ಕೋಲಾರ: ಚೆನ್ನೈ-ಬೆಂಗಳೂರು ಹೈವೆಯಲ್ಲಿ ಅಪಘಾತ, ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು

ಬಂಗಾರಪೇಟೆ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇನ್ನೋವಾ ಕಾರು ಮತ್ತು ಬೈಕ್ ನಡುವಿನ ಘರ್ಷಣೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಮೂವರು ಮತ್ತು ಬೈಕ್ ಸವಾರ ಮೃತಪಟ್ಟವರು. ಘಟನೆ ಬಂಗಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೋಲಾರ, ಮಾರ್ಚ್​ 03: ಬಂಗಾರಪೇಟೆ (Bangarapet) ತಾಲ್ಲೂಕು ಕುಪ್ಪನಹಳ್ಳಿ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಇನ್ನೋವಾ ಕಾರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್​ನಲ್ಲಿದ್ದ ಕೆಜಿಎಫ್ ತಾಲೂಕಿನ ಕಮ್ಮಸಂದ್ರ ಗ್ರಾಮದ ಮಹೇಶ (45) , ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ಮೃತ ದುರ್ದೈವಿಗಳು. ಸುಶ್ಮಿತಾ, ವಿರುತ, ಸುಜಾತ, ಸುನಿಲ್​ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ವಾಪಸ್ ಗ್ರಾಮಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 8:36 am, Mon, 3 March 25

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
Loading...
Unable to load recommendations.
Follow Us