ಆಂಧ್ರ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿ ದಂಪತಿ ಸಾವು; 15 ಜನರಿಗೆ ಗಾಯ

ಆಂಧ್ರ ಸಾರಿಗೆ ಸಂಸ್ಥೆ ಬಸ್​​ ಪಲ್ಟಿಯಾಗಿ ದಂಪತಿ ಸಾವನ್ನಪ್ಪಿರುವ ಘಟನೆ ಮುಳಬಾಗಿಲು ತಾಲೂಕಿನ ವಿರುಪಾಕ್ಷಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ.

ಆಂಧ್ರ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿ ದಂಪತಿ ಸಾವು; 15 ಜನರಿಗೆ ಗಾಯ
ಆಂಧ್ರ ಸಾರಿಗೆ ಸಂಸ್ಥೆ ಬಸ್​ ಅಪಘಾತ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 17, 2022 | 8:45 AM

ಕೋಲಾರ: ಆಂಧ್ರ ಸಾರಿಗೆ (Andhra State Transport) ಸಂಸ್ಥೆ ಬಸ್​​ ಪಲ್ಟಿಯಾಗಿ ದಂಪತಿ ಸಾವನ್ನಪ್ಪಿರುವ ಘಟನೆ ಮುಳಬಾಗಿಲು ತಾಲೂಕಿನ ವಿರುಪಾಕ್ಷಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ. ವಿಜಯವಾಡದ ಷರೀಫ್, ಮೈಮುನ್ನಿಸಾ ಮೃತ ದುರ್ದೈವಿಗಳು. ಬಸ್​​ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಆಂಧ್ರದ ಗುಂಟೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಅವಘಡ ಸಂಭವಿಸಿದೆ.

ಅಪಘಾತ ಬಳಿಕ ಬಸ್ ಚಾಲಕ, ಕಂಡಕ್ಟರ್ ಪರಾರಿಯಾಗಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಶೆಡ್​ಗೆ ಲಾರಿ‌ ಡಿಕ್ಕಿ, ಶೆಡ್​ನ ಗೋಡೆ‌ ಕುಸಿದು ಒಂದು ವರ್ಷದ ಹೆಣ್ಣು ‌ಮಗು ಸಾವು

ರಾಮನಗರ: ಶೆಡ್​ಗೆ ಲಾರಿ‌ ಡಿಕ್ಕಿಯಾಗಿ ಶೆಡ್​ನ ಗೋಡೆ‌ ಕುಸಿದು ಒಂದು ವರ್ಷದ ಹೆಣ್ಣು ‌ಮಗು ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣದ ಹೌಸಿಂಗ್ ಬೋರ್ಡ್​ನಲ್ಲಿ ನಡೆದಿದೆ. ಒಂದು ವರ್ಷದ ಮರಿಯಮ್ಮ ಮೃತ ಮಗು. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕುಟುಂಬ ಬಳ್ಳಾರಿ ಜಿಲ್ಲೆ ಶಿರಗುಪ್ಪದಿಂದ ಕಟ್ಟದ ಕೆಲಸಕ್ಕೆಂದು ಚೆನ್ನಪಟ್ಟಣಕ್ಕೆ ಬಂದಿದ್ದರು. ತಡರಾತ್ರಿ ಮಲಗಿದ್ದ ವೇಳೆ ಗ್ರಾನೈಟ್ ತುಂಬಿಕೊಂಡು ಬಂದಿದ್ದ ಲಾರಿ ಶೆಡ್​ನ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಶೆಡ್​ನ ಗೋಡೆ ಕುಸಿದದು ಮಲಗಿದ್ದ ಮಗುವಿನ ಮೇಲೆ ಬಿದ್ದಿದೆ.

ಮೈಸೂರಿನಲ್ಲಿ ಚಿರತೆ ದಾಳಿ ಕರು ಸಾವು

ಮೈಸೂರು: ಹುಣಸೂರು ತಾಲೂಕಿನ ಕಾಳೇನಹಳ್ಳಿ ಗ್ರಾಮಕ್ಕೆ ಚಿರತೆ ನುಗ್ಗಿ ರೈತ ಓರ್ವನ ಕರುವನ್ನು ಹೊತ್ತೊಯ್ದಿದೆ. ಕಳೆದ ಎರಡು ತಿಂಗಳಿನಿಂದ ಗ್ರಾಮಕ್ಕೆ ಚಿರತೆ ಬರುತ್ತಿತ್ತು. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

Published On - 8:31 am, Wed, 17 August 22

ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್