ಕೋಲಾರ: ಜಾನಪದ ಗೀತಗಾಯನ ಮೂಲಕ ವಿನೂತನ ರೀತಿಯಲ್ಲಿ ವಾಯುಮಾಲಿನ್ಯ ಜಾಗೃತಿ ಅಭಿಯಾನ; ಅಧಿಕಾರಿಗಳು ಭಾಗಿ

ನಗರದ ಹೊಸ ಬಸ್ ನಿಲ್ದಾಣ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ಬುಧವಾರ ಜಾನಪದ ಜಾಗೃತಿ ಗೀತಗಾಯನದ ಮೂಲಕ ವಿನೂತನ ರೀತಿಯಲ್ಲಿ ವಾಯು ಮಾಲಿನ್ಯ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಜೀವ ಸಂಕುಲದಲ್ಲಿ ವಾಸಿಸುವ ಪ್ರತಿಯೊಂದು ಜೀವರಾಶಿಗೂ ಗಾಳಿ ಮುಖ್ಯವಾಗಿದೆ.

ಕೋಲಾರ: ಜಾನಪದ ಗೀತಗಾಯನ ಮೂಲಕ ವಿನೂತನ ರೀತಿಯಲ್ಲಿ ವಾಯುಮಾಲಿನ್ಯ ಜಾಗೃತಿ ಅಭಿಯಾನ; ಅಧಿಕಾರಿಗಳು ಭಾಗಿ
ಜಾನಪದ ಗೀತಗಾಯನ ಮೂಲಕ ವಿನೂತನ ರೀತಿಯಲ್ಲಿ ವಾಯುಮಾಲಿನ್ಯ ಜಾಗೃತಿ ಅಭಿಯಾನ
Follow us
TV9 Web
| Updated By: ಆಯೇಷಾ ಬಾನು

Updated on: Mar 16, 2022 | 6:00 PM

ಕೋಲಾರ: ಪರಿಸರವನ್ನು ವಾಯು ಮಾಲಿನ್ಯದಿಂದ ಕಾಪಾಡಿಕೊಳ್ಳುವ ಮೂಲಕ ಮುಂದಿನ ಪೀಳಿಗೆಯನ್ನು ನಾವುಗಳೇ ರಕ್ಷಿಸಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ ಎಂದು ಅಂತರಾಷ್ಟ್ರೀಯ ಕಲಾವಿದ ಗೋ.ನಾ ಸ್ವಾಮಿ ಮನವಿ ಮಾಡಿದರು. ನಗರದ ಹೊಸ ಬಸ್ ನಿಲ್ದಾಣ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ಬುಧವಾರ ಜಾನಪದ ಜಾಗೃತಿ ಗೀತಗಾಯನದ ಮೂಲಕ ವಿನೂತನ ರೀತಿಯಲ್ಲಿ ವಾಯು ಮಾಲಿನ್ಯ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಜೀವ ಸಂಕುಲದಲ್ಲಿ ವಾಸಿಸುವ ಪ್ರತಿಯೊಂದು ಜೀವರಾಶಿಗೂ ಗಾಳಿ ಮುಖ್ಯವಾಗಿದೆ. ಗಾಳಿಯನ್ನು ಉತ್ಪಾದಿಸುವ ಗಿಡಮರಗಳನ್ನು ಹೆಚ್ಚಾಗಿ ಬೆಳೆಸುವ ಮೂಲಕ ಹೊಗೆ ಬಿಡದ ಅಥವಾ ವಿದ್ಯುತ್‌ ಚಾಲಿತ ವಾಹನಗಳನ್ನು ಬಳಸುವುದು ಸೂಕ್ತವಾಗಿದೆ ಎಂದು ಕಿವಿ ಮಾತು ಹೇಳಿದರು.

ಮನುಷ್ಯ ಒಬ್ಬರಿಂದ ಒಬ್ಬರಿಗೆ ಸ್ವತಃ ಮಾಲಿನ್ಯದಿಂದಾಗುವ ಅಪಾಯಗಳ ಬಗ್ಗೆ ಅರಿವು ಮೂಡಿಸಬೇಕಾಗಿದೆ. ವಾಹನಗಳು ಹೊರ ಸೂಸುವ ವಿಷಕಾರಿ ಹೊಗೆಯಿಂದ ಪರಿಸರ ನಾಶವಾಗುತ್ತಿದೆ. ವಾಯು ಮಾಲಿನ್ಯದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳಿಗೆ ತಿಳಿ ಹೇಳಬೇಕು. ಮಂದಿನ ದಿನಗಳಲ್ಲಿ ಜನ ಶಾಪ ಹಾಕುವರು ಆದ್ದರಿಂದ ಇವತ್ತಿನಿಂದಲೇ ಪರಿಸರ ಉಳಿಸಬೇಕಿದೆ ಇದೇ ಸಂದರ್ಭದಲ್ಲಿ ಜನಪದ ಜಾಗೃತಿ ಗೀತೆ ಮೂಲಕ ವಾಯು ಮಾಲಿನ್ಯದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಕೋಲಾರ ಪ್ರಾದೇಶಿಕ ಸಾರಿಗೆ ಅಧಿಕಾರಿ ಯೋ.ಮು ಕೇಶವಪ್ಪ, ಕೆಜಿಎಫ್ ಪ್ರಾದೇಶಿಕ ಅಧಿಕಾರಿ ನಯಾಜ್ ಪಾಷಾ, ಅಧಿಕಾರಿಗಳಾದ ಆನಂದ್ , ಶ್ರೀನಿವಾಸ್, ಮುಂತಾದವರು ಇದ್ದರು.

ಇದನ್ನೂ ಓದಿ: AgustaWestland case ಮಾಜಿ ರಕ್ಷಣಾ ಕಾರ್ಯದರ್ಶಿ ಶಶಿಕಾಂತ್ ಶರ್ಮಾ ವಿರುದ್ಧ ಸಿಬಿಐ ಆರೋಪಪಟ್ಟಿ

ಒಂಬತ್ತು ದಿನಗಳ ಶಿರಸಿ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ ಆರಂಭವಾಗಿದೆ, ನೀವಿನ್ನೂ ಹೋಗಿಲ್ವಾ?

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?