AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಕಿಂಗ್! ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿದ ಫಸ್ಟ್​ ಪಿಯು ವಿದ್ಯಾರ್ಥಿನಿ, ಇಷ್ಟಕ್ಕೆಲ್ಲಾ ಕಾರಣ ಯಾರು?

ಇನ್ನೇನು ಶಾಲಾ ಶಿಕ್ಷಣ ಮುಗಿಸಿ ಕಾಲೇಜು ಮೆಟ್ಟಿಲು ಹತ್ತಿರುವ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾರೆ. ಅರೇ ಇದೇನಿದು ಎಂದು ಅಚ್ಚರಿಯಾದರೂ ಸತ್ಯ. ಹೌದು...ಪ್ರಥಮ ಪಿಯುಸಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿ ಕಾಲೇಜಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದು ಬೇರೆ ರಾಜ್ಯ-ದೇಶದಲ್ಲಿ ನಡೆದ ಘಟನೆಯಲ್ಲ. ಬದಲಿಗೆ ಕರ್ನಾಟಕದಲ್ಲಿ ಇಂತಹದೊಂದು ಘಟನೆ ಬೆಳಕಿಗೆ ಬಂದಿದೆ.

ಶಾಕಿಂಗ್! ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿದ ಫಸ್ಟ್​ ಪಿಯು ವಿದ್ಯಾರ್ಥಿನಿ, ಇಷ್ಟಕ್ಕೆಲ್ಲಾ ಕಾರಣ ಯಾರು?
ಪ್ರಾತಿನಿಧಿಕ ಚಿತ್ರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Jul 02, 2024 | 9:01 PM

Share

ಕೋಲಾರ, (ಜುಲೈ 02): ಅಪ್ರಾಪ್ತ ಬಾಲಕಿ ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದರಿಂದ ಕಾಲೇಜು ಉಪನ್ಯಾಸಕರು, ಸಹಪಾಠಿಗಳು ದಂಗಾಗಿದ್ದಾರೆ.

ಸದ್ಯ  ವಿದ್ಯಾರ್ಥಿಯನ್ನು ಸಹ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಕೋಲಾರ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಮಗು ಕರುಣಿಸಿದ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: ಗಂಡು ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ; ಸಹೋದರ ಅರೆಸ್ಟ್, ಪ್ರಾಚಾರ್ಯ ಹಾಗೂ ವಾರ್ಡನ್ ಅಮಾನತು

ಅಚ್ಚರಿ ಏನಂದರೆ ಈ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಉದ್ಭವಿಸಿವೆ. ವಿದ್ಯಾರ್ಥಿನಿಗೆ ತಾನು ಗರ್ಭಿಣಿ ಎನ್ನುವುದು ಗೊತ್ತೇ ಇರಲಿಲ್ವಾ? ಅಥವಾ ಮನೆಯಲ್ಲಿ ಪೋಷಕರು, ಬಾಲಕಿಯ ದೇಹದಲ್ಲಿ ಬದಲಾವಣೆ ಗಮನಿಸಿಲ್ವಾ ಅಂತ?  ಹೀಗೆ ಹತ್ತು ಹಲವು ಪ್ರಶ್ನೆಗಳು ಉದ್ಭವಿಸಿವೆ.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಂತ್ರಸ್ತ ವಿದ್ಯಾರ್ಥಿನಿಯ ಮಾಹಿತಿ ಮೇರೆಗೆ ಇದಕ್ಕೆ ಕಾರಣವಾದವನ್ನು ಬಂಧನಕ್ಕೆ ಬಲೆ ಬೀಸಿದ್ದಾರೆ. ಏನೇ ಆಗಲಿ ಓದುವ, ಆಡುವ ವಯಸ್ಸಿನಲ್ಲಿ ಬಾಲಕಿ ಮಗುವಿಗೆ ಜನ್ಮ ನೀಡಿರುವುದು ದುರಂತ. ಅದಕ್ಕೆ ಯುವತಿಯರು ಅಪ್ರಾಪ್ತ ವಯಸ್ಸಿನಲ್ಲೇ ಪ್ರೀತಿ ಪ್ರೇಮ ಎನ್ನುವ ಹುಚ್ಚಾಟಕ್ಕೆ ಹೋಗಬಾರದು.

2023ರಲ್ಲೂ ಇಂಥದ್ದೇ ಒಂದು ಘಟನೆ ನಡೆದಿತ್ತು

ಕೋಲಾರದ ಕಾಲೇಜುವೊಂದರಲ್ಲಿ 2023ರಲ್ಲೂ ಇಂಥದ್ದೇ ಒಂದು ಘಟನೆ ನಡೆದಿತ್ತು. ಬಾಲಕಿ ಕಾಲೇಜಿನ ಶೌಚಾಲಯದಲ್ಲಿ ಮಗುವನ್ನು ಸಾಯಿಸಿ ಅದರೊಳಗೆ‌ ಹಾಕಿ ಘಟನೆ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು ಎನ್ನುವ ಅಂಶ ಇದೀಗ ಬೆಳಕಿಗೆ ಬಂದಿದೆ.

ಕೋಲಾರ ನಗರದ ಹೊರವಲಯದ ಖಾಸಗಿ ಕಾಲೇಜುವೊಂದರಲ್ಲಿ2023ರಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಬಾಲಕಿಯೊಬ್ಬಳು ಶೌಚಾಲಯದಲ್ಲಿ ಮಗು ಜನ್ಮ ನೀಡಿದ್ದಳು. ಆದ್ರೆ, ಆ ಬಾಲಕಿ ಮಗುವಿನ ಕತ್ತು ಹಿಸುಕಿ ಸಾಯಿಸಿ ಶೌಚಾಲಯದೊಳಗೆ ತುರುಕಿದ್ದಳು. ನಂತರ ತಾಯಿಯನ್ನು ಕರೆಸುವಂತೆ ಉಪನ್ಯಾಸಕರಿಗೆ ಹೇಳಿದ್ದಳು. ನಂತರ ಸ್ವಚ್ಛತಾ ಸಿಬ್ಬಂದಿ ಶೌಚಾಲಯ ಸ್ವಚ್ಛಗೊಳಿಸಲು ಹೋದಾಗ ಮಗುವಿರುವುದು ಪತ್ತೆಯಾಗಿತ್ತು. ವಿಚಾರಣೆ ನಡೆಸಿದಾಗ ಬಾಲಕಿ ತಾನೇ ಮಗುವನ್ನು ಸಾಯಿಸಿರುವುದಾಗಿ ಒಪ್ಪಿಕೊಂಡಿದ್ದಳು.

ಬಾಲಕಿಯು ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಯುವಕನ ಪರಿಚಯ ಮಾಡಿಕೊಂಡು ಆತನೊಂದಿಗೆ ಸಲುಗೆ ಇಟ್ಟುಕೊಂಡಿದ್ದಳು ಎಂದು ತಿಳಿದು ಬಂದಿದೆ. ಈಗ ಮತ್ತದೇ ರೀತಿಯ ಘಟನೆ ಮರುಕಳಿಸಿದ್ದು , ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕಿಗೆ ಕಾಲೇಜಿನ ಶೌಚಾಲಯದಲ್ಲಿ ಹೆರಿಗೆಯಾಗಿದೆ, ಸದ್ಯ ಆರೋಪಿ ಅನಿಲ್ ಕುಮಾರ್ ನನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹಾಸ್ಟೆಲ್​ನಲ್ಲೇ ಮಗುವಿಗೆ ಜನ್ಮ ನೀಡಿದ್ದ ವಿದ್ಯಾರ್ಥಿನಿ

ಇನ್ನು ಕಳೆದ ವರ್ಷದ ಅಂದರೆ 2023 ಡಿಸೆಂಬರ್​​ನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಹಾಸ್ಟೆಲ್​ನಲ್ಲೇ ಮಗುವಿಗೆ ಜನ್ಮ ನೀಡಿರುವ ಪ್ರಕರಣ ಕಲಬುರಗಿಯಲ್ಲಿ ಬೆಳಕಿಗೆ ಬಂದಿತ್ತು. ಬಳಿಕ ನವಜಾತ ಮಗುವಿನೊಂದಿಗೆ ವಿದ್ಯಾರ್ಥಿಯನ್ನು ಕಲಬುರಗಿಯ ಅಮೂಲ್ಯ ಶಿಶು ಗೃಹಕ್ಕೆ ದಾಖಲಿಸಲಾಗಿತ್ತು. ನಂತರ ಪೊಲೀಸರು ಪ್ರರಕಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಬಾಲಕಿ ಮಗುವಿಗೆ ಜನ್ಮ ನೀಡಲು ಕಾರಣವಾದವನು ಅಪ್ರಾಪ್ತೆಯ ಸೋದರ ಸಂಬಂಧಿ ಎನ್ನುವುದು ಗೊತ್ತಾಗಿದೆ. ಬಳಿಕ ಆತನನ್ನು ಪತ್ತೆ ಮಾಡಿ ಪೊಕ್ಸೋ ಕಾಯ್ದೆಯಡಿಯಲ್ಲಿ ಬಂಧಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:21 pm, Tue, 2 July 24