ಕೋಲಾರ: ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಬಂಧಿಯಾದ ಆರೋಪಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮುಳಬಾಗಿಲು ನಗರ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.
ಹೆಂಡತಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾನೆ ಎಂಬ ದೂರು ಹಿನ್ನೆಲೆಯಲ್ಲಿ ಪೋಲಿಸರು ಆರೋಪಿಯನ್ನು ಬಂಧಿಸಿದ್ದರು. ನಂತರ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಇರುವುದು ದೃಢವಾಗಿತ್ತು. ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದ ಪೊಲೀಸರಿಗೆ ಕೊರೊನಾ ಆತಂಕ ಶುರುವಾಗಿದೆ. ಮುಳಬಾಗಿಲು ನಗರ ಠಾಣೆ ಸೇರಿದಂತೆ 22 ಸಿಬ್ಬಂದಿ ಕ್ವಾರಂಟೈನ್ ಮಾಡಲಾಗಿದೆ.
Published On - 11:51 am, Tue, 16 June 20