ಕೋಲಾರ: ಒತ್ತುವರಿ ತೆರವು ವೇಳೆ ತಹಶೀಲ್ದಾರ್, ಕಂದಾಯ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ

| Updated By: ವಿವೇಕ ಬಿರಾದಾರ

Updated on: Oct 12, 2022 | 3:53 PM

ಗೋಮಾಳ ಜಾಗ ಒತ್ತುವರಿ ತೆರವು ವೇಳೆ ತಹಶೀಲ್ದಾರ್, ಕಂದಾಯ ಸಿಬ್ಬಂದಿ ಮೇಲೆ ಮೇಲೆ ಹಲ್ಲೆಗೆ ಯತ್ನಿಸಿರುವ ಬಂಗಾರಪೇಟೆ ತಾಲೂಕಿನ ಸಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೋಲಾರ: ಒತ್ತುವರಿ ತೆರವು ವೇಳೆ ತಹಶೀಲ್ದಾರ್, ಕಂದಾಯ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ
ಕಲ್ಲಿನಿಂದ ಹಲ್ಲೆ ಮಾಡಲು ಯತ್ನ
Follow us on

ಕೋಲಾರ: ಕೋಲಾರ: ಗೋಮಾಳ ಜಾಗ ಒತ್ತುವರಿ ತೆರವು ವೇಳೆ ತಹಶೀಲ್ದಾರ್, ಕಂದಾಯ ಸಿಬ್ಬಂದಿ ಮೇಲೆ ಮೇಲೆ ಹಲ್ಲೆಗೆ ಯತ್ನಿಸಿರುವ ಬಂಗಾರಪೇಟೆ ತಾಲೂಕಿನ ಸಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೆ ಮುಂದಾಗಿದ್ದ ಆರೋಪಿ ರವಿಸಿಂಗ್​ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಕ್ಕನಹಳ್ಳಿ ಗ್ರಾಮದಲ್ಲಿ ಸರ್ವೆ ನಂಬರ್ 29ರ ಸರ್ಕಾರಿ ಗೋಮಾಳ ಜಾಗವನ್ನು ಒತ್ತುವರಿ ಮಾಡಿ ಕಾಂಪೌಂಡ್​​ ನಿರ್ಮಾಣ ಮಾಡಲಾಗಿತ್ತು. ಒತ್ತುವರಿ ಮಾಡಿಕೊಂಡಿದ್ದ ಗೋಮಾಳ ಜಾಗವನ್ನು ತೆರವು ಮಾಡಲು ಮುಂದಾದಾಗ ಆರೋಪಿ ಆರೋಪಿ ರವಿಸಿಂಗ್ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RSS ಕಾರ್ಯಕರ್ತರ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ: 10 ಜನರ ಬಂಧನ

ಹಾವೇರಿ: ಅನ್ಯಕೋಮಿನ ಯುವಕರ ಗುಂಪಿನಿಂದ ಆರ್​ಎಸ್​ಎಸ್​​ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣದಲ್ಲಿ ನಿನ್ನೆ ರಾತ್ರಿ ನಡೆದಿದೆ. RSS ಪಥಸಂಚಲನದ ಮಾರ್ಗ ವೀಕ್ಷಣೆಗೆ ತೆರಳಿದ್ದಾಗ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಪಟ್ಟಣದಲ್ಲಿ ನಡಿಯುತ್ತಿರುವ ಪ್ರಶಿಕ್ಷಾ ವರ್ಗಕ್ಕೆ ಕಾರ್ಯಕರ್ತ ಬಂದಿದ್ದ ಎನ್ನಲಾಗಿದೆ.

ಘಟನೆ ವೇಳೆ ಓರ್ವ ಆರ್​ಎಸ್​ಎಸ್​​ ಕಾರ್ಯಕರ್ತನ ತಲೆಗೆ ಗಾಯವಾಗಿದ್ದು, ಮೂರು-ನಾಲ್ಕು ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ರಟ್ಟೀಹಳ್ಳಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತಾಗಿ ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, 10 ಜನರನ್ನು ಬಂಧಿಸಲಾಗಿದೆ ಎಂದು ಹಾವೇರಿ ಎಸ್​ಪಿ ಹನುಮಂತರಾಯ ಮಾಹಿತಿ ನೀಡಿದರು.

ನಿನ್ನೆ ರಾತ್ರಿ ನಡೆದ ಗಲಾಟೆಯ ವಿಡಿಯೋ ವೈರಲ್​ ಆಗಿತ್ತು. ಸದ್ಯ ಪಟ್ಟಣದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ರಟ್ಟೀಹಳ್ಳಿ ಪಟ್ಟಣದಲ್ಲಿ ಭದ್ರತೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:46 pm, Wed, 12 October 22