AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದ ಮಾಜಿ ಶಾಸಕನ ಕಾರು ಮುಳಬಾಗಲಿನಲ್ಲಿ ಟ್ರ್ಯಾಕ್ಟರಿಗೆ ಡಿಕ್ಕಿ: ಯುವ ಟ್ರಾಕ್ಟರ್ ಚಾಲಕ ಸ್ಥಳದಲ್ಲೆ ಸಾವು

ಅಪಘಾತದಲ್ಲಿ ಪಲಮನೇರು ಮಾಜಿ ಶಾಸಕನ ಕಾರು ಚಾಲಕನಿಗೆ ಗಾಯಗಳಾಗಿವೆ. ಕಾರು ಸ್ಥಳದಲ್ಲೆ ಬಿಟ್ಟು ಕಾರು ಚಾಲಕ ಪರಾರಿಯಾಗಿದ್ದಾನೆ. ಮುಳಬಾಗಿಲು ಮೂಲದ ಟ್ರಾಕ್ಟರ್ ಚಾಲಕ ಸುಬ್ರಮಣಿ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಂಧ್ರದ ಮಾಜಿ ಶಾಸಕನ ಕಾರು ಮುಳಬಾಗಲಿನಲ್ಲಿ ಟ್ರ್ಯಾಕ್ಟರಿಗೆ ಡಿಕ್ಕಿ: ಯುವ ಟ್ರಾಕ್ಟರ್ ಚಾಲಕ ಸ್ಥಳದಲ್ಲೆ ಸಾವು
ಆಂಧ್ರದ ಮಾಜಿ ಶಾಸಕನ ಕಾರು ಮುಳಬಾಗಲಿನಲ್ಲಿ ಟ್ರ್ಯಾಕ್ಟರಿಗೆ ಡಿಕ್ಕಿ
TV9 Web
| Updated By: ಆಯೇಷಾ ಬಾನು|

Updated on:May 31, 2022 | 6:13 PM

Share

ಕೋಲಾರ: ಟ್ರಾಕ್ಟರ್‌ಗೆ ಆಂಧ್ರಪ್ರದೇಶದ ಎಂಎಲ್‌ಎ ಅವರ ಎಂಡೋವರ್ ಕಾರ್ ಡಿಕ್ಕಿಯಾದ ಪರಿಣಾಮ ಟ್ರಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟರೆ ಟ್ರಾಕ್ಟರ್​ ಛಿದ್ರ ಛಿದ್ರವಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಆಂಧ್ರದ ಅನಂತಪುರ ಜಿಲ್ಲೆಯ ಮಡಕಸಿರ ಶಾಸಕ ತಿಪ್ಪೆಸ್ವಾಮಿಗೆ ಸೇರಿದ ಕಾರ್ ಇದಾಗಿದ್ದು, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕಾಂತರಾಜ ವೃತ್ತದ ಬಳಿ ಶಾಸಕನ ಕಾರು ಅಪಘಾತವಾಗಿದೆ. ಭೀಕರ ರಸ್ತೆ ಅಪಘಾತದಲ್ಲಿ ಮಡಕಸಿರ ಶಾಸಕ ಹಾಗೂ ಕಾರ್ ಚಾಲಕನಿಗೆ ಗಾಯಗಳಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ತಕ್ಷಣ ಕಾರು ಸ್ಥಳದಲ್ಲೆ ಬಿಟ್ಟು ಡ್ರೈವರ್ ಹಾಗೂ ಕಾರಿನಲ್ಲಿದ್ದ ಶಾಸಕ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇನ್ನೂ ಭೀಕರ ಅಪಘಾತದಲ್ಲಿ ಮುಳಬಾಗಿಲು ಮೂಲದ ಟ್ರಾಕ್ಟರ್ ಚಾಲಕ ಸುಬ್ರಮಣಿ (35) ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಮುಳಬಾಗಿಲು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಶಾಸಕನ ಕಾರ್ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಇನ್ನೂ ತಿಪ್ಪೆಸ್ವಾಮಿ ಸಧ್ಯ ಆಂದ್ರಪ್ರದೇಶದ ಪ್ರಸ್ತುತ ಜಗನ್ ಸರ್ಕಾರದ ವೈಎಸ್‌ಅರ್ ಕಾಂಗ್ರೆಸ್‌ನ ಹಾಲಿ ಶಾಸಕನಾಗಿದ್ದು, ಶಾಸಕನು ಕಾರ್ ನಲ್ಲಿದ್ದು ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿರಬಹುದು ಎನ್ನಲಾಗಿದೆ. ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸ್​ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಭಾರತ್​ ಪೇ ಮೊಬೈಲ್ ಆ್ಯಪ್ ಹಾಕಿಕೊಡುವ ನೆಪದಲ್ಲಿ ದೋಖಾ ಕೋಲಾರ: ಭಾರತ್​ ಪೇ ಮೊಬೈಲ್ ಆ್ಯಪ್ ಹಾಕಿಕೊಡುವ ನೆಪದಲ್ಲಿ ಅಂಗಡಿ ಮಾಲೀಕರಿಗೆ ದೋಖಾ ಆಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮೊಬೈಲ್ ಆ್ಯಪ್ ಇನ್​ಸ್ಟಾಲ್ ಮಾಡಿಕೊಡುವುದಾಗಿ ಬೆಲೆ ಬಾಳುವ ಮೊಬೈಲ್ ಕಸಿದುಕೊಂಡು ಬಾಂಗ್ಲಾ ಗ್ಯಾಂಗ್ ಪರಾರಿಯಾಗಿದ್ದಾರೆ. ಕೋಲಾರ ನಗರದ ಹಲವು ಅಂಗಡಿಗಳಲ್ಲಿ ಬಾಂಗ್ಲಾ ಗ್ಯಾಂಗ್​ನಿಂದ ಕೃತ್ಯ ನಡೆದಿದೆ. ಮೊಬೈಲ್ ಕಸಿದುಕೊಂಡು ಪರಾರಿಯಾಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: Asia Cup 2022: ಏಷ್ಯಾ ಕಪ್​ಗೆ ಡೇಟ್ ಫಿಕ್ಸ್: ಭಾರತ-ಪಾಕ್ ಮತ್ತೆ ಮುಖಾಮುಖಿ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕುಡಿದ‌ ಮತ್ತಿನಲ್ಲಿ ಯುವಕ ಹುಚ್ಚಾಟ ಕೋಲಾರ ನಗರದ ನಚಿಕೇತ ನಿಲಯ ಹಾಸ್ಟೆಲ್ ಮುಂಭಾಗ ಕುಡಿದ‌ ಮತ್ತಿನಲ್ಲಿ ಯುವಕ ರಂಪಾಟ ಮಾಡಿದ್ದಾನೆ. ಕೋಲಾರ ತಾಲ್ಲೂಕು ಕೋಡಿ ರಾಮಸಂದ್ರ ಅಶೋಕ್ ಎಂಬ ಯುವಕ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು, ವಾಹನಗಳನ್ನ ತಡೆದು ರಂಪಾಟ ಮಾಡಿದ್ದು ಸ್ಥಳಕ್ಕೆ ಬಂದ ಗಲ್ ಪೇಟೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಯುವಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Published On - 3:21 pm, Tue, 31 May 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?