರ ತನಿಖೆಯಿಂದ ಸಾವಿನ ಸತ್ಯಾಂಶ ಹೊರಬೇಕಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ