ಕೋಲಾರ: ರಾತ್ರೋರಾತ್ರಿ ಬಾಲಕಿಯರ ಹಾಸ್ಟೆಲ್​ಗೆ ನುಗ್ಗಿದ ಯುವಕ, ಮುಂದೇನಾಯ್ತು?

ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬೇತಮಂಗಲದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್​ಗೆ ರಾತ್ರಿ ಅಪರಿಚಿತ ಯುವಕನೊಬ್ಬ ನುಗ್ಗಿದ ಘಟನೆ ನಡೆದಿತ್ತು. ಈ ಕುರಿತು ವಾರ್ಡನ್​ ಪೊಲೀಸ್​ ಠಾಣೆಗೆ ದೂರು ಕೊಟ್ಟಿದ್ದರು. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ಕೋಲಾರ: ರಾತ್ರೋರಾತ್ರಿ ಬಾಲಕಿಯರ ಹಾಸ್ಟೆಲ್​ಗೆ ನುಗ್ಗಿದ ಯುವಕ, ಮುಂದೇನಾಯ್ತು?
ಬಾಲಕಿಯರ ವಸತಿ ನಿಲಯ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 18, 2023 | 10:53 AM

ಕೋಲಾರ, ಆ.18: ಅಕ್ರಮವಾಗಿ ಬಾಲಕಿಯರ ಹಾಸ್ಟೆಲ್​ಗೆ ನುಗ್ಗಿದ ಯುವಕನನ್ನು ಬಂಧಿಸಿದ ಘಟನೆ ಕೋಲಾರ(Kolar) ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬೇತಮಂಗಲದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್​(Hostel)ನಲ್ಲಿ ನಡೆದಿದೆ. ಬೇತಮಂಗಲ ನಿವಾಸಿ ಮುರಳಿ(25) ಬಂಧಿತ ಅರೋಪಿ. ನಿನ್ನೆ (ಆ.17) ಮಧ್ಯರಾತ್ರಿ ಆರೋಪಿ ಯುವಕನೊಬ್ಬ ಬಾಲಕಿಯರ ವಸತಿ ನಿಲಯಕ್ಕೆ ನುಗ್ಗಿದ್ದ. ಈ ಘಟನೆ ಕುರಿತು ಹಾಸ್ಟೆಲ್ ವಾರ್ಡನ್ ಬೇತಮಂಗಲ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಈ ಹಿನ್ನಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಆರೋಪಿಯನ್ನು ಅರೆಸ್ಟ್​ ಮಾಡಿದ್ದಾರೆ.

ಮಧ್ಯರಾತ್ರಿ ಹಾಸ್ಟೆಲ್​ಗೆ ನುಗ್ಗಿದ ಪರಿಣಾಮ ಭಯಭೀತರಾದ ವಿದ್ಯಾರ್ಥಿಗಳು

ಇನ್ನು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಈ ಹಾಸ್ಟೆಲ್​ನಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ 6 ರಿಂದ 10 ನೇ ತರಗತಿ ಓದುತ್ತಿರುವ 60 ಕ್ಕೂ ಹೆಚ್ವು ವಿದ್ಯಾರ್ಥಿನಿಯರು ದಾಖಲಾಗಿದ್ದು, ಈ ನಡುವೆ ಮಧ್ಯರಾತ್ರಿ ಅಪರಿಚಿತ ಯುವಕ ಹಾಸ್ಟೆಲ್​ಗೆ ನುಗ್ಗಿದ ಪರಿಣಾಮ ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಹಾಸ್ಟೆಲ್​​ನಲ್ಲಿ ಭದ್ರತೆ ಹಾಗೂ ಸುರಕ್ಷತೆ ನೀಡದ ಹಾಸ್ಟೆಲ್ ವಾರ್ಡನ್ ಸೇರಿದಂತೆ ಅಧಿಕಾರಿಗಳ ವಿರುದ್ದ ಸ್ಥಳೀಯರ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದಾರೆ. ವಿಷಯ ತಿಳಿದು ಬೇತಮಂಗಲ ಗ್ರಾಮ ಪಂಚಾಯತಿ ಅಧ್ಯಕ್ಷ ವಿನೂಕಾರ್ತಿಕ್ ಸ್ಥಳಕ್ಕೆ ಭೇಟಿ ನೀಡಿ, ವಿದ್ಯಾರ್ಥಿನಿಯರಿಗೆ ಧೈರ್ಯ ಹೇಳಿದ್ದಾರೆ.

ಇದನ್ನೂ ಓದಿ:Hassan News: ನರಕಮಯವಾದ ಬಾಲಕಿಯರ ಹಾಸ್ಟೆಲ್​​! ಕನಿಷ್ಠ ಮೂಲ ಸೌಕರ್ಯವಿಲ್ಲದೇ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಮಕ್ಕಳು

ಚಲಿಸುತ್ತಿದ್ದ ಸರ್ಕಾರಿ ಬಸ್​ನಿಂದ ಬಿದ್ದು ಕಾಲೇಜು ವಿದ್ಯಾರ್ಥಿಗೆ ಗಾಯ

ಬೆಳಗಾವಿ: ಜಿಲ್ಲೆಯ ಅಥಣಿ ಬಸ್ ನಿಲ್ದಾಣದಲ್ಲಿ ಚಲಿಸುತ್ತಿದ್ದ ಸರ್ಕಾರಿ ಬಸ್​ನಿಂದ ಬಿದ್ದು ಕಾಲೇಜು ವಿದ್ಯಾರ್ಥಿಗೆ ಗಾಯವಾದ ಘಟನೆ ನಿನ್ನೆ(ಆ.17) ಸಂಜೆ ನಡೆದಿತ್ತು. ಅಥಣಿ ತಾಲೂಕಿನ ಅಜೂರ್ ಗ್ರಾಮದ ವಿಠೋಬಾ ಮಾನೆ (19)ಗೆ ಗಾಯಗೊಂಡ ವಿದ್ಯಾರ್ಥಿ. ಶಕ್ತಿ ಯೋಜನೆ ಹಿನ್ನೆಲೆ ಸಾರಿಗೆ ಬಸ್‌ಗಳು ತುಂಬಿ ತುಳುಕುತ್ತಿದ್ದು, ಈ ಹಿನ್ನೆಲೆ ಶಾಲಾ ಕಾಲೇಜು ವಿದ್ಯಾರ್ಥಿಗಳ ಪ್ರಯಾಣಕ್ಕೆ ಸಮಸ್ಯೆಯಾಗಿದೆ. ಬಸ್​ನಲ್ಲಿ ಜಾಗ ಇಲ್ಲದೆ ಬಾಗಿಲಿಗೆ ಜೋತು ಬಿದ್ದು ಪ್ರಯಾಣ ಮಾಡುವ ಪರಿಸ್ಥಿತಿ ಎದುರಾಗಿದೆ. ಇನ್ನು ಕೂಡಲೇ ಅಥಣಿಯ ಖಾಸಗಿ ಆಸ್ಪತ್ರೆಗೆ ಗಾಯಾಳು ವಿದ್ಯಾರ್ಥಿಯನ್ನು ಸೇರಿಸಲಾಗಿತ್ತು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ