Bangarpet: ಎರಡು ಬೈಕ್​ಗಳ ನಡುವೆ ಅಪಘಾತ: ಸವಾರರಿಬ್ಬರು ಸ್ಥಳದಲ್ಲೇ ಸಾವು

|

Updated on: Apr 02, 2023 | 6:27 PM

ಎರಡು ಬೈಕ್​ಗಳ ನಡುವೆ ಅಪಘಾತ ನಡೆದಿದ್ದು, ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಪರವನಹಳ್ಳಿಯಲ್ಲಿ ನಡೆದಿದೆ.

Bangarpet: ಎರಡು ಬೈಕ್​ಗಳ ನಡುವೆ ಅಪಘಾತ: ಸವಾರರಿಬ್ಬರು ಸ್ಥಳದಲ್ಲೇ ಸಾವು
ಪ್ರಾತಿನಿಧಿಕ ಚಿತ್ರ
Image Credit source: indiatoday.in
Follow us on

ಕೋಲಾರ: ಎರಡು ಬೈಕ್​ಗಳ ನಡುವೆ ಅಪಘಾತ (accident) ನಡೆದಿದ್ದು, ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಪರವನಹಳ್ಳಿಯಲ್ಲಿ ನಡೆದಿದೆ. ಬಂಗಾರಪೇಟೆ ತಾಲೂಕಿನ ತಂಗೇಡಿಮಿಟ್ಟೆಯ ಗೋಪಾಲ್(25), ಪರವನಹಳ್ಳಿಯ ನಿವಾಸಿ ನವೀನ್(26) ಮೃತ ಸವಾರರು. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಘಟನೆ ನಡೆದಿದ್ದು, ಮೃತ ಭಾರತಿ(26) ಸಂಬಂಧಿಕರಿಂದ ಆಸ್ಪತ್ರೆ ಎದುರು ಪ್ರತಿಭಟನೆ ಮಾಡಿದ್ದಾರೆ. ನಿನ್ನೆ ಹೆರಿಗೆಗೆಂದು ಬಂಗಾರಪೇಟೆ ಆಸ್ಪತ್ರೆಗೆ ಗರ್ಭಿಣಿ ದಾಖಲಾಗಿದ್ದು, ಸೂಕ್ತ ಚಿಕಿತ್ಸೆ ನೀಡದೇ ಕೊನೆಗೆ ಖಾಸಗಿ ಆಸ್ಪತ್ರೆಗೆ ವೈದ್ಯರು ಕಳಿಸಿದ್ದರು. ಈ ವೇಳೆ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದು, ಖಾಸಗಿ ಆಸ್ಪತ್ರೆಯ ವೈದ್ಯರು ಮಗುವನ್ನು ಉಳಿಸಿದ್ದಾರೆ. ಸದ್ಯ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ಧ ಬಂಗಾರಪೇಟೆ ಠಾಣೆಗೆ ದೂರು ನೀಡಲಾಗಿದೆ.

ಹೋಟೆಲ್ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಯಾದಗಿರಿ: ಹೋಟೆಲ್ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಯಾದಗಿರಿ ನಗರದ ಶಾಸ್ತ್ರೀ ಸರ್ಕಲ್ ಬಳಿ ನಡೆದಿದೆ. ಮಹೇಶ್ (23) ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿ. ವಿಜಯಪುರ ಜಿಲ್ಲೆಯ ಸಿಂದಗಿ ನಿವಾಸಿ ಎನ್ನಲಾಗುತ್ತಿದೆ. ಹಲವು ವರ್ಷಗಳಿಂದ ಯಾದಗಿರಿ ನಗರದ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ. ಯಾದಗಿರಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Police Raid: ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ; ಬೀಡಿ, ಸಿಗರೇಟ್, ಪಾನ್ ಮಸಾಲ ಪತ್ತೆ!

ಮಂಡ್ಯದಲ್ಲಿ ದಂಪತಿ ಆತ್ಮಹತ್ಯೆಗೆ ಶರಣು

ಮಂಡ್ಯ: ಕೌಟುಂಬಿಕ ಕಲಹಕ್ಕೆ ಮನನೊಂದು ದಂಪತಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುರುಷೋತ್ತಮ (45), ವಿದ್ಯಾ(32) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ದಂಪತಿಗಳ ನಡುವಿನ ಕಲಹದಿಂದ ಬೇಸತ್ತು ಪುರುಷೋತ್ತಮ ಹಾಗೂ ವಿದ್ಯಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಪತಿ ಕೆಲಸಕ್ಕೆ ತೆರಳಿದಾಗ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, ವಿಷಯ ತಿಳಿದು ಮನೆಗೆ ಬಂದ ಪತಿ ಮನೆ ಪಕ್ಕದ ಜಮೀನಿಗೆ ತೆರಳಿ ನೇಣಿಗೆ ಕೊರಳೊಡ್ಡಿದ್ದಾರೆ. ಮೃತ ಪುರುಷೋತ್ತಮ್ ಮೈಸೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು.

ಇದನ್ನೂ ಓದಿ: ಶಿವಮೊಗ್ಗ: 20 ದಿನವಾದರೂ ನಿಗೂಢವಾಗಿ ಉಳಿದ ಮಹಿಳೆ ಸಾವಿನ ರಹಸ್ಯ, ಎಸ್ಪಿ ಮೊರೆಹೋದ ಕುಟುಂಬಸ್ಥರು

ಮೃತ ದಂಪತಿಗೆ 7 ಹಾಗೂ 5 ವರ್ಷದ ಇಬ್ಬರು ಮಕ್ಕಳಿದ್ದಾರೆ. ಇದೀಗ ತಂದೆ-ತಾಯಿ ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನ ನಡೆಸಿದ್ದಾರೆ. ಮೃತ ದೇಹಗಳನ್ನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

14ನೇ ಮಹಡಿಯಿಂದ ಬಿದ್ದು 21 ವರ್ಷದ ಯುವಕ ಸಾವು

ಮಂಗಳೂರು: 21 ವರ್ಷದ ಯುವಕನೊಬ್ಬ 14ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಗರದ ಕೆಪಿಟಿ ಬಳಿಯಲ್ಲಿ ನಡೆದಿದೆ. ಅಬ್ದುಲ್ ಸಲೀಂ ಎಂಬುವವರ ಪುತ್ರ ಮೊಹಮ್ಮದ್ ಶಾಮಲ್ (21) ಘಟನೆಯಲ್ಲಿ ಮೃತಪಟ್ಟ ದುರ್ದೈವಿ. ಘಟನೆಯ ಬಗ್ಗೆ ಮಂಗಳೂರು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಯುವಕನ ಸಾವಿಗೆ ಕಾರಣ ಏನು ಎಂದು ಇನ್ನು ಪತ್ತೆಯಾಗಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ. ಅಪಾರ್ಟ್‌ಮೆಂಟ್ 14ನೇ ಮಹಡಿಯಲ್ಲಿ ವಾಸವಿದ್ದರು. ಮಾರ್ಚ್ 30 ಮುಂಜಾನೆ 4.45 ರ ಸುಮಾರಿಗೆ ಶಾಮಲ್ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆತನ ದೇಹವನ್ನು ಎಜೆ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಮೃತರ ಚಿಕ್ಕಪ್ಪ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.