ಕೋಲಾರ: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ, MP ಮುನಿಸ್ವಾಮಿ ಸೇರಿ 20ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲು

ಕೋಲಾರದಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆಗೆ ಅಡ್ಡಿ ಪಡಿಸಿದ ಆರೋಪದಲ್ಲಿ ಸಂಸದ ಮುನಿಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ವೇಣುಗೊಪಾಲ್, ಬಿಜೆಪಿ ಮುಖಂಡ ಚಂದ್ರಾರೆಡ್ಡಿ ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿದ್ದು ಶ್ರೀನಿವಾಸಪುರ ಪೊಲೀಸರು ಸುಮಾರು 15ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.

ಕೋಲಾರ: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ, MP ಮುನಿಸ್ವಾಮಿ ಸೇರಿ 20ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲು
MP ಮುನಿಸ್ವಾಮಿ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಆಯೇಷಾ ಬಾನು

Updated on: Sep 10, 2023 | 1:27 PM

ಕೋಲಾರ, ಸೆ.10: ಜಿಲ್ಲೆಯಲ್ಲಿ ನಡೆದ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದ ಆರೋಪ ಕೇಳಿ ಬಂದಿದ್ದು ಕೋಲಾರ ಸಂಸದ ಮುನಿಸ್ವಾಮಿ ಸೇರಿ ಸುಮಾರು 20ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಾಗಿದೆ. ಕೋಲಾರ ಜಿಲ್ಲೆ‌ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ವಿವಿದ ಸೆಕ್ಷನ್ ಅಡಿಯಲ್ಲಿ ಮೂರು ಪ್ರಕರಣ ದಾಖಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಕೆಲಸಕ್ಕೆ ಅಡ್ಡಿ, ಜೀವ ಬೆದರಿಕೆ, ವಾಹನಗಳ ಮೇಲೆ ಕಲ್ಲು ತೂರಾಟ, ಅರಣ್ಯ ಇಲಾಖೆ ಅಧಿಕಾರಿಗಳ ಅವಾಚ್ಯ ಶಬ್ದಗಳಿಂದ ನಿಂದನೆ ಸೇರಿದಂತೆ ಕಾನೂನು ಸುವ್ಯವಸ್ಥೆ ದಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಾಗಿದೆ,

ಕೋಲಾರದಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆಗೆ ಅಡ್ಡಿ ಪಡಿಸಿದ ಆರೋಪದಲ್ಲಿ ಸಂಸದ ಮುನಿಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ವೇಣುಗೊಪಾಲ್, ಬಿಜೆಪಿ ಮುಖಂಡ ಚಂದ್ರಾರೆಡ್ಡಿ ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿದ್ದು ಶ್ರೀನಿವಾಸಪುರ ಪೊಲೀಸರು ಸುಮಾರು 15ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಜಮೀನು ಒತ್ತುವರಿ ಪತ್ತೆಗೆ ಜಿಪಿಎಸ್​ ಮೂಲಕ ಸರ್ವೆ; ಶಿವಮೊಗ್ಗದಲ್ಲಿ ಕೃಷ್ಣ ಭೈರೇಗೌಡ ಹೇಳಿಕೆ

ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕು ಪಾಳ್ಯ ಗ್ರಾಮದ ನಿವಾಸಿಗಳಾದ ಸುಶೀಲಮ್ಮ, ಲಕ್ಷ್ಮಿದೇವಮ್ಮ ಎಂಬ ಇಬ್ಬರು ಮಹಿಳೆಯರು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದ ಆರೋಪ ಸಂಬಂಧ ಸುಶೀಲಮ್ಮ ಪತಿ ಗೋಪಲರೆಡ್ಡಿ ಮೇಲೆ FIR ದಾಖಲಾಗಿರುವ ಹಿನ್ನಲೆ ಮಹಿಳೆಯರು ಆತ್ಮಹತ್ಯೆಗೆ ಯತ್ನಿಸಿದರು. ಸುಶೀಲಮ್ಮ ಹಾಗು ಕುಟುಂಬ ನಿನ್ನೆ ಅರಣ್ಯ ಇಲಾಖೆಯ ಒತ್ತುವರಿ ತೆರವು ಕಾರ್ಯಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಸದ್ಯ ಈಗ ದೂರು ದಾಖಲಾಗಿದೆ. ಇನ್ನು ಇತ್ತ ಸಂಸದ ಮುನಿಸ್ವಾಮಿ ಮೇಲೂ FIR ದಾಖಲಾಗಿದೆ. ಅತ್ತ ಬೆಂಗಳೂರಿನಲ್ಲಿ B.S ಯಡಿಯೂರಪ್ಪರನ್ನು ಸಂಸದ ಮುನಿಸ್ವಾಮಿ ಭೇಟಿಯಾಗಿದ್ದಾರೆ. ಹೀಗಾಗಿ ರೈತರ ಪರವಾಗಿ ಶ್ರೀನಿವಾಸಪುರದಲ್ಲಿ ಹೋರಾಟಕ್ಕೆ ಆಗಮಿಸುವಂತೆ ಸಂಸದ ಮುನಿಸ್ವಾಮಿ ಅವರಿಗೆ ಮಹಿಳೆಯರು ಮನವಿ ಮಾಡಿದ್ದಾರೆ.

ಕೋಲಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಕಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ