7 ದಿನದ ಮಗು ಬಿಟ್ಟು ದಂಪತಿ ಆತ್ಮಹತ್ಯೆ: ಈಗ ತಾನೇ ಕಣ್ಬಿಟ್ಟು ನೋಡುತ್ತಿರುವಾಗಲೇ ಅನಾಥವಾದ ಮಗು
ಏಳ ದಿನಗಳ ಪುಟ್ಟ ಹಸುಳೆಯನ್ನು ಬಿಟ್ಟು ಬಾಣಂತಿ ಗಂಡನ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮಗ ಜನಿಸಿ ಏಳ ದಿನವಾಗಿದೆ ಅಷ್ಟೇ. ಅದ್ಯಾಕೋ ಏನು ದಂಪತಿ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದು, ಈಗ ತಾನೇ ಕಣ್ಬಿಟ್ಟಿರುವ ಮಗ ತಂದೆ ತಾಯಿ ಇಲ್ಲದೇ ಅನಾಥವಾಗಿದೆ. ಈ ಘಟನೆ ನಡೆದಿದ್ದೆಲ್ಲಿ? ಯಾರಿವರು ಎನ್ನುವ ವಿವರ ಈ ಕೆಳಗಿನಂತಿದೆ.

ಕೋಲಾರ, ಡಿಸೆಂಬರ್ 07):ಕೇವಲ ಏಳು ದಿನದ ಹಸುಗೂಸನ್ನು ಬಿಟ್ಟು ದಂಪತಿ (Couple) ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರ (Kolar) ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಉಪ್ಪಾರಪಲ್ಲಿಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಫರಿಜಾ(22), ರೆಹಮಾನ್(28) ಆತ್ಮಹತ್ಯೆಗೆ ಶರಣಾದ ದಂಪತಿ. ಮೃತ ದಂಪತಿ 15 ದಿನಗಳಿಂದಷ್ಟೇ ಶ್ರೀನಿವಾಸರೆಡ್ಡಿ ಎಂಬುವರ ಕೋಳಿ ಫಾರಂನಲ್ಲಿ ಕೆಲಸಕ್ಕೆ ಸೇರಿಕೊಂಡಿತ್ತು.ಏಳು ದಿನಗಳ ಹಿಂದಷ್ಟೇ ರೆಹಮಾನ್, ಫರಿಜಾ ದಂಪತಿಗೆ ಹೆಣ್ಣು ಹುಟ್ಟಿತ್ತು. ಆದ್ರೆ, ಇದೀಗ ಚಿಕ್ಕ ಹಸುಳೆಯನ್ನು ಬಿಟ್ಟು ದಂಪತಿ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದೆ.ಆದ್ರೆ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ರಾಯಲ್ಪಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಫರಿಜಾ ಹಾಗೂ ರೆಹಮಾನ್ ವಿಷ ಸೇವಿಸಿ ಮನೆಯಲ್ಲಿ ಅಕ್ಕಪಕ್ಕದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಮೃತಪಟ್ಟ ತಂದೆ ತಾಯಿಯ ಮಧ್ಯೆ ಏನು ಅರಿಯದ ಮಗು ಅಳುತ್ತಿದ್ದು, ಈ ದೃಶ್ಯ ನೋಡುಗರ ಕಣ್ಣಂಚಿನಲ್ಲಿ ನೀರು ತರಿಸುವಂತಿದೆ.
ಇದನ್ನೂ ಓದಿ: ಮಂಡ್ಯ: ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಕಾರು; ಮೂವರು ದುರ್ಮರಣ
ತಾಯಿಯ ಹೊಟ್ಟೆಯಿಂದ ಹೊರಬಂದು ಏಳು ದಿನವಾಗಿರುವ ಪುಟ್ಟ ಕಂದಮ್ಮ ಈಗ ತಾಣೆ ಕಣ್ಣು ಬಿಟ್ಟು ನೋಡಲು ಪ್ರಾರಂಭಿಸಿದೆ. ಆದ್ರೆ, ಇದೀಗ ಪುಟ್ಟ ಮಗುವಿಗೆ ಹಾರೈಕೆ ಮಾಡುವವರೇ ಇಲ್ಲದಂತಾಗಿದ್ದು, ಚಿಕ್ಕಂದಿನಲ್ಲೇ ಕಣ್ಣು ಬಿಟ್ಟು ನೋಡುವರಷ್ಟರಲ್ಲೇ ಮಗು ತನ್ನ ತಂದೆ ತಾಯಿಯನ್ನ ಕಳೆದುಕೊಂಡು ಅನಾಥವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:49 pm, Sun, 7 December 25




