ಕೋಲಾರದ ಶ್ರೇಯ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿ ಸಾವು
ಇದೇ ಸೆ.24 ರಂದು ಮಂಗಳೂರಿನಲ್ಲಿ ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಕೋಲಾರದ ಶ್ರೇಯ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 23 ವರ್ಷದ ಯುವತಿಯೊಬ್ಬಳು ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.
ಕೋಲಾರ, ಸೆ.26: ಲ್ಯಾಪ್ರೋಸ್ಕೋಪಿ ಕಿಡ್ನಿ ಸ್ಟೋನ್ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಕೋಲಾರ(Kolar) ನಗರದ ಶ್ರೇಯ ಆಸ್ಪತ್ರೆಯಲ್ಲಿ ನಡೆದಿದೆ. ಮಾಲೂರು ತಾಲೂಕಿನ ನಂಬಿಗಾನಹಳ್ಳಿ ಗ್ರಾಮದ ದೀಪ್ತಿ (22) ಮೃತಪಟ್ಟ ಯುವತಿ. ಕಿಡ್ನಿ ಸ್ಟೋನ್ ಕಾರಣ ಬುಧವಾರ ಲ್ಯಾಪ್ರೋಸ್ಕೋಪಿ(Laparoscopy) ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅದರಂತೆ ಇಂದು (ಗುರುವಾರ) ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು.
ಆದರೆ, ಶಸ್ತ್ರಚಿಕಿತ್ಸೆ ಆದ ಕೆಲ ಸಮಯದ ಬಳಿಕ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರು ಪೋಷಕರಿಗೆ ತಿಳಿಸಿದ್ದಾರೆ. ಇತ್ತ ಮೃತಳ ಪೋಷಕರು ಮಾತ್ರ, ಅನಸ್ತೇಶಿಯಾ ಡೋಸ್ ಹೆಚ್ಚಾಗಿ ಯುವತಿ ಮೃತಪಟ್ಟಿದ್ದಾಳೆಂದು ಆರೋಪಿಸಿ ಆಸ್ಪತ್ರೆಯ ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಆಸ್ಪತ್ರೆ ಎದುರು ಜನ ಜಮಾಯಿಸುತ್ತಿದ್ದಂತೆ ಸ್ಥಳಕ್ಕೆ ನಗರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಮಂಗಳೂರಿನಲ್ಲಿ ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಸಾವು
ಮೊನ್ನೆಯಷ್ಟೇ ಮಂಗಳೂರಿನ ಕಂಕನಾಡಿಯ ಬೆಂದೂರ್ ವೆಲ್ನಲ್ಲಿ ಕಾಸ್ಮೆಟಿಕ್ ಸರ್ಜರಿ ವೇಳೆ ಉಳ್ಳಾಲದ ಅಕ್ಕರೆಕೆರೆ ನಿವಾಸಿಯಾದ ಮೊಹ್ಮದ್ ಮಾಝಿನ್(32) ಎಂಬಾತ ಸಾವನ್ನಪ್ಪಿದ ಘಟನೆ ನಡೆದಿತ್ತು. ತನ್ನ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲು ಬೆಂದೂರ್ ವೆಲ್ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪರೆಂಟ್ ಕ್ಲಿನಿಕ್ಗೆ ಬಂದಿದ್ದ. ಈ ವೇಳೆ ದುರ್ಘಟನೆ ನಡೆದಿತ್ತು. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಕೆಪಿಎಂಇ ಪ್ರಾಧಿಕಾರದ ಅಧ್ಯಕ್ಷ ಮುಲ್ಲೈ ಮುಗಿಲನ್ ಅವರು ಇದೀಗ ಚಿಕಿತ್ಸೆ ನೀಡಿದ್ದ ಕ್ಲಿನಿಕ್ಗೆ ಬೀಗ ಜಡಿದು, ಮುಂದಿನ ಆದೇಶದವರೆಗೆ ಪರವಾನಿಗೆ ತಡೆ ಹಿಡಿದು ಆದೇಶ ಹೊರಡಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:28 pm, Thu, 26 September 24