ಉಡುಪಿ ಗ್ಯಾಂಗ್ ವಾರ್ ಬೆನ್ನಲ್ಲೇ ಕೋಲಾರದಲ್ಲೂ ಆತಂಕಕಾರಿ ಘಟನೆ: ಮಾರಕಾಸ್ತ್ರ ಹಿಡಿದು ಜನರಲ್ಲಿ ಭಯ ಹುಟ್ಟಿಸಿದ ಯುವಕ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಪ್ರತಿಪಕ್ಷಗಳು ಗಂಭೀರ ಆರೋಪ ಮಾಡುತ್ತಿರುವ ಸಂದರ್ಭದಲ್ಲೇ ಅದಕ್ಕೆ ಪುಷ್ಟಿ ನೀಡುವಂತಹ ಘಟನೆಗಳು ಅಲ್ಲಲ್ಲಿ ನಡೆಯುತ್ತಿವೆ. ಉಡುಪಿಯ ಭೀಕರ ಗ್ಯಾಂಗ್ ವಾರ್ ಘಟನೆಯ ನೆನಪು ಮಾಸುವ ಮುನ್ನವೇ ಕೋಲಾರದ ಪಿಚ್ಚಗುಂಟ್ಲಹಳ್ಳಿಯಲ್ಲಿ ಯುವಕನೊಬ್ಬ ತಲ್ವಾರ್ ಝಳಪಿಸಿದ್ದಾನೆ.

ಉಡುಪಿ ಗ್ಯಾಂಗ್ ವಾರ್ ಬೆನ್ನಲ್ಲೇ ಕೋಲಾರದಲ್ಲೂ ಆತಂಕಕಾರಿ ಘಟನೆ: ಮಾರಕಾಸ್ತ್ರ ಹಿಡಿದು ಜನರಲ್ಲಿ ಭಯ ಹುಟ್ಟಿಸಿದ ಯುವಕ
ಸಂದೀಪ್
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: Ganapathi Sharma

Updated on:May 27, 2024 | 8:18 AM

ಕೋಲಾರ, ಮೇ 27: ಉಡುಪಿಯಲ್ಲಿ ನಡೆದ ಭೀಕರ ಗ್ಯಾಂಗ್ ವಾರ್​​ (Udupi Gangwar) ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಜನತೆ ಭೀತಿಗೊಂಡಿರುವ ಸಂದರ್ಭದಲ್ಲೇ ಕೋಲಾರದಲ್ಲಿ (Kolar) ಯುವಕನೊಬ್ಬ ಮಾರಕಾಸ್ತ್ರ (Weapon) ಹಿಡಿದು ಜನರಲ್ಲಿನ ಭಯ ಹುಟ್ಟಿಸಿದ್ದಾನೆ. ಕೋಲಾರ ಜಿಲ್ಲೆಯ ಮುಳಬಾಗಿಲು (Mulabagilu) ತಾಲೂಕಿನ ಪಿಚ್ಚಗುಂಟ್ಲಹಳ್ಳಿಯಲ್ಲಿ ಘಟನೆ ನಡೆದಿದ್ದು, 27 ವರ್ಷ ವಯಸ್ಸಿನ ಸಂದೀಪ್ ಎಂಬಾತನನ್ನು ಬಂಧಿಸಲಾಗಿದೆ. ಆತನಿಂದ ತಲ್ವಾರ್ ವಶಕ್ಕೆ ಪಡೆಯಲಾಗಿದೆ.

ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ, ಜನರ ನೆಮ್ಮದಿಗೆ ಭಂಗ ತರುವ ಮತ್ತು ಗಲಭೆ ಸೃಷ್ಟಿ ಮಾಡುವ ಉದ್ದೇಶದಿಂದ ಸಂದೀಪ್ ಲಾಂಗ್ ಹಿಡಿದು ಪೋಸ್ ಕೊಡುತ್ತಿದ್ದ ಎನ್ನಲಾಗಿದೆ ಎಂದು ಮುಳಬಾಗಲು ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ತಡರಾತ್ರಿ 2 ಗಂಟೆಯ ಹೊತ್ತಿಗೆ ಎರಡು ಗ್ಯಾಂಗ್​ಗಳ ಮಧ್ಯೆ ಭೀಕರ ಕಾಳಗ ನಡೆದಿತ್ತು. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ ವೈರಲ್ ಆಗಿತ್ತು. ಇಂಥ ಕೃತ್ಯಗಳು ಹಾಗೂ ವಿಡಿಯೋಗಳಿಂದ ಪ್ರಚೋದನೆ ಪಡೆದು ರಾಜ್ಯದ ಇತರ ಕಡೆಗಳಲ್ಲಿಯೂ ಯುವಕರು ಇಂಥ ಕೃತ್ಯಕ್ಕೆ ಇಳಿಯುತ್ತಿರುವುದು ಇದೀಗ ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಒಂದೆಡೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಾಗಿ ಪ್ರತಿಪಕ್ಷಗಳು ಗಂಭೀರ ಆರೋಪ ಮಾಡುತ್ತಿವೆ. ಮತ್ತೊಂದೆಡೆ ಗ್ಯಾಂಗ್ ವಾರ್​​, ತಲ್ವಾರ್ ಪ್ರದರ್ಶನ, ಕೊಲೆಯಂಥ ಘಟನೆಗಳು ಎಗ್ಗಿಲ್ಲದೇ ನಡೆಯುತ್ತಿವೆ. ಈ ಮಧ್ಯೆ, ಕೋಲಾರದ ಪಿಚ್ಚಗುಂಟ್ಲಹಳ್ಳಿಯಲ್ಲಿಯೂ ಇದೀಗ ಭಯದ ವಾತಾವರಣ ಸೃಷ್ಟಿಯಾಗಿದೆ.

ಇದನ್ನೂ ನೋಡಿ: ಉಡುಪಿಯಲ್ಲಿ ಮೇ 18ರಂದು ನಡೆದ ಭಯಾನಕ ಗ್ಯಾಂಗ್​ವಾರ್ ದೃಶ್ಯಗಳು ಲಭ್ಯ, ಇಬ್ಬರು ಸೆರೆ

ಜೂಜಾಟದ ಅಡ್ಡೆ ಮೇಲೆ ದಾಳಿ: ಆರು ಮಂದಿಯ ಬಂಧನ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಡುವಲಪಾಳ್ಯ ಗ್ರಾಮದಲ್ಲಿ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಆರು ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ  6300 ರೂ ವಶಕ್ಕೆ ಪಡೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:13 am, Mon, 27 May 24

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ