ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಬಂಗಾರಪೇಟೆ ಸಿಡಿಪಿಒ ರೂಪಾ
ಕಾವೇರಿ ಎಂಟರ್ಪ್ರೈಸಸ್ಗೆ ಟೆಂಡರ್ ಗುತ್ತಿಗೆ ನೀಡಲು ಸಿಡಿಪಿಒ ರೂಪಾ 10 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಮೊದಲ ಕಂತಿನಲ್ಲಿ 7,000 ರೂ. ಲಂಚ ಪಡೆದಿದ್ದರು.
ಕೋಲಾರ: ಜಿಲ್ಲೆಯ ಬಂಗಾರಪೇಟೆ ಸಿಡಿಪಿಒ ರೂಪಾ ಎಸಿಬಿ(ACB) ಬಲೆಗೆ ಬಿದ್ದಿದ್ದಾರೆ. ಬಂಗಾರಪೇಟೆಯ ಶಿಶು ಅಭಿವೃದ್ಧಿ ಇಲಾಖೆ ಕಚೇರಿಯಲ್ಲಿ 3 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಕಾವೇರಿ ಎಂಟರ್ಪ್ರೈಸಸ್ಗೆ ಟೆಂಡರ್ ಗುತ್ತಿಗೆ ನೀಡಲು ಸಿಡಿಪಿಒ ರೂಪಾ 10 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಮೊದಲ ಕಂತಿನಲ್ಲಿ 7,000 ರೂ. ಲಂಚ ಪಡೆದಿದ್ದರು. 2ನೇ ಕಂತಿನಲ್ಲಿ 3,000 ರೂ. ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಎಸಿಬಿ ಡಿವೈಎಸ್ಪಿ ಸುಧೀರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ಸಿಡಿಪಿಒ ರೂಪಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಕರ್ತವ್ಯ ನಿರ್ವಹಣೆ ವೇಳೆ ವಿದ್ಯುತ್ ಪ್ರವಹಿಸಿ ಲೈನ್ಮ್ಯಾನ್ ಸಾವು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ತಿಗಡಿ ಗ್ರಾಮದಲ್ಲಿ ಕರ್ತವ್ಯ ನಿರ್ವಹಣೆ ವೇಳೆ ವಿದ್ಯುತ್ ಪ್ರವಹಿಸಿ ಲೈನ್ಮ್ಯಾನ್ ಮೃತಪಟ್ಟಿದ್ದಾರೆ. ನಿಂಗಪ್ಪ ಕರಿಗೌಡರ್(38) ಮೃತ ದುರ್ದೈವಿ. ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಿಂಗಪ್ಪ ಕರಿಗೌಡರ್ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಕುಲಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Published On - 9:32 pm, Thu, 14 July 22