AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾರಪೇಟೆ: ನೇಣುಬಿಗಿದುಕೊಂಡು ನವ ವಿವಾಹಿತೆ ಆತ್ಮಹತ್ಯೆಗೆ ಶರಣು

ನವ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಡಿಕೆ ಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಂಗಾರಪೇಟೆ: ನೇಣುಬಿಗಿದುಕೊಂಡು ನವ ವಿವಾಹಿತೆ ಆತ್ಮಹತ್ಯೆಗೆ ಶರಣು
ಗೀತಾ ಆತ್ಮಹತ್ಯೆಗೆ ಶರಣಾದ ಮಹಿಳೆ.
TV9 Web
| Edited By: |

Updated on: Nov 07, 2022 | 6:18 PM

Share

ಕೋಲಾರ: ನವ ವಿವಾಹಿತೆ ಆತ್ಮಹತ್ಯೆಗೆ (suicide) ಶರಣಾಗಿರುವಂತಹ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಡಿಕೆ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೀತಾ (25) ಆತ್ಮಹತ್ಯೆಗೆ ಶರಣಾದ ಮಹಿಳೆ. ಮೂರು ತಿಂಗಳ ಹಿಂದಷ್ಟೇ ಪ್ರವೀಣ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ‌ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಧ್ಯಾಹ್ನ ಮನೆಗೆ ಊಟಕ್ಕೆಂದು ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.

ಗೃಹಿಣಿ ಅನುಮಾನಸ್ಪದವಾಗಿ ಶವವಾಗಿ ಪತ್ತೆ

ತುಮಕೂರು: ಗೃಹಿಣಿ ಅನುಮಾನಸ್ಪದವಾಗಿ ಶವವಾಗಿ ಪತ್ತೆಯಾಗಿರುವಂತಹ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ದಂಡಿನಶಿವರ ಬಳಿಯ ಕುರುಬರಹಳ್ಳಿಯಲ್ಲಿ ನಡೆದಿದೆ. ಆಶಾ (29) ಶವವಾಗಿ ಪತ್ತೆಯಾದ ಗೃಹಿಣಿ. ಆಶಾ ತಲೆಗೆ ಯಾವುದೋ ವಸ್ತುವಿಂದ ಬಲವಾಗಿ ಹೊಡೆದು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆನ್ನಲಾಗುತ್ತಿದೆ. ಸ್ಥಳಕ್ಕೆ ತುರುವೇಕೆರೆ ತಾಲೂಕಿನ ದಂಡಿನ ಶಿವರ ಪೊಲೀಸರು ಭೇಟಿ, ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಚಿನ್ನಾಭರಣ ಕದಿಯುತ್ತಿದ್ದ ಕಳ್ಳಿ ಬಂಧನ 

ಬೆಂಗಳೂರು: ಚಿನ್ನಾಭರಣದ ಅಂಗಡಿಗಳನ್ನೇ ಟಾರ್ಗೆಟ್ ಕಳ್ಳತನ ಮಾಡುತ್ತಿದ್ದ ಕಳ್ಳಿಯನ್ನು ಬಂಧಿಸಲಾಗಿದೆ. ಬಂಧಿತಳಿಂದ 60  ಗ್ರಾಂಗೂ ಅಧಿಕ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಟಿನ್ ಫ್ಯಾಕ್ಟರಿ ನಿವಾಸಿಯಾದ ನಂದಿಯಾ ಬಂಧಿತ ಮಹಿಳೆ. ಸಣ್ಣ ಚಿನ್ನದ ಅಂಗಡಿಗಳನ್ನೇ ಟಾರ್ಗೆಟ್ ಮಾಡುತಿದ್ದಳು. ಉಂಗುರ ಖರೀದಿ ನೆಪದಲ್ಲಿ ಚಿನ್ನ ನೊಡುತಿದ್ದಳು. ಹೆಚ್ಚಿನ ಉಂಗುರಗಳ ಇಟ್ಟು ಮಾರಾಟಗಾರರ ಗಮನ ಬೇರೆಡೆ ಸೆಳೆದು ಚಿನ್ನ ಎಗರಿಸುತಿದ್ದಳು. ಹಲವು ವರ್ಷಗಳಿಂದ ಇದೇ ಮಾದರಿಯಲ್ಲಿ ಕೃತ್ಯವೆಸಗಿದ್ದಾಳೆ. ಬಳಿಕ ಒಂದುವರೆ ವರ್ಷದ ಬಳಿಕ ಕದ್ದ ಅಂಗಡಿಯಲ್ಲೇ ಮತ್ತೇ ಚಿನ್ನ ಎಗರಿಸುವ ಯತ್ನಿಸಿದ್ದಾಳೆ. ಮಹಿಳೆ ಬಗ್ಗೆ ಅರಿತಿದ್ದ ವ್ಯಾಪಾರಿ ಕಳುವಾಗುತಿದ್ದಂತೆ ಅರಿವಿಗೆ ಬಂದಿದೆ. ಕೂಡಲೇ ಯಶವಂತಪುರ ಪೊಲೀಸರಿಗೆ ಮಾಹಿತಿ ನೀಡಿದ್ದು, ಮಾಹಿತಿ ಆಧರಿಸಿ ಪೊಲೀಸರು ಬಂಧಿಸಿದ್ದಾರೆ.

ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಬಾಗಲಕೋಟೆ: ಖಾಸಗಿ ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಜಮಖಂಡಿ ನಗರದ ಬಸವೇಶ್ವರ ನಗರದಲ್ಲಿ ನಡೆದಿದೆ. ಪ್ರಣಯ್ ಮಲ್ಲನ್ನವರ್ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ನಗರದ ಖಾಸಗಿ ಮಹಾವಿದ್ಯಾಲಯದಲ್ಲಿ ದ್ವಿತಿಯ ಪಿಯುಸಿ ಓದುತ್ತಿದ್ದ. ಮೂಲತಃ ಬೆಳಗಾವಿ‌ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ ನಿವಾಸಿ. ಆತ್ಮ‌ಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಜಮಖಂಡಿ ನಗರ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?