ತಾಯಿಯ ಸಮಾಧಿ ಪಕ್ಕದಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಯುವಕನೊಬ್ಬ ತಾಯಿಯ ಸಮಾಧಿ ಪಕ್ಕದಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶ್ರೀನಿವಾಸಪುರ ತಾಲೂಕಿನ ತಾಡಿಗೊಳ್ ಕ್ರಾಸ್​​ನಲ್ಲಿ ಪ್ರವೀಣ್​​ ಆತ್ಮಹತ್ಯೆ ಮಾಡಿಕೊಂಡ ಯುವಕ. ಚಾಲಕನಾಗಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಪ್ರವೀಣ್​​ ತನ್ನ ಊರಿನಲ್ಲಿ ತಾಯಿಯ ಸಮಾಧಿ ಪಕ್ಕದಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಾಯಿಯ ಸಮಾಧಿ ಪಕ್ಕದಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ತಾಯಿಯ ಸಮಾಧಿ ಪಕ್ಕದಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
Follow us
| Updated By: ಸಾಧು ಶ್ರೀನಾಥ್​

Updated on:Aug 26, 2023 | 12:28 PM

ಕೋಲಾರ, ಆಗಸ್ಟ್​ 26: ಯುವಕನೊಬ್ಬ (youth) ತಾಯಿಯ ಸಮಾಧಿ ಪಕ್ಕದಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶ್ರೀನಿವಾಸಪುರ ತಾಲೂಕಿನ ತಾಡಿಗೊಳ್ ಕ್ರಾಸ್​​ನಲ್ಲಿ ಪ್ರವೀಣ್​​ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಚಾಲಕನಾಗಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಪ್ರವೀಣ್​​ ತನ್ನ ಊರಿನಲ್ಲಿ ತಾಯಿಯ ಸಮಾಧಿ ಪಕ್ಕದಲ್ಲೇ (mother grave) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಸಂಬಂಧಿಕರ ಮದುವೆಗೆಂದು ಪ್ರವೀಣ್ ಕೆಲವು ದಿನಗಳ ಹಿಂದೆ ಸ್ವಗ್ರಾಮಕ್ಕೆ ಆಗಮಿಸಿದ್ದ ಎಂದು ತಿಳಿದುಬಂದಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ( Srinivasapur, Kolar).

ಚಿಕ್ಕಮಗಳೂರು: ಕೂಲಿ ಕಾರ್ಮಿಕನ ಮೇಲೆ ಕಾಡುಕೋಣ ದಾಳಿ, ವೃದ್ಧ ಕಾರ್ಮಿಕ ಗಂಭೀರ

ಚಿಕ್ಕಮಗಳೂರು: ಕೂಲಿ ಕಾರ್ಮಿಕನ ಮೇಲೆ ಕಾಡುಕೋಣ ದಾಳಿ ನಡೆಸಿದ್ದು ಕಾರ್ಮಿಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ರಸ್ತೆಯಲ್ಲಿ ಬರುತ್ತಿದ್ದ ಕಾರ್ಮಿಕನ ಮೇಲೆ ಕಾಡುಕೋಣ ಏಕಾಏಕಿ ದಾಳಿ ಮಾಡಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮುಜೇಖಾನ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಮರಿಗೌಡ (60) ಅವರನ್ನು ಕಳಸ ಸರ್ಕಾರಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳಸ ತಾಲೂಕಿನ ಕಾಡಾಂಚಿನ ಗ್ರಾಮದಲ್ಲಿ ಕಾಡುಕೋಣ ಹಾವಳಿ ಹೆಚ್ಚ್ಆಗಿದೆ. ಕಾಡು ಕೋಣ ದಾಳಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ನಕಲಿ‌ ದಾಖಲೆ ಸೃಷ್ಟಿ, ಸರ್ಕಾರಿ ಭೂಮಿ ಕಬಳಿಕೆ ಪ್ರಕರಣ- KAS ಅಧಿಕಾರಿ ಜೈಲು ಸೇರಿದ ಬೆನ್ನಲ್ಲೇ ಎಸ್ಕೇಪ್ ಆಗಿರುವ ಇನ್ನಿಬ್ಬರು ಆರೋಪಿಗಳು

ಚಿಕ್ಕಮಗಳೂರು: ನಕಲಿ‌ ದಾಖಲೆ ಸೃಷ್ಟಿಸಿ ಉಳ್ಳಿನಾಗರ ಗ್ರಾಮದಲ್ಲಿ ಸರ್ಕಾರಿ ಭೂಮಿ ಕಬಳಿಸಿರುವ ಪ್ರಕರಣದಲ್ಲಿ KAS ಅಧಿಕಾರಿ ನಿನ್ನೆ ಶುಕ್ರವಾರ ಜೈಲು ಸೇರಿದ ಬೆನ್ನಲ್ಲೇ ಇನ್ನಿಬ್ಬರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ನಿವೃತ್ತ ಶಿರಸ್ತೇದಾರ್ ನಂಜುಂಡಯ್ಯ ಮತ್ತು RI ಕಿರಣ್ ಬಂಧನಕ್ಕೆ ಶೋಧ ಮುಂದುವರೆದಿದೆ. ಇಬ್ಬರ ಬಂಧನಕ್ಕೂ ತರೀಕೆರೆ DYSP ವಿ.ಎಸ್. ಹಾಲಮೂರ್ತಿರಾವ್ ನೇತೃತ್ವದಲ್ಲಿ ಪೊಲೀಸ್ ತಂಡ ರಚನೆ ಮಾಡಲಾಗಿದೆ. KAS ಉಮೇಶ್ ಜೈಲು ಸೇರುತ್ತಿದ್ದಂತೆ ಇವರಿಬ್ಬರೂ ಎಸ್ಕೇಪ್ ಆಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಭೂ ಅಕ್ರಮ ಪ್ರಕರಣ ದಾಖಲಾಗಿದೆ. ಸಾವಿರಾರು ಎಕರೆ ಕಂದಾಯ ಭೂಮಿಯನ್ನ ಅಕ್ರಮವಾಗಿ ಪ್ರಭಾವಿಗಳಿಗೆ ಪರಭಾರೆ ಮಾಡಿರುವ ಆರೋಪ ಇವರ ಮೇಲಿದೆ.

ಕೋಲಾರ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:40 am, Sat, 26 August 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ